ಅರ್ಜಿ ಆಹ್ವಾನ
ಶಿವಮೊಗ್ಗ: ಸೊರಬ ತಾಲೂಕಿನಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ನಡೆಯುತ್ತಿರುವ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ 5ನೇ ತರಗತಿಯಿಂದ 10ನೇ ತರಗತಿಯವರೆಗೆ ಪ್ರಸಕ್ತ ಸಾಲಿನ ಪ್ರವೇಶ ಬಯಸುವ ವಿದ್ಯಾರ್ಥಿಗಳಿಂದ ನಿಗದಿತ ನಮೂನೆಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಸೊರಬ ಟೌನ್, ಚಂದ್ರಗುತ್ತಿ, ಉದ್ರಿ, ತತ್ತೂರು, ಎಣ್ಣೆಕೊಪ್ಪ, ಬಾರಂಗಿ, ಆನವಟ್ಟಿ, ಜಡೆ ಮತ್ತು ಶಕುನವಳ್ಳಿಗಳಲ್ಲಿರುವ ಸರ್ಕಾರಿ ಮೆಟ್ರಿಕ್ಪೂರ್ವ ಬಾಲಕರ ವಿದ್ಯಾರ್ಥಿ ನಿಲಯಗಳು ಹಾಗೂ ಸೊರಬ ಟೌನ್, ಆನವಟ್ಟಿ 1 ಮತ್ತು 2 ಕೇಂದ್ರಗಳಲ್ಲಿನ ನಿಲಯಗಳಲ್ಲಿ ಪ್ರವೇಶಾವಕಾಶ ಕಲ್ಪಿಸಲಾಗಿದೆ. ಪ್ರವೇಶ ಬಯಸುವ ವಿದ್ಯಾರ್ಥಿಗಳು ತಾಲೂಕು ಸಮಾಜ ಕಲ್ಯಾಣ ಇಲಾಖೆ, ಸೊರಬ ಅಥವಾ ಆಯಾ ನಿಲಯದ ಮೇಲ್ವಿಚಾರಕರಿಂದ ಅರ್ಜಿ ಪಡೆದು, ಜೂನ್ 10ರೊಳಗಾಗಿ ಸಲ್ಲಿಸಬಹುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಉಚಿತ ಊಟ, ಸಮವಸ್ತ್ರ, ಲೇಖನ ಸಾಮಗ್ರಿ ಮತ್ತು ವಾಸ್ತವ್ಯದ ವ್ಯವಸ್ಥೆ ಕಲ್ಪಿಸಲಾಗುವುದು. 2013-14ನೇ ಸಾಲಿನಲ್ಲಿ ಖಾಲಿ ಇರುವ ಸ್ಥಾನಗಳಿಗೆ ತಾಲೂಕು ಮಟ್ಟದ ಆಯ್ಕೆ ಸಮಿತಿಯಲ್ಲಿ ಆಯ್ಕೆಯಾಗುವ ವಿದ್ಯಾರ್ಥಿಗಳಿಗೆ ಮಾತ್ರ ಉಚಿತ ಪ್ರವೇಶ ನೀಡಲಾಗುವುದು.
ಈ ಸಂಬಂಧ ಹೆಚ್ಚಿನ ಮಾಹಿತಿಯನ್ನು ತಾಲೂಕು ಸಮಾಜ ಕಲ್ಯಾಣಾಧಿಕಾರಿಗಳ ಕಚೇರಿ ಅಥವಾ ಆಯಾ ವಿದ್ಯಾರ್ಥಿ ನಿಲಯಗಳಲ್ಲಿ ಪಡೆದುಕೊಳ್ಳಬಹುದು ಎಂದು ಸೊರಬ ತಾಲೂಕು ಸಮಾಜ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.
ಅರ್ಜಿ ಆಹ್ವಾನ
ಶಿವಮೊಗ್ಗ: ಹೊಸನಗರದಲ್ಲಿ ಸಮಾಜ ಕಲ್ಯಾಣ ಇಲಾಖೆ ನಡೆಯುತ್ತಿರುವ ಹೊಸನಗರ ಟೌನ್ ಹಾಗೂ ರಿಪ್ಪನ್ ಪೇಟೆ ವ್ಯಾಪ್ತಿಯ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿನಿಲಯ ಹಾಗೂ ರಿಪ್ಪನ್ಪೇಟೆಯಲ್ಲಿನ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಲಯಗಳಿಗೆ 5ನೇ ತರಗತಿಯಿಂದ 10ನೇ ತರಗತಿಯವರೆಗೆ ಪ್ರಸಕ್ತ ಸಾಲಿನಲ್ಲಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಪ್ರವೇಶ ಬಯಸುವ ವಿದ್ಯಾರ್ಥಿಗಳು ತಾಲೂಕು ಸಮಾಜ ಕಲ್ಯಾಣ ಇಲಾಖೆ ಹೊಸನಗರ ಅಥವಾ ಆಯಾ ನಿಲಯದ ಮೇಲ್ವಿಚಾರಕರಿಂದ ಅರ್ಜಿ ಪಡೆದು ಜೂನ್ 15ರೊಳಗೆ ಸಲ್ಲಿಸಬಹುದು. ಆಯ್ಕೆಯಾದ ವಿದ್ಯಾರ್ಥಿಗಳಿಗೆ ಉಚಿತ ಊಟ, ವಾಸ್ತವ್ಯದ ವ್ಯವಸ್ಥೆ ಕಲ್ಪಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ ಖಾಲಿ ಇರುವ ಸ್ಥಾನಗಳಿಗೆ ತಾಲೂಕು ಮಟ್ಟದ ಆಯ್ಕೆ ಸಮಿತಿಯಲ್ಲಿ ಆಯ್ಕೆಯಾಗುವ ವಿದ್ಯಾರ್ಥಿಗಳಿಗೆ ಮಾತ್ರ ಉಚಿತ ಪ್ರವೇಶ ನೀಡಲಾಗುವುದು. ಈ ಸಂಬಂಧ ಹೆಚ್ಚಿನ ಮಾಹಿತಿಯನ್ನು ತಾಲೂಕು ಸಮಾಜ ಕಲ್ಯಾಣಾಧಿಕಾರಿಗಳ ಕಚೇರಿ ಅಥವಾ ಆಯಾ ವಿದ್ಯಾರ್ಥಿನಿಲಯಗಳಲ್ಲಿ ಪಡೆದುಕೊಳ್ಳಬಹುದು ಎಂದು ಹೊಸನಗರ ತಾಲೂಕು ಸಮಾಜ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.
ಅರ್ಜಿಆಹ್ವಾನ
ಶಿವಮೊಗ್ಗ: ಕುಮಟಾದ ಸಿಂಡ್ ಗ್ರಾಮೀಣ ಸ್ವ- ಉದ್ಯೋಗ ತರಬೇತಿ ಸಂಸ್ಥೆ ಮೇ 20ರಿಂದ ಜೂನ್ 18ರವರೆಗೆ ಒಂದು ತಿಂಗಳ ಅವಧಿಯ ಗೃಹ ಬಳಕೆಯ ವಿದ್ಯುತ್ ಉಪಕರಣಗಳು, ಗ್ರೈಂಡರ್ ದುರಸ್ತಿ ಹಾಗೂ ಮೋಟಾರ್ ರೀವೈಂಡಿಂಗ್ ತರಬೇತಿ ಏರ್ಪಡಿಸಿದೆ. ಜಿಲ್ಲೆಯ ಸೊರಬ ಮತ್ತು ಸಾಗರ ತಾಲೂಕಿನ ನಿರುದ್ಯೋಗಿ ಅಭ್ಯರ್ಥಿಗಳಿಂದ ತರಬೇತಿಗೆ ಅರ್ಜಿ ಆಹ್ವಾನಿಸಿದ್ದು, ಅಭ್ಯರ್ಥಿಗಳು 18ರಿಂದ 45 ವರ್ಷ ವಯೋವುತಿಯೊಳಗಿನವರಾಗಿದ್ದು, ಉಚಿತ ಊಟ ಮತ್ತು ವಸತಿ ಸೌಲಭ್ಯ ಕಲ್ಪಿಸಿಕೊಡಲಾಗುವುದು. ಆಸಕ್ತರು ಹೆಸರು, ವಿಳಾಸ, ಮತ್ತಿತರ ಮಾಹಿತಿಯೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ನಿರ್ದೇಶಕರು, ಸಿಂಡ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ, ಕೈಗಾರಿಕಾ ವಸಾಹತು ಪ್ರದೇಶ, ಹೆಗಡೆ ರಸ್ತೆ, ಕುಮಟಾ-581343 ವಿಳಾಸಕ್ಕೆ ಸಲ್ಲಿಸಬಹುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

