ಶಿವಮೊಗ್ಗ

ಬರಗಾಲ ಎದುರಿಸಲು ಸಿದ್ಧತೆ

Published On :

ಕ.ಪ್ರ.ವಾರ್ತ್ಣೆ ಶಿವಮೊಗ್ಗ   ಮೇ 20
ರೈತರ ಕೃಷಿ ಚಟುವಟಿಕೆಗಳಿಗೆ ಅಗತ್ಯವಿರುವ ಎಲ್ಲಾ ರೀತಿಯ ಆಧುನಿಕ ಯಂತ್ರೋಪಕರಣಗಳು ಮಾರುಕಟ್ಟೆಯಲ್ಲಿ ದೊರೆಯುತ್ತವೆ.
   ಆದರೆ, ರೈತರ ಅಗತ್ಯಕ್ಕೆ ತಕ್ಕಂತೆ ಯಂತ್ರಗಳ ಬಿಡಿಭಾಗಗಳು ಮಾರುಕಟ್ಟೆಯಲ್ಲಿ ಸದಾಕಾಲ ದೊರೆಯುವಂತೆ ಕೃಷಿಯಂತ್ರಗಳ ಉತ್ಪಾದಕರು ನೋಡಿಕೊಳ್ಳಬೇಕಾದ ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ವಿಫುಲ್ ಬನ್ಸಲ್ ಹೇಳಿದರು.
   ಕೃಷಿ ಇಲಾಖೆ, ಆಸರೆ ಸೋಷಿಯಲ್ ಸರ್ವೀಸ್ ಟ್ರಸ್ಟ್, ರಾಜ್ಯ ರೈತ ಸಂಘ ಹಸಿರು ಸೇನೆ ಹಾಗೂ ಕೃಷಿ ಸಂಬಂಧಿತ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಶಿವಮೊಗ್ಗ ತಾಲೂಕು ಹೊಳಲೂರಿನ ಮಾರುತಿ ವಿದ್ಯಾಸಂಸ್ಥೆಯ ಆವರಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಕೃಷಿಮೇಳ ಮತ್ತು ವಸ್ತುಪ್ರದರ್ಶನ, ಜಿಲ್ಲಾ ಮಟ್ಟದ ರೈತರ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದ ರು.
ಪೂರಕ ಸಿದ್ಧತೆ: ಪ್ರಸಕ್ತ ಸಾಲಿನ ಮುಂಗಾರು ರಾಜ್ಯದಲ್ಲಿ ವಿಳಂಬ ಗತಿಯಲ್ಲಿ ಬರುವ ನಿರೀಕ್ಷೆ ಇದೆ ಎಂದು ಹವಾಮಾನ ತಜ್ಞರು ರೈತರಿಗೆ ಮಾಹಿತಿ ನೀಡಿದ್ದಾರೆ.
  ಕಳೆದ 2-3 ವರ್ಷಗಳಿಂದ ರಾಜ್ಯದಲ್ಲಿ ಬರದ ಛಾಯೆ ಆವರಿಸಿಕೊಂಡಿದೆ. ಇಂತಹ ಸಂಕಷ್ಟದ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಸಂಭವಿಸಬಹುದಾದ ಬರಗಾಲವನ್ನು ಎದುರಿಸಲು ಜಿಲ್ಲಾಡಳಿತ ಪೂರಕ ಸಿದ್ಧತೆ ನಡೆಸಿದೆ ಎಂದವರು ಹೇಳಿದರು.
ಪ್ರಸಕ್ತ ಮುಂಗಾರು ಹಂಗಾಮಿನ ಬೆಳೆಗೆ ರೈತರಿಗೆ ಅನುಕೂಲವಾಗುವಂತೆ 60 ಲಕ್ಷ ಮೌಲ್ಯದ ಬಿತ್ತನೆ ಬೀಜವನ್ನು ವಿತರಿಸಲು ಕ್ರಮ ಕೈಗೊಂಡಿದೆ. ಇದಲ್ಲದೇ ರೈತರಿಗೆ ಅಗತ್ಯವಿರುವ ಎಲ್ಲಾ ರೀತಿಯ ಸೌಲಭ್ಯಗಳನ್ನು ಸರ್ಕಾರದ ವಿವಿಧ ಯೋಜನೆಗಳ ನೆರವಿನಿಂದ ಒದಗಿಸಲು ಪ್ರಾಮಾಣಿಕವಾಗಿ ಶ್ರಮಿಸಲಾಗುವುದು ಎಂದು ತಿಳಿಸಿದರು.
ಲಾಭದಾಯಕ ಉದ್ಯಮ ಮಾಡಿ: ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೌಶಲೇಂದ್ರಕುಮಾರ್ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಕೃಷಿ ಅವಲಂಬಿತ ರೈತರಿಗೆ ಕೃಷಿಯಿಂದ ದೊರೆಯುತ್ತಿರುವ ಲಾಭದ ಪ್ರಮಾಣ ಅಷ್ಟೊಂದು ತೃಪ್ತಿಕರವಾಗಿಲ್ಲ. ಆದರೂ, ಬದಲಾದ ಕಾಲಮಾನಕ್ಕನುಗುಣವಾಗಿ ರೈತರೂ ಕೂಡ ಆಧುನಿಕ ಕೃಷಿ ಯಂತ್ರೋಪಕರಣಗಳನ್ನು ಬಳಸಿಕೊಂಡು ಕೃಷಿ ಚಟುವಟಿಕೆಗಳನ್ನು ಲಾಭದಾಯಕ ಉದ್ಯಮವನ್ನಾಗಿ ಮಾಡಿಕೊಳ್ಳಬೇಕೆಂದರು.
ಕೃಷಿ ಸಂಬಂಧಿತ ಅನೇಕ ಸಿವಿಲ್ ವಿಷಯಗಳಲ್ಲಿ ಪೊಲೀಸ್ ಇಲಾಖೆ ರೈತರೊಂದಿಗೆ ನೇರ ಸಂಪರ್ಕದಲ್ಲಿರುತ್ತದೆ. ಕೆಲವೊಂದು ಸಂದರ್ಭಗಳಲ್ಲಿ ರೈತರು ಸಣ್ಣಸಣ್ಣ ಸಮಸ್ಯೆಗಳಿಗಾಗಿ ಲಕ್ಷಾಂತರ ರುಪಾಯಿಗಳನ್ನು ವ್ಯಯ ಮಾಡುತ್ತಿದ್ದಾರೆ.
   ಅದಕ್ಕೂ ಮುನ್ನ ವ್ಯವಧಾನದಿಂದ ಸಮಸ್ಯೆಯನ್ನು ಬಗೆಹರಿಸಿಕೊಳ್ಳುವಂತೆ ಅವರು ರೈತರಿಗೆ ಸಲಹೆ ನೀಡಿದರು.
 ಆಸರೆ ಟ್ರಸ್ಟ್‌ನ ಅಧ್ಯಕ್ಷ ಕೆ.ಎಂ.ಸತೀಶ್ ಗೌಡ ಅಧ್ಯಕ್ಷತೆ ವಹಿಸಿದ್ದರು.
  ರೈತಸಂಘ ಹಾಗೂ ಹಸಿರುಸೇನೆ ಕಾರ್ಯಾಧ್ಯಕ್ಷ ಎಚ್.ಆರ್. ಬಸವರಾಜಪ್ಪ ವಸ್ತುಪ್ರದರ್ಶನ ಮಳಿಗೆಗಳನ್ನು ಉದ್ಘಾಟಿಸಿದರು.
   ಈ ಸಂದರ್ಭದಲ್ಲಿ ಪಿ. ಮೈಲಾರಪ್ಪ, ಎಂ. ಕಲ್ಯಾಣಪ್ಪ ಹಾಗೂ ಜಹೀರ್‌ಉದ್ದೀನ್, ಎಪಿಎಂಸಿ ಕಾರ್ಯದರ್ಶಿ ಡಾ. ಶರಶ್ಚಂದ್ರ ರಾನಡೆ, ಪಶುಪಾಲನಾ ಇಲಾಖೆ ಉಪನಿರ್ದೇಶಕರ ಡಾ. ಆರ್.ಆರ್. ರವೀಂದ್ರ ಹಾಗೂ ಮುಂತಾದವರು ಉಪಸ್ಥಿತರಿದ್ದರು.
   ಕೆ.ಆರ್. ರಾಕೇಶ್ ಪ್ರಾರ್ಥಿಸಿ, ಮಲ್ಲಿಕಾರ್ಜುನ ಸ್ವಾಗತಿಸಿದರು. ವೈ.ಜಿ. ಮಲ್ಲಿಕಾರ್ಜುನ ಪ್ರಸ್ತಾವಿಕವಾಗಿ ಮಾತನಾಡಿದರು. ಈಶ್ವರಿ ಚೋಳಕೆ ನಿರೂಪಿಸಿ ವಂದಿಸಿದರು. ಕಾರ್ಯಕ್ರಮದಲ್ಲಿ ಹಲವರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.