ಶಾಮನೂರಿಗೆ ಶುಭ ಹಾರೈಕೆ: ಪಾನೀಯ ವಿತರಣೆ
ಕ.ಪ್ರ.ವಾರ್ತೆ, ದಾವಣಗೆರೆ, ಮೇ 20
ದಕ್ಷಿಣ ಶಾಸಕ ಡಾ. ಶಾಮನೂರು ಶಿವಶಂಕರಪ್ಪ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭಿಮಾನಿಗಳು, ವಾಹನಗಳ ಮಾಲೀಕರ ಕ್ಷೇಮಾಭಿವೃದ್ಧಿ ಸಂಘದಿಂದ ನಗರದಲ್ಲಿ ಸಂಭ್ರಮಾಚರಿಸಿ, ತಂಪು ಪಾನೀಯ ವಿತರಿಸಲಾಯಿತು.
ನಗರದ ದೈವಜ್ಞ ಕಲ್ಯಾಣ ಮಂಟಪದ ಬಳಿ ಸಂಘದ ಪದಾಧಿಕಾರಿಗಳು, ಸದಸ್ಯರು, ಅಭಿಮಾನಿಗಳು ಸಾರ್ವಜನಿಕರಿಗೆ ತಂಪು ಪಾನೀಯ ವಿತರಿಸುವ ಮೂಲಕ ಡಾ. ಶಾಮನೂರು ಶಿವಶಂಕರಪ್ಪ ತಡವಾಗಿ ಸಚಿವರಾದರೂ ಉತ್ತಮ ಸೇವೆ ಸಲ್ಲಿಸುವ ಮೂಲಕ ಮಾದರಿ ಸಚಿವರಾಗಲಿ ಎಂದು ಹಾರೈಸಲಾಯಿತು.
ಇದೇ ವೇಳೆ ಮಾತನಾಡಿದ ಸಂಘದ ಅಧ್ಯಕ್ಷ ನಾಗಣ್ಣ, ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಶುದ್ಧಹಸ್ತ, ಪ್ರಾಮಾಣಿಕ, ಭ್ರಷ್ಟಾಚಾರ ರಹಿತ, ನೇರ ನಡೆ, ನುಡಿಯ, ಸರಳ ವ್ಯಕ್ತಿತ್ವದ ನಾಯಕ ಎಂದೇ ಹೆಸರಾದ ನಾಯಕ. ಜನಪರ ದಕ್ಷ ಆಡಳಿತ ನೀಡುವ ಮೂಲಕ ಸರ್ವ ಜನಾಂಗ, ಸರ್ವ ಧರ್ಮೀಯರ ಹಿತ ಕಾಯುವ ಜೊತೆಗೆ ನಾಡನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಲಿ ಎಂದು ಹೇಳಿದರು.
ಸಂಘದ ಕಾರ್ಯದರ್ಶಿ ಅಫ್ರೀದಿ, ಆರ್. ವೀರಣ್ಣ, ತಿಪ್ಪೇಸ್ವಾಮಿ, ನಾಗರಾಜ, ಲಕ್ಷ್ಮಣರಾವ್, ಬಸವರಾಜ, ಹರೀಶ, ವಾಸುದೇವ ರಾವ್ ಮತ್ತಿತರರು ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

