ನಾಲ್ವರು ಬಿಜೆಪಿ ಪ.ಪಂ. ಸದಸ್ಯರ ಅಮಾನತು ರದ್ದು
ಕ.ಪ್ರ.ವಾರ್ತ್ಣೆ ಹೊನ್ನಾಳ್ಣಿಮೇ 1
ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಅಮಾನತುಗೊಂಡಿರುವ ಹೊನ್ನಾಳಿ ಪಟ್ಟಣ ಪಂಚಾಯಿತಿಯ ನಾಲ್ವರು ಬಿಜೆಪಿ ಸದಸ್ಯರ ಅಮಾನತನ್ನು ವಾಪಸ್ ಪಡೆಯುವುದಾಗಿ ದಾವಣಗೆರೆ ಜಿಲ್ಲಾ ಬಿಜೆಪಿ ಅಧ್ಯಕ್ಷ ಗುರುಸಿದ್ದನ ಗೌಡ ತಿಳಿಸಿದ್ದಾರೆ.
ಅಮಾನತ್ತು ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ರಿಕೆ ದೂರವಾಣಿ ಮೂಲಕ ಸಂಪರ್ಕಿಸಿದಾಗ ಪ್ರತಿಕ್ರಿಯೆ ನೀಡಿದ ಗುರುಸಿದ್ದನ ಗೌಡ ಅವರು, ಪಟ್ಟಣ ಪಂಚಾಯತಿಯ ಬಿಜೆಪಿ ಸದಸ್ಯರಾದ ಕೆ.ಪಿ. ಕುಬೇರಪ್ಪ, ಸುರೇಶ್ ಹೊಸಕೇರಿ, ಸರಳಿನಮನೆ ಡಿ. ಮಂಜುನಾಥ, ಹಾಗೂ ಪ್ರಶಾಂತ್ ಬಗ್ಗೆ ಮಾಹಿತಿ ಪಡೆದಿದ್ದು ಅವರ ಅಮಾನತು ಅದೇಶವನ್ನು ಹಿಂಪಡೆಯಲು ಕ್ರಮ ಕೈಗೊಳ್ಳಲಾಗಿದೆ ಎಂದರು.
ತಪ್ಪು ಮಾಹಿತಿ: ಇದಕ್ಕೆ ಮುನ್ನ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪ.ಪಂ. ಸದಸ್ಯ ಕೆ.ಪಿ. ಕುಬೇರಪ್ಪ, ತಾವೂ ಸೇರಿದಂತೆ ಪಕ್ಷದ ನಾಲ್ವರು ಸದಸ್ಯರ ವಿರುದ್ಧ ಪಕ್ಷ ವಿರೋಧಿ ಚಟುವಟಿಕೆ ಆರೋಪ ಮಾಡಿ ಪಕ್ಷದ ವರಿಷ್ಠರಿಗೆ ತಪ್ಪು ಮಾಹಿತಿ ರವಾನೆಯಾಗಿತ್ತು. ಆದರೆ, ತಾವುಗಳು ಎಂದಿಗೂ ಬಿಜೆಪಿ ಪಕ್ಷಕ್ಕೆ ನಿಷ್ಠರಾಗಿದ್ದು ಯಾವುದೇ ರೀತಿಯ ಪಕ್ಷವಿರೋಧಿ ಚಟುವಟಿಕೆಗಳನ್ನು ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು. ಅಮಾನತ್ತು ಕ್ರಮಕ್ಕೆ ಒಳಗಾಗಿದ್ದ ತಾವುಗಳು ನೇರವಾಗಿ ಜಿಲ್ಲಾಧ್ಯಕ್ಷರನ್ನು ಕಂಡು ವಸ್ತುಸ್ಥಿತಿಯ ಬಗ್ಗೆ ಮನವರಿಕೆ ಮಾಡಿದ್ದು ಜಿಲ್ಲಾಧ್ಯಕ್ಷರೂ ಕೂಡ ತಮ್ಮ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಕೆ.ಪಿ. ಕುಬೇರಪ್ಪ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಪಟ್ಟಣ ಪಂಚಾಯಿತಿ ಸದಸ್ಯರಾದ ಸುರೇಶ್ ಹೊಸಕೇರಿ, ಸರಳಿನಮನೆ ಡಿ. ಮಂಜನಾಥ್, ಗಿರೀಶ್ ಅವರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

