ಈಸೂರು ರಾಜಿನಾಮೆ
ಶಿವಮೊಗ್ಗ: ಕಾಗೋಡು ತಿಮ್ಮಪ್ಪ ಅವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ಕಾಂಗ್ರೆಸ್ ಮುಖಂಡ, ಜಿ.ಪಂ. ಸದಸ್ಯ ಈಸೂರು ಬಸವರಾಜ್ ಅವರು ಜಿ.ಪಂ. ಸದಸ್ಯತ್ವಕ್ಕೆ ರಾಜಿನಾಮೆ ಸಲ್ಲಿಸಿದ್ದಾರೆ.
ಶಿವಮೊಗ್ಗ ಜಿಲ್ಲೆ ಭೀಕರ ಬರಗಾಲಕ್ಕೆ ತುತ್ತಾಗಿ ಜನ ಜಾನುವಾರುಗಳಿಗೆ ಕುಡಿಯಲು ನೀರಿಲ್ಲವಾಗಿದೆ. ಸಕಾಲಕ್ಕೆ ಮಳೆ ಬಾರದೇ ರೈತರು ಕಂಗಾಲಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಜಿಲ್ಲೆಯ ಮತ್ಸದ್ದಿ ರಾಜಕಾರಣಿ, ಕಾಂಗ್ರೆಸ್ ಕಟ್ಟಾಳು ಕಾಗೋಡು ತಿಮ್ಮಪ್ಪ ಅವರಿಗೆ ಮಂತ್ರಿಸ್ಥಾನ ನೀಡಿ ಸಂಕಷ್ಟಗಳಿಗೆ ಪರಿಹಾರ ಹುಡುಕುವುದನ್ನು ಬಿಟ್ಟು ಅವರಿಗೆ ಆ ಸ್ಥಾನ ತಪ್ಪಿಸಲಾಗುತ್ತಿದೆ. ಇದನ್ನು ವಿರೋಧಿಸಿ ನನ್ನ ಜಿ.ಪಂ. ಸದಸ್ಯತ್ವಕ್ಕೆ ರಾಜಿನಾಮೆ ನೀಡುತ್ತಿದ್ದೇನೆ ಎಂದುಹೇಳಿದ್ದಾರೆ.
ಅವರು ರಾಜಿನಾಮೆ ಪತ್ರವನ್ನು ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಅವರಿಗೆ ಕಳುಹಿಸಿದ್ದು, ಕೂಡಲೇ ಶಿವಮೊಗ್ಗ ಜಿಪಂ ಅಧ್ಯಕ್ಷರಿಗೆ ಕಳುಹಿಸಿ ಅಂಗೀಕರಿಸಲು ಒತ್ತಾಯಿಸುವಂತೆ ಕೋರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

