21ಕ್ಕೆ ದೇವಸ್ಥಾನದ ಉದ್ಘಾಟನೆ
ಶಿವಮೊಗ್ಗ: ಸೊರಬ ತಾಲೂಕಿನ ಶ್ರೀ ವೀರಭದ್ರೇಶ್ವರ ದೇವಸ್ಥಾನ ಚಿಕ್ಕ ಇಡಗೋಡುವಿನಲ್ಲಿ ಮೇ 21ರಂದು ದೇವಸ್ಥಾನದ ಉದ್ಘಾಟನಾ ಸಮಾರಂಭ ಏರ್ಪಡಿಸಲಾಗಿದೆ. ಶ್ರೀ ಮದ್ರಂಭಾಪುರಿ ವೀರಸಿಂಹಾನಾಧೀಶ್ವರ ಶ್ರೀ 1008 ಜಗದ್ಗುರು ಪ್ರಸನ್ನ ರೇಣುಕ ವೀರಸೋಮೇಶ್ವರ ರಾಜದೇಶಿಕೇಂದ್ರ ಸ್ವಾಮೀಜಿಗಳ ಸಾನ್ನಿಧ್ಯದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಮುಖ್ಯಅತಿಥಿಯಾಗಿ ಸಂಸದ ಬಿ.ವೈ. ರಾಘವೇಂದ್ರ, ಶಾಸಕ ಮಧುಬಂಗಾರಪ್ಪ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಗೀತಾ ಮಲ್ಲಿಕಾರ್ಜುನ, ಜಿಲ್ಲಾಧಿಕಾರಿ ವಿಪುಲಲ್ಬನ್ಸಾಲ್, ಸಾಗರ ಉಪವಿಭಾಗಾಧಿಕಾರಿ ಡಾ.ಬಿ. ಉದಯಕುಮಾರ್ ಶೆಟ್ಟಿ ಮತ್ತಿತರರು ಪಾಲ್ಗೊಳ್ಳುವರು.
ಅಪಘಾತ: ಬೈಕ್ ಸವಾರ ಸಾವು
ಶಿವಮೊಗ್ಗ: ಬೈಕ್ವೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕುಂಸಿ ಬಳಿಯ ದೊಡ್ಡದ್ಯಾವನ ಕೆರೆ ಬಳಿ ಭಾನುವಾರ ಸಂಜೆ ನಡೆದಿದೆ.
ಅಂಬರೀಶ್ (56) ಮೃತಪಟ್ಟವರು. ಇವರು ತಮ್ಮ ಪತ್ನಿಯೊಂದಿಗೆ ಭದ್ರಾವತಿಯಿಂದ ತಮ್ಮ ಸಂಬಂಧಿಕರ ಮದುವೆಗಾಗಿ ಸಾಗರಕ್ಕೆ ಹೋಗುತ್ತಿದ್ದರು. ಈ ವೇಳೆ ಆಯಾ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದ್ದಾರೆ. ಪರಿಣಾಮ ಅಂಬರೀಶ್ ಸ್ಥಳದಲ್ಲೇ ಮೃತಪಟ್ಟಿದ್ದು, ಗೊಯಗೊಂಡಿದ್ದ ಪತ್ನಿಯನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣ ಕುಂಸಿ ಠಾಣೆಯಲ್ಲಿ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

