ಅತಿಥಿ ಉಪನ್ಯಾಸಕರ ವೇತನ ಬಿಡುಗಡೆಗೆ ಒತ್ತಾಯ
ಕ.ಪ್ರವಾರ್ತೆ, ಹೊನ್ನಾಳಿ, ಮೇ 20
ಸರ್ಕಾರಿ ಪದವಿ ಕಾಲೇಜಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ 2012ನೇ ಮತ್ತು 2013ನೇ ಸಾಲಿನಲ್ಲಿ ಕೆಲಸ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರು ಇದೂವರೆಗೂ ವೇತನವಿಲ್ಲದೆ ತೀವ್ರ ತೊಂದರೆ ಅನುಭವಿಸುವಂತಾಗಿದೆ ಎಂದು ಅತಿಥಿ ಉಪನ್ಯಾಸಕ ವರ್ಗ ತಿಳಿಸಿದೆ.
ವಿಶ್ವವಿದ್ಯಾಲಯ ವ್ಯಾಪ್ತಿಗೆ ಬರುವ ಎಲ್ಲಾ ಸರ್ಕಾರಿ ಪದವಿ ಕಾಲೇಜಗಳಲ್ಲಿ ಉಪನ್ಯಾಸ ಮತ್ತು ಪರೀಕ್ಷೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಕಳೆದ ವರ್ಷದಿಂದ ಬಾಕಿ ಇರುವ ವೇತನವನ್ನು ರಾಜ್ಯ ಸರ್ಕಾರ ತಕ್ಷಣ ಬಿಡುಗಡೆ ಮಾಡಬೇಕು ಎಂದು ಎಲ್ಲಾ ಅತಿಥಿ ಉಪನ್ಯಾಸಕರ ಸಮೂಹ ಸರ್ಕಾರವನ್ನು ಒತ್ತಾಯಿಸಿದೆ.
ಆಯಾ ತಿಂಗಳೇ ವೇತನ ನೀಡಿ: ಪ್ರತಿ ವರ್ಷವೂ ಇದೆ ಗೋಳಾಗಿದೆ. ನೂತನ ಉನ್ನತ ಶಿಕ್ಷಣ ಮಂತ್ರಿಗಳು ಪ್ರತಿ ತಿಂಗಳು ವೇತನ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಬೇಕು. ಆಗ ಅತಿಥಿ ಉಪನ್ಯಾಸಕರು ಹಾಗೂ ಅವರ ಅವಲಂಭಿತ ಕುಟುಂಬಗಳು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗುತ್ತದೆ ಎಂದು ಹೇಳಿದರು.
ಅತಿಥಿ ಉಪನ್ಯಾಸಕರಿಗೆ ವಯೋವುತಿ ಮೀರುತ್ತದೆ. ಸರ್ಕಾರಿ ಪದವಿ ಕಾಲೇಜುಗಳಲ್ಲಿ ಕಳೆದ 8 ರಿಂದ 10 ವರ್ಷಗಳಿಂದಲೂ ಕಾಲೇಜುಗಳಲ್ಲಿ ಉಪನ್ಯಾಸ ಮಾಡುತ್ತಿರು ಇವರುಗಳನ್ನು ಖಾಯಂ ಮಾಡಬೇಕು ಎಂದು ಅತಿಥಿ ಉಪನ್ಯಾಸಕರ ಪರವಾಗಿ ಯು.ಬಿ. ಜಯಪ್ಪ ಪತ್ರಿಕಾ ಹೇಳಿಕೆಯಲ್ಲಿ ಮನವಿ ಮಾಡಿದ್ದಾರೆ.
ವೇತನವನ್ನು ಸೂಕ್ತ ಸಮಯದಲ್ಲಿ ನೀಡಿದರೆ ಕುಟುಂಬ ನಿರ್ವಹಣೆಗೂ ಅನುಕೂಲವಾಗಲಿದೆ. ಈ ನಿಟ್ಟಿನಲ್ಲಿ ಸೂಕ್ತ ಸಂದರ್ಭದಲ್ಲಿ ಯಾವುದೇ ತಡೆ ಮಾಡದೇ ವೇತನ ನೀಡಲು ಆಗ್ರಹಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

