ಸುದ್ದಿ ಸಂಕ್ಷೇಪ
ಜೀರ್ಣಾಂಗ ಉಚಿತ ತಪಾಸಣೆ ಶಿಬಿರ
ಶಿವಮೊಗ್ಗ: ಹರಕೆರೆಯ ಸಹ್ಯಾದ್ರಿ ನಾರಾಯಣ ಹೃದಯಾಲಯ ಆಸ್ಪತ್ರೆಯಲ್ಲಿ ಮೇ 10 ರಿಂದ 30ರವರೆಗೆ ಉಚಿತ ಜೀರ್ಣಾಂಗ, ಪಿತ್ತ ಜನಕಾಂಗ ತಪಾಸಣೆ ಶಿಬಿರ ಹಮ್ಮಿಕೊಂಡಿದೆ. ಹಿಮೋಗ್ಲೋಬಿನ್, ಈಎಸ್ಆರ್, ಎಚ್ಬಿಎಸ್ಎಜಿ ಅಲ್ಟ್ರಾಸೌಂಡ್ ಮೂಲಕ ಚಿಕಿತ್ಸೆ ನೀಡಲಾಗುವುದು. ಶಿಬಿರದಲ್ಲಿ ಪಿತ್ತ ಕಾಯಿಲೆ, ಹೊಟ್ಟೆ ನೋವು, ಉರಿ, ಮತ್ತಿತರ ಕಾಯಿಲೆಗಳ ಬಗ್ಗೆ ಮಾಹಿತಿ, ಚಿಕಿತ್ಸೆ ನೀಡಲಾಗುವುದು. ಶೇ.50ರಷ್ಟು ರಿಯಾಯಿತಿ ದರದಲ್ಲಿ ಚಿಕಿತ್ಸೆ ನೀಡಲಾಗುವುದು ಎಂದು ಆಸ್ಪತ್ರೆ ವೈದ್ಯ ಡಾ. ಶ್ರೀನಿವಾಸ ಕರೆ ತಿಳಿಸಿದ್ದಾರೆ. ವಿವರಗಳಿಗಾಗಿ- 08182-221588
ಉಚಿತ ನೇತ್ರ ಶಸ್ತ್ರಚಿಕಿತ್ಸಾ ಶಿಬಿರ
ಶಿವಮೊಗ್ಗ: ಮೆಗ್ಗಾನ್ ಬೋಧನಾ ಆಸ್ಪತ್ರೆಯ ಕಣ್ಣಿನ ವಿಭಾಗದಲ್ಲಿ ನಿರಂತರವಾಗಿ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗಳು ಯಶಸ್ವಿಯಾಗಿ ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರತಿ ಮಂಗಳವಾರ ಉಚಿತ ನೇತ್ರ ತಪಾಸಣೆ ಶಿಬಿರ ಹಮ್ಮಿಕೊಳ್ಳಲಾಗಿದೆ. ಅಗತ್ಯವಿದಲ್ಲಿ ಒಳರೋಗಿಗಳಾಗಿ ದಾಖಲು ಮಾಡಿಕೊಂಡು ಪ್ರತಿ ಬುಧವಾರ ಉಚಿತವಾಗಿ ನೇತ್ರ ಶಸ್ತ್ರಚಿಕಿತ್ಸೆ ಮಾಡಲಾಗುವುದು. ಈ ಸಂಬಂಧ ಶಿಬಿರದ ಪ್ರಯೋಜನವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದು ಮೆಗ್ಗಾನ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಬಿ.ಜಿ. ಲೇಪಾಕ್ಷಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

