ಶಿವಮೊಗ್ಗ

ಕಳವಿಗೆ ಯತ್ನಿಸಿದ ಯುವನಿಗೆ ಧರ್ಮದೇಟು

Published On :

ಸಾಗರ: ಪಟ್ಟಣದ ಇಂದಿರಾನಗರ ಬಡಾವಣೆಯ ಮನೆಯೊಂದರಲ್ಲಿ ಮಹಿಳೆಯೊಬ್ಬರೆ ಇರುವುದನ್ನು ಗಮನಿಸಿ ಮನೆಗೆ ನುಗ್ಗಿ ದರೋಡೆ ಮಾಡಲು ಯತ್ನಿಸಿದ ಆರೋಪದ ಮೇಲೆ ಚೇತನ್ ಎಂಬ ಯುವಕನನ್ನು ಸಾರ್ವಜನಿಕರೇ ಹಿಡಿದು ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿರುವ ಘಟನೆ ನಡೆದಿದೆ.
ಇಂದಿರಾನಗರದಲ್ಲಿ ಭಾರತಿ ಎಂಬುವವರ ಮನೆಗೆ ನೀರು ಕೇಳುವ ನೆಪದಲ್ಲಿ ಹೋದ ಚೇತನ್ ಮಹಿಳೆ ನೀರು ತಂದುಕೊಟ್ಟಾಗ ಅವರ ಕಣ್ಣಿಗೆ ಖಾರದ ಪುಡಿ ಎರಚಿದ್ದಾನೆ. ನಂತರ ಅವರ ಕೊರಳನಲ್ಲಿದ್ದ ಮಾಂಗಲ್ಯ ಸರ ಹಾಗೂ ಕೈಯಲ್ಲಿದ್ದ ಚಿನ್ನದ ಬಳೆಗಳನ್ನು ದೋಚಲು ಯತ್ನಿಸಿದ್ದಾನೆ ಎನ್ನಲಾಗಿದೆ.
ಈ ಸಂದರ್ಭದಲ್ಲಿ ಚೇತನನನ್ನು ಮನೆಯೊಳಕ್ಕೆ ತಳ್ಳಿದ ಭಾರತಿ ಅವರು ಹೊರಗೆ ಬಂದು ನೆರವಿಗೆ ಕೂಗಿಕೊಂಡಾಗ ಧಾವಿಸಿದ ಸಾರ್ವಜನಿಕರು ಯುವಕನನ್ನು ಹಿಡಿದು ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ್ದಾರೆ.
  ದರೋಡೆಗೆ ಯತ್ನ ಪ್ರಕರಣ ದಾಖಲಿಸಿರುವ ಪೇಟೆ ಠಾಣೆ ಪೊಲೀಸರು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.