ಶಿವಮೊಗ್ಗ

ಹಾವು ಕಡಿದು ಕಾಲೇಜು ವಿದ್ಯಾರ್ಥಿನಿ ಸಾವು

Published On :

ಸಾಗರ: ಪರೀಕ್ಷೆಗಾಗಿ ಓದುತ್ತಾ ಕುಳಿತಿದ್ದ ವಿದ್ಯಾರ್ಥಿನಿಗೆ ಹಾವು ಕಚ್ಚಿ ಮೃತಪಟ್ಟ ಘಟನೆ ಸೋಮವಾರ ನಡೆದಿದೆ. ಇಲ್ಲಿನ ಇಂದಿರಾಗಾಂಧಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಥಮ ಬಿ.ಎ. ವಿದ್ಯಾರ್ಥಿನಿ ಸುಮ (19) ಮೃತ ವಿದ್ಯಾರ್ಥಿನಿ.
ತಾಲೂಕಿನ ಕಟ್ಟಿನಕಾರು ಗ್ರಾಮದ ಹಾಲೆಮನೆ ಗ್ರಾಮದವಳಾದ ಸುಮಾ ಬಿಸಿಎಂ ಹಾಸ್ಟೆಲ್‌ನಲ್ಲಿದ್ದುಕೊಂಡು ಕಾಲೇಜಿಗೆ ಹೋಗುತ್ತಿದ್ದಳು ಎನ್ನಲಾಗಿದೆ. ಸಹಾಸ್ಟೆಲ್ ಎದುರಿನ ಗಾರ್ಡ್‌ನ್‌ನಲ್ಲಿ ಓದುತ್ತಾ ಕುಳಿತಿದ್ದಳು. ಈ ಸಂದರ್ಭದಲ್ಲಿ ಕಾಣಿಸಿಕೊಂಡ ನಾಗರ ಹಾವು ಕಚ್ಚಿದೆ ಎಂದು ಅಕ್ಕಪಕ್ಕದಲ್ಲಿ ಕುಳಿತಿದ್ದ ವಿದ್ಯಾರ್ಥಿನಿಯರು ತಿಳಿಸಿದ್ದಾರೆ. ತಕ್ಷಣ ಆಸ್ಪತ್ರೆಗೆ ಕೊಂಡೊಯ್ಯುವಷ್ಟರಲ್ಲಿ ಸಾವನ್ನಪ್ಪಿದ್ದಳು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.