ಶಿವಮೊಗ್ಗ

'ನಿವೃತ್ತಿ ನಂತರ ಸಂಘ- ಸಂಸ್ಥೆಗಳಲ್ಲಿ ತೊಡಗಿಸಿಕೊಳ್ಳಿ'

Published On :

ಕ.ಪ್ರ.ವಾರ್ತೆ  ,  ಶಿವಮೊಗ್ಗ  ,   ಮೇ 18
ಸರ್ಕಾರಿ ಕೆಲಸಗಳಲ್ಲಿ ನಿವೃತ್ತ ನೌಕರರ ಕೆಲಸ ಅತಿ ಮುಖ್ಯವಾಗಿದ್ದು, ಅವರ ಜೀವನದ ಬಹುಪಾಲು ಜೀವನವನ್ನು ಸರ್ಕಾರದ ಕೆಲಸಗಳಿಗಾಗಿ ಮುಡಿಪಾಗಿಟ್ಟಿರುತ್ತಾರೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶಶಿಕಾಂತ್ ಸೆಂಥಿಲ್ ಹೇಳಿದರು.
ಶಿವಮೊಗ್ಗ ಜಿಲ್ಲಾ ನಿವೃತ್ತ ನೌಕರರ ಸಂಘ ಶನಿವಾರ ನಗರದ ಶ್ರೀ ಶೈಲ ಮಲ್ಲಿಕಾರ್ಜುನ ಸಭಾಭವನದಲ್ಲಿ ಹಮ್ಮಿಕೊಂಡಿದ್ದ ಸಂಘದ 75-80 ವಯಸ್ಸಿನ ಹಿರಿಯ ಸದಸ್ಯ ಚೇತನಗಳಿಗೆ ಸನ್ಮಾನ ಸಮಾರಂಭದಲ್ಲಿ ಮಾತನಾಡಿ, ನಿವೃತ್ತ ನೌಕರರಿಗೋಸ್ಕರ ಸರ್ಕಾರ ಹಲವಾರು ಯೋಜನೆಗಳನ್ನು ಕಾರ್ಯರೂಪಕ್ಕೆ ತಂದಿದ್ದು, ಅವುಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಜವಾಬ್ದಾರಿ ನೌಕರರ ಮೇಲಿದೆ ಎಂದರು.
ಸಂಘ- ಸಂಸ್ಥೆಗಳಲ್ಲಿ ತೊಡಗಿಸಿಕೊಳ್ಳಿ: ನಿವೃತ್ತ ನೌಕರರು ತಮ್ಮ ಕೆಲಸದ ಅವಧಿಯಲ್ಲಿ ಪಾರದರ್ಶಕತೆ, ನಿಷ್ಪಕ್ಷಪಾತವಾದ ಸೇವೆ ಸಲ್ಲಿಸುತ್ತಾ ಬಂದಿರುವುದರಿಂದ ಪ್ರಸ್ತುತ ಸರ್ಕಾರಿ ಕೆಲಸಗಳಲ್ಲಿ ಯಾವುದೇ ತೊಡಕುಗಳಿಲ್ಲದೆ ಮುನ್ನಡೆಯಲು ಸಾಧ್ಯವಾಗಿದೆ ಎಂದ ಅವರು, ನಿವೃತ್ತಿ ನಂತರದ ಬದುಕಿನಲ್ಲಿ ನೌಕರರು ಸುಖ ಸಂತೋಷದಿಂದಿರಬೇಕಾದರೆ ಸಂಘ, ಸಂಸ್ಥೆಗಳಲ್ಲಿ ತಮ್ಮನ್ನು ಹೆಚ್ಚಾಗಿ ತೊಡಗಿಸಿಕೊಳ್ಳಬೇಕು ಎಂದು ಹೇಳಿದರು.
ನಿವೃತ್ತ ನೌಕರರು ತಮ್ಮದೇ ಆದ ಸಂಘ, ಸಂಸ್ಥೆಗಳನ್ನು ಕಟ್ಟಿಕೊಳ್ಳುವುದರ ಮೂಲಕ ಬದುಕನ್ನು ಸಂತೋಷವಾಗಿರಿಸಿಕೊಂಡು, ಆರೋಗ್ಯಯುತ ಜೀವನ ನಡೆಸಬೇಕು. ಇಂತಹ ಸಂಘ, ಸಂಸ್ಥೆಗಳಿಂದ ನೌಕರರು ಆರೋಗ್ಯದಲ್ಲಿ ಉತ್ತಮ ಬೆಳವಣಿಗೆಯನ್ನು ಕಾಪಾಡಲು ಸಾಧ್ಯ ಎಂದು ಹೇಳಿದರು.
ಇದೇ ವೇಳೆ ಸಂಘದ ಹಿರಿಯ ಸದಸ್ಯರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಕಲ್ಯಾಣ ಇಲಾಖೆ ಉಪನಿರ್ದೇಶಕಿ ಲಕ್ಷ್ಮೀಕಾಂತಮ್ಮ, ಜಿಲ್ಲಾ ನಿವೃತ್ತ ನೌಕರರ ಸಂಘದ ಅಧ್ಯಕ್ಷ ಎಸ್.ಎಂ. ಜಯದೇವಯ್ಯ, ರಾಜ್ಯ ನಿವೃತ್ತ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಟಿ.ಎನ್.
ಸಂಪತ್, ಅಂಗವಿಕಲರ ಸಬಲೀಕರಣ ಇಲಾಖೆ ಸಹಾಯಕ ಯೋಜನಾಕಾರಿ ಬಿ. ಶೇಖರಪ್ಪ, ಜಿಲ್ಲಾ ನಿವೃತ್ತ ನೌಕರರ ಸಂಘದ ಉಪಾಧ್ಯಕ್ಷ ಎಂ. ರಾಮಚಂದ್ರಪ್ಪ, ಕಾರ್ಯದರ್ಶಿ ಸಿ.ಎಚ್. ಚಂದ್ರಶೇಖರಯ್ಯ ಮತ್ತಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.