ಅರ್ಜಿ ಆಹ್ವಾನ
ಶಿವಮೊಗ್ಗ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ನಗರದ ಕೋಟೆ ರಸ್ತೆಯಲ್ಲಿರುವ ಮಹಿಳಾ ಹೊಲಿಗೆ ತರಬೇತಿ ಕೇಂದ್ರದಲ್ಲಿ ಪ್ರಸಕ್ತ ಸಾಲಿನಲ್ಲಿ ಹೊಲಿಗೆ ತರಬೇತಿ ನೀಡಲು ಶಿವಮೊಗ್ಗ ತಾಲೂಕಿನ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಂದು ವರ್ಷದ ಅವಧಿಯ ತರಬೇತಿ ಇದಾಗಿದ್ದು, ಅರ್ಹ 20ಮಹಿಳಾ ಅಭ್ಯರ್ಥಿಗಳನ್ನು ತರಬೇತಿಗೆ ಆಯ್ಕೆ ಮಾಡಲಾಗುವುದು.
ಆಯ್ಕೆಯಾದವರಿಗೆ ರು. 300 ತರಬೇತಿ ಭತ್ಯೆ ನೀಡಲಾಗುವುದು. ತರಬೇತಿ ಅಂತ್ಯದಲ್ಲಿ ಇಲಾಖೆಯಿಂದ ಪರೀಕ್ಷೆ ನಡೆಸಲಾಗುವುದು. ತರಬೇತಿ ಪಡೆಯಲಿಚ್ಚಿಸುವ ಅಭ್ಯರ್ಥಿಗಳು ಪರಿಶಿಷ್ಟ ಜಾತಿ, ಪಂಗಡ ಅಥವಾ ಹಿಂದುಳಿದ ವರ್ಗಗಳಿಗೆ ಸೇರಿದವರಾಗಿರಬೇಕು. ಪ್ರವರ್ಗ-1 ಮತ್ತು ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗೆ ಆದಾಯ ಮಿತಿಯಿಂದ ವಿನಾಯಿತಿ ನೀಡಲಾಗಿದೆ. ಹಿಂದುಳಿದ ವರ್ಗಗಳ ಅಭ್ಯರ್ಥಿಗಳ ವಾರ್ಷಿಕ ವರಮಾನ ರು. 15,000 ಮೀರಿರಬಾರದು. ಅಭ್ಯರ್ಥಿ ಕನಿಷ್ಠ 7ನೇ ತರಗತಿಯಲ್ಲಿ ಉತ್ತೀರ್ಣರಾಗಿದ್ದು, 18ರಿಂದ 35ವರ್ಷ ವಯೋವುತಿಯೊಳಗಿನವರಾಗಿರಬೇಕು. ಕನ್ನಡ ಓದು-ಬರಹ ಬಲ್ಲವರಾಗಿರಬೇಕು. ಗ್ರಾಮೀಣ ಮಹಿಳಾ ಅಭ್ಯರ್ಥಿಗಳಿಗೆ, ವಿಧವೆಯರು ಮತ್ತು ನಿರ್ಗತಿಕ ಮಹಿಳೆಯರಿಗೆ ಆದ್ಯತೆ ನೀಡಲಾಗುವುದು. ತರಬೇತಿ ಪಡೆಯಲು ಇಚ್ಚಿಸುವ ಮಹಿಳಾ ಅಭ್ಯರ್ಥಿಗಳು ಅರ್ಜಿಯನ್ನು ನಗರದ ಕೋಟೆ ರಸ್ತೆಯ ಹೊಲಿಗೆ ತರಬೇತಿ ಕೇಂದ್ರ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವಿದ್ಯಾರ್ಥಿನಿಲಯಗಳಿಂದ ಪಡೆದು, ಅಗತ್ಯ ದಾಖಲೆಗಳೊಂದಿಗೆ ಮೇ 28ರೊಳಗಾಗಿ ಸಂಬಂಧಿಸಿದ ಇಲಾಖೆ ಮತ್ತು ಕೇಂದ್ರಕ್ಕೆ ಸಲ್ಲಿಸುವಂತೆ ತಾಲೂಕಿನ ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

