ಸುದ್ದಿ ಸಂಕ್ಷೇಪ
ವಾಯುಸೇನೆ ಭರ್ತಿ ರ್ಯಾಲಿ
ಶಿವಮೊಗ್ಗ: ಬೆಂಗಳೂರಿನ ವಾಯುಸೇನಾ ನೇಮಕಾತಿ ಘಟಕ ಭಾರತೀಯ ವಾಯುಸೇನೆಯಲ್ಲಿ ಖಾಲಿ ಇರುವ ತಾಂತ್ರಿಕ ವಿಭಾಗದ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಉದ್ದೇಶಿಸಿದ್ದು, ಅರ್ಹ ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆಯೊಂದಿಗೆ ಗಣಿತ, ಭೌತ ಶಾಸ್ತ್ರ ಮತ್ತು ಆಂಗ್ಲಭಾಷೆ ವಿಷಯಗಳಲ್ಲಿ ಕನಿಷ್ಠ ಶೇ.50 ಅಂಕದೊಂದಿಗೆ ಉತ್ತೀರ್ಣರಾಗಿರಬೇಕು. 3 ವರ್ಷಗಳ ಡಿಪ್ಲೋಮಾ (ಮೆಕ್ಯಾನಿಕಲ್, ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಸ್, ಆಟೋಮೊಬೈಲ್, ಕಂಪ್ಯೂಟರ್ ವಿಜ್ಞಾನ, ಇನ್ಟ್ರ್ಸುಮೆಂಟೇಷನ್ ತಂತ್ರಜ್ಞಾನ ಮತ್ತು ಇನ್ಫಾರ್ಮೇಷ್ನ್ ತಂತ್ರಜ್ಞಾನ) ಪದವಿ ಪಡೆದಿರಬೇಕು.
ಅಭ್ಯರ್ಥಿ 1993ರ ಸೆಪ್ಟೆಂಬರ್ನಿಂದ 1996ರ ಡಿಸೆಂಬರ್ನೊಳಗೆ ಜನಿಸಿದವರಾಗಿರಬೇಕು. ಆಸಕ್ತ ಅಭ್ಯರ್ಥಿಗಳು 2013ರ ಮೇ 23ರೊಳಗಾಗಿ ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಅಧ್ಯಕ್ಷರು, ಕೇಂದ್ರೀಯ ವಾಯುಸೇನೆ ನೇಮಕಾತಿ ಘಟಕ, ಅಂಚೆಪೆಟ್ಟಿಗೆ ಸಂಖ್ಯೆ 11807, ನವದೆಹಲಿ-110010 ವಿಳಾಸಕ್ಕೆ ಸಲ್ಲಿಸಬೇಕು. ವಿವರಗಳಿಗಾಗಿ 081-25592199
ಅರ್ಜಿ ಆಹ್ವಾನ
ಶಿವಮೊಗ್ಗ: ಕನ್ನಡ ಪುಸ್ತಕ ಪ್ರಾಧಿಕಾರ 2010ನೇ ಸಾಲಿನಲ್ಲಿ ಪ್ರಥಮ ಆವೃತ್ತಿಯಾಗಿ ಮುದ್ರಣಗೊಂಡ ಕನ್ನಡ ಪುಸ್ತಕಗಳನ್ನು ಪ್ರಾಧಿಕಾರದ ಸಗಟು ಪುಸ್ತಕ ಖರೀದಿ ಯೋಜನೆಯಡಿ ಖರೀದಿಸಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ನಿಗದಿತ ನಮೂನೆಯ ಅರ್ಜಿಯನ್ನು ಆಯಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಿಂದ ಉಚಿತವಾಗಿ ಪಡೆದು, ಅಗತ್ಯ ದಾಖಲೆಗಳೊಂದಿಗೆ ಜೂನ್ 15ರೊಳಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560002 ಇವರಿಗೆ ಸಲ್ಲಿಸಬಹುದು. ವಿವರಗಳಿಗಾಗಿ- 081-22484516
ಸಂವಾದ ಕಾರ್ಯಕ್ರಮ
ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾನಿಲಯದ ಸಮಾಜಕಾರ್ಯ ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿಗಳು 18ರಂದು ಬೆಳಿಗ್ಗೆ 11ಗಂಟೆಗೆ ನಗರದ ಸಹ್ಯಾದ್ರಿ ಕಾಲೇಜು ಆವರಣದ ಪ್ರೊ. ಸಿಎನ್ಆರ್ ರಾವ್ ಸಭಾಂಗಣದಲ್ಲಿ ಜಿ.ಎಸ್. ಯುಧಿಷ್ಠರ ಅವರ ಸ್ಥಿತಿ ಕಾದಂಬರಿ ಕುರಿತು ಸಂವಾದ ಕಾರ್ಯಕ್ರಮ ಏರ್ಪಡಿಸಿದ್ದಾರೆ. ಮುಖ್ಯ ಅತಿಥಿಯಾಗಿ ಸಹ್ಯಾದ್ರಿ ಕಲಾ ಮತ್ತು ವಾಣಿಜ್ಯ ಕಾಲೇಜಿನ ಪ್ರಾಂಶುಪಾಲ ಪ್ರೊ. ಜಯದೇವಪ್ಪ, ಭಾಷಾ ವಿಜ್ಞಾನ ವಿಭಾಗದ ಪ್ರಾಧ್ಯಪಕ ಡಾ. ಮೇಟಿ ಮಲ್ಲಿಕಾರ್ಜುನ, ಡಾ. ಮೋಹನ್ ಚಂದ್ರಗುತ್ತಿ ಮತ್ತಿತರರು ಪಾಲ್ಗೊಳ್ಳುವರು. ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಸಾಹಿತಿ ರಾಘವೇಂದ್ರ ಪಾಟೀಲ್ ಅಧ್ಯಕ್ಷತೆ ವಹಿಸುವರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

