ಶಿವಮೊಗ್ಗ

ಇಂದು ಕುಡಿಯುವ ನೀರು ಸಮಸ್ಯೆ ಸಭೆ

Published On :

ಕ.ಪ್ರ.ವಾರ್ತೆ, ಶಿವಮೊಗ್ಗ, ಮೇ 14 ಚುನಾವಣೆ ಕಾರ್ಯದಲ್ಲೇ ಪೂರ್ಣ ಪ್ರಮಾಣದಲ್ಲಿ ತೊಡಗಿಸಿಕೊಂಡಿದ್ದ ಜಿಲ್ಲಾಡಳಿತ ಕೊನೆಗೂ ಜಿಲ್ಲೆಯ ಕುಡಿವ ನೀರಿನ ಸಮಸ್ಯೆ ಪರಿಹಾರದತ್ತ ದೃಷ್ಟಿ ನೆಟ್ಟಿದೆ.
  ಜಿಲ್ಲೆಯ ವಿವಿಧ ಕಡೆಗಳಲ್ಲಿ ಬಿಗಡಾಯಿಸಿರುವ ಕುಡಿವ ನೀರಿನ ಸಮಸ್ಯೆಯ ಅಗಾಧತೆ ಹಾಗೂ ಸಮಸ್ಯೆಗೆ ಪರಿಹಾರ ಹುಡುಕುವ ಸಂಬಂಧ ಬುಧವಾರ ಮಹತ್ವದ ಸಭೆ ಕರೆಯಲಾಗಿದೆ.
   ಜಿಲ್ಲಾಧಿಕಾರಿ ವಿಪುಲ್ ಬನ್ಸಲ್ ಅಧ್ಯಕ್ಷತೆಯಲ್ಲಿ ವಿವಿಧ ಇಲಾಖೆ ಅಧಿಕಾರಿಗಳ ತುರ್ತು ಸಭೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ. ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೇರಿದಂತೆ ಜಿಲ್ಲೆಯ ಎಲ್ಲಾ ತಾಲೂಕುಗಳ ಪ್ರಮುಖ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಸಾಗರದಲ್ಲಿ ತೀವ್ರ ಸಮಸ್ಯೆ: ಸಾಗರ ಪಟ್ಟಣ, ತೀರ್ಥಹಳ್ಳಿ, ಸೊರಬ, ಶಿಕಾರಿಪುರ ತಾಲೂಕಿನ ವಿವಿಧೆಡೆ ಕುಡಿಯುವ ನೀರಿನ ಅಭಾವ ಕಂಡುಬಂದಿದೆ.    ವಿಶೇಷವಾಗಿ ಸಾಗರ ಪಟ್ಟಣದಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದೆ ಎಂಬುದನ್ನು ಜಿಲ್ಲಾಡಳಿತ ಒಪ್ಪಿಕೊಂಡಿದ್ದು, ಅಲ್ಲಿಗೆ ನೀರು ಪೂರೈಸುವ ಬಸವನಹೊಳೆ ಡ್ಯಾಂನಲ್ಲಿ ನೀರು ಸಂಪೂರ್ಣ  ಖಾಲಿಯಾಗಿದೆ. ಇದರಿಂದ ಕುಡಿಯುವ ನೀರು ಪೂರೈಕೆ ಮೇಲೆ ವ್ಯತ್ಯಯ ಉಂಟಾಗಿದೆ. ಪ್ರಸ್ತುತ 12 ಟ್ಯಾಂಕರ್ ಮೂಲಕ ದಿ ನನಿತ್ಯ ಸಾಗರ ಪಟ್ಟಣದ ನಾಗರಿಕರಿಗೆ Ú ನೀರು ಪೂರೈಕೆ ಮಾಡಲಾಗುತ್ತಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.