ಕ್ಷೇತ್ರಕ್ಕೆ ಸಂದ ಗೌರವ: ಸಚಿವ ಕಿಮ್ಮನೆ
ಹೊಸನಗರ: ಸಿದ್ದರಾಮಯ್ಯ ಸಂಪುಟದಲ್ಲಿ ನನ್ನನ್ನು ಗುರುತಿಸಿ ಸಚಿವ ಸ್ಥಾನ ನೀಡಿರುವುದು ಕ್ಷೇತ್ರಕ್ಕೆ ಸಂದ ಗೌರವ ಎಂದು ನೂತನ ರಾಜ್ಯ ಸಚಿವ ಕಿಮ್ಮನೆ ರತ್ನಾಕರ್ ಸಂತಸ ವ್ಯಕ್ತಪಡಿಸಿದ್ದಾರೆ.
ಕನ್ನಡಪ್ರಭದೊಂದಿಗೆ ಸಂತಸ ಹಂಚಿಕೊಂಡ ಅವರು, ಸಚಿವ ಸ್ಥಾನದ ಆಕಾಂಕ್ಷಿಯಾಗಿರಲಿಲ್ಲ. ಆದರೂ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಪಕ್ಷದ ಹೈಕಮಾಂಡ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಕೃತಜ್ಞತೆ ಸಲ್ಲಿಸಿದರು.
ಸಚಿವನಾಗಿರುವುದರಿಂದ ಜವಾಬ್ದಾರಿ ಹೆಚ್ಚಿದೆ. ಯಾವುದೇ ಖಾತೆ ಕೊಟ್ಟರೂ ಚ್ಯುತಿ ಬಾರದಂತೆ ಕಾರ್ಯನಿರ್ವಹಿಸುತ್ತೇನೆ. ಜಿಲ್ಲೆಯ ಅಭಿವೃದ್ಧಿಯ ಬಗ್ಗೆ ನಾಯಕರಾದ ಕಾಗೋಡು ತಿಮ್ಮಪ್ಪರೊಂದಿಗೆ ಸಮಾಲೋಚಿಸಿ ಮುನ್ನಡೆಯುತ್ತೇನೆ ಎಂದರು.
ಸಂಭ್ರಮ: ಕಾಗೋಡು ಸಚಿವ ಸ್ಥಾನ ವಂಚಿತರಾದ ಬೆನ್ನಲ್ಲೆ ಅಸಮಧಾನಗೊಂಡಿದ್ದ ಕಾಂಗ್ರೆಸ್ ಕಾರ್ಯಕರ್ತರು ಕಿಮ್ಮನೆ ರತ್ನಾಕರ್ ಸಚಿವರಾಗಿರುವುದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ. ರಾಜ್ಯಮಟ್ಟದಲ್ಲಿ ಕಿಮ್ಮನೆ ಸಚಿವರಾಗುತ್ತಾರೆ ಎಂಬ ಮಾಹಿತಿ ಇರದಿದ್ದರೂ ತವರು ಕ್ಷೇತ್ರದಲ್ಲಿ ಕಿಮ್ಮನೆ ಸಚಿವರಾಗುವ ಬಗ್ಗೆ ವಿಶ್ವಾಸ ಹೊಂದಿದ್ದು ಅವರ ನಿರೀಕ್ಷೆ ಸುಳ್ಳಾಗಲಿಲ್ಲ.
ಜಿಪಂ ಸದಸ್ಯೆ ಜ್ಯೋತಿ ಚಂದ್ರಮೌಳಿ, ಯುವಕಾಂಗ್ರೆಸ್ ಅಧ್ಯಕ್ಷ ಹಾಲಗದ್ದೆ ಉಮೇಶ್, ತಾಪಂ ಸದಸ್ಯ ಕುನ್ನೂರುಮಂಜಪ್ಪ, ಪ್ರಮುಖರಾದ ಅಮ್ರಪಾಲಿ ಸುರೇಶ್, ಕೋಡೂರು ಚಂದ್ರಮೌಳಿ, ಅಬ್ಬಿಮಲ್ಲೇಶಪ್ಪ ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

