ಶಿವಮೊಗ್ಗ

ಗಾಂಧಿ ಹೆಸರಿಟ್ಟು ದೇಶಪ್ರೇಮ ಮೆರೆದ ಒಡೆಯರ್

Published On :

ಜೋಗ್‌ಫಾಲ್ಸ್; ತಮ್ಮ ನಿಸ್ವಾರ್ಥ ಯೋಜನೆಗಳಿಂದ, ರಾಜ್ಯಕ್ಕೆ ಮಹತ್ವದ ಕೊಡುಗೆಗಳನ್ನು ನೀಡಿದ ಹಾಗೂ ವಿದ್ಯುತ್‌ನಂತಹ ಮಹತ್ವದ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಅಹರ್ನಿಶಿ ದುಡಿದ ಮೈಸೂರು ಸಂಸ್ಥಾನದ ಮಹಾರಾಜರಾದ ಜಯಚಾಮರಾಜೇಂದ್ರ ಒಡೆಯರ್ ಅವರನ್ನು ನಿಗಮದ ಉದ್ಯೋಗಿಗಳು ಮಾತ್ರವಲ್ಲದೇ ಪ್ರತಿಯೊಬ್ಬರೂ ಅವರ ಸೇವೆಯನ್ನು ಸ್ಮರಿಸುವುದು ಅಗತ್ಯ ಎಂದು ಕರ್ನಾಟಕ ವಿದ್ಯುತ್ ನಿಗಮ ನಿಯಮಿತದ ತಾಂತ್ರಿಕ ನಿರ್ದೇಶಕ ಪಿ. ಭಾಸ್ಕರ್ ತಿಳಿಸಿದರು.
ಇಲ್ಲಿನ ಎಂಜಿಎಚ್‌ಇ ವಿದ್ಯುದಾಗಾರದಲ್ಲಿ ಜಯಚಾಮರಾಜೇಂದ್ರ ಒಡೆಯರ್ ಅವರ ಭಾವಚಿತ್ರವನ್ನು ಅನಾವರಣಗೊಳಿಸಿ ಅವರು ಮಾತನಾಡಿದರು.
ಚಿನ್ನಾಭರಣ ಅಡವಿಟ್ಟಿದ್ದರು: ಶರಾವತಿ ಯೋಜನಾ ಪ್ರದೇಶದ ಮುಖ್ಯ ಅಭಿಯಂತರ ಜಿ. ಹನುಮಂತಪ್ಪ ಮಾತನಾಡಿ, ಇಲ್ಲಿನ ಮಹಾತ್ಮ ಗಾಂಧಿ ವಿದ್ಯುದಾಗಾರದ ಯೋಜನೆಯನ್ನು ಕಾರ್ಯರೂಪಕ್ಕೆ ತರುವಲ್ಲಿ ಜಯಚಾಮರಾಜೇಂದ್ರ  ಒಡೆಯರ್ ಅವರು ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದರು. ಅದಕ್ಕಾಗಿ ಹಣದ ಅಡಚಣೆಯುಂಟಾದಾಗಲೂ ಸಹ ತಮ್ಮ ಮನೆಯವರ ಚಿನ್ನದ ಆಭರಣಗಳನ್ನು ಅಡವಿಟ್ಟು ಯೋಜನೆಯನ್ನು ಪೂರ್ಣಗೊಳಿಸುವಲ್ಲಿ ಶ್ರಮಿಸಿದ್ದರು ಎಂದು ತಿಳಿಸಿದರು.
ಅಲ್ಲದೇ ವಿದ್ಯುದಾಗಾರಕ್ಕೆ ಜಯಚಾಮರಾಜೇಂದ್ರ ಒಡೆಯರ್ ಅವರ ಹೆಸರನ್ನು ಇಡಬೇಕೆಂದು ಹಲವರು ತಿಳಿಸಿದರೂ ಅವರು ನಯವಾಗಿ ತಿರಸ್ಕರಿಸಿ ದೇಶದ ಸ್ವಾತಂತ್ರ್ಯಕ್ಕಾಗಿ ದುಡಿದ ಮಹಾತ್ಮ ಗಾಂಧೀಜಿಯವರ ಹೆಸರನ್ನು ಇಡುವ ಮೂಲಕ ದೇಶಪ್ರೇಮವನ್ನು ಮೆರೆದಿದ್ದರು ಎಂದು ಸ್ಮರಿಸಿದರು.
ಕಾರ್ಯಕ್ರಮದಲ್ಲಿ ನಿಗಮದ ಅಧೀಕ್ಷಕ ಅಭಿಯಂತರರಾದ ಪಿ.ದಾಮೋದರ್ ಭಂಡಾರಿ, ಕೆ.ಆರ್. ಶಿವಾಜಿ, ಬಾಬು ರಾಜೇಂದ್ರ ಪ್ರಸಾದ್ ಮತ್ತಿತರರು ಹಾಜರಿದ್ದರು.
ಇ.ಎಂ. ಜಯಂತಿ ಪ್ರಾರ್ಥಿಸಿ, ಎಂ.ಎಸ್. ಸತೀಶ್ ಸ್ವಾಗತಿಸಿ, ನಿರೂಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.