'ಬಸವಣ್ಣನವರ ತತ್ವ ಅನುಕರಣೀಯ'
ಕ.ಪ್ರ.ವಾರ್ತೆ, ಶಿರಾಳಕೊಪ್ಪ, ಮೇ 14
ಎಲ್ಲ ಧರ್ಮಗಳನ್ನೂ ಸಮಾನವಾಗಿ ಕಂಡಂತಹ ಮಹಾನ್ ಮಾನವತಾವಾದಿಯಾದ ಬಸವಣ್ಣನವರ ತತ್ವ ಆದರ್ಶಗಳನ್ನು ನಾವು ಅಳವಡಿಸಿಕೊಳ್ಳಬೇಕು ಎಂದು ಶಿರಾಳಕೊಪ್ಪ ವಿರಕ್ತಮಠದ ಸಿದ್ದೇಶ್ವರ ಶ್ರೀ ಹೇಳಿದರು.
ಶಿರಾಳಕೊಪ್ಪ ಪಟ್ಟಣದಲ್ಲಿ ಬಸವೇಶ್ವರ ಜಯಂತಿ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಎಲ್ಲ ವರ್ಗದ ಜನರನ್ನು ಸಮಾನವಾಗಿ ಕಂಡು ಎಲ್ಲರೂ ಒಂದೇ ಎಂದು ಪರಿಗಣಿಸಿ ಮಾನವತಾ ವಾದವನ್ನು ಮೆರದಂತಹ ವ್ಯಕ್ತಿ ಬಸವಣ್ಣನವರು. ಅವರ ತತ್ವ ಆದರ್ಶಗಳನ್ನು ನಾವು ನಮ್ಮ ನಿಜ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಬಸವೇಶ್ವರ ಭಾವಚಿತ್ರ ಅಲಂಕರಿಸಿದ ಎತ್ತುಗಳ ಮೆರವಣಿಗೆಯನ್ನು ಡೊಳ್ಳು ಹಾಗೂ ಇತರ ವಾದ್ಯಗಳೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಆಕರ್ಷಕ ಮೆರವಣಿಗೆ ನಡೆಸಲಾಯಿತು.
ವಿಶೇಷವಾಗಿ ಮಹಿಳಾ ಅಕ್ಕನ ಬಳಗದವರು ಈ ಬಾರಿ ಮೆರವಣಿಗೆಯಲ್ಲಿ ಭಾಗವಹಿಸಿ ಗಮನ ಸೆಳೆದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ ರಾಸುಗಳಿಗೆ ಬಹುಮಾನ ವಿತರಿಸಲಾಯಿತು. ಬಸವಜಯಂತಿ ಉತ್ಸವ ಸಮಿತಿ ಅಧ್ಯಕ್ಷ ಅಕ್ಕಿ ಪ್ರಭಣ್ಣ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಪಪಂ ಸದಸ್ಯರು ಹಾಗೂ ಪಟ್ಟಣದ ಪ್ರಮುಖರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

