ಎರಡು ದಿನಗಳಿಗೊಮ್ಮೆಯಾದರೂ ನಾಗರಿಕರಿಗೆ ನೀರು ಕೊಡಿ
ಕಪ್ರ ವಾರ್ತೆ, ಸಾಗರ, ಮೇ 20
ಕುಡಿಯುವ ನೀರಿನ ಸಮಸ್ಯೆಯೂ ಸೇರಿದಂತೆ ಬರ ಎದುರಿಸುವ ಸಂಬಂಧ ಸೋಮವಾರ ತಾಲೂಕು ಪಂಚಾಯ್ತಿಯಲ್ಲಿ ಕರೆಯಲಾಗಿದ್ದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆಯಲ್ಲಿ ಶಾಸಕ ಕಾಗೋಡು ತಿಮ್ಮಪ್ಪನವರು ಎಲ್ಲರನ್ನು ತೀವ್ರ ತರಾಟೆಗೆ ತೆಗೆದುಕೊಂಡರು.
ನಗರವೂ ಸೇರದಂತೆ ಬಹುತೇಕ ಗ್ರಾಮಗಳಲ್ಲಿ ಉಲ್ಬಣಿಸಿರುವ ಕುಡಿಯುವ ನೀರಿನ ಸಮಸ್ಯೆಗೆ ಆಡಳಿತ ಕೈಗೊಂಡಿರುವ ಕ್ರಮಗಳ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ ಕಾಗೋಡು ಸಮಸ್ಯೆ ಪರಿಹಾರಕ್ಕೆ ಜಿಲ್ಲಾಧಿಕಾರಿಗಳು 2.90 ಕೋಟಿ ಬಿಡುಗಡೆಮಾಡಿದ್ದು, ಜನಪ್ರತಿನಿಧಿಗಳು, ಅಧಿಕಾರಿಗಳು ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸಿ ಇನ್ನೆರಡು ದಿನಗಳಲ್ಲಿ ಎಲ್ಲೆಡೆ ಕನಿಷ್ಠ ಎರಡು ದಿನಕ್ಕೆ ಒಮ್ಮೆಯಾದರೂ ನೀರು ಕೊಡುವ ವ್ಯವಸ್ಥೆ ಮಾಡಬೇಕು ಎಂದು ತಾಕೀತು ಮಾಡಿದರು.
ಡಿಸಿ ಮಾಹಿತಿ ನೀಡಿ: ಜನರು ಸಮಸ್ಯೆಯಲ್ಲಿರುವ ಸಂದರ್ಭದಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ಧೋರಣೆ ಅನುಸರಿಸಿ, ಕೆಲಸಗಳ ಬಗ್ಗೆ ನಿರಾಸಕ್ತಿ ತೋರಿದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗುತ್ತದೆ ಎಂದು ಎಚ್ಚರಿಸಿದ ಅವರು, ಪ್ರತಿ ಪಂಚಾಯ್ತಿ ವ್ಯಾಪ್ತಿಯಲ್ಲಿ ಸದಸ್ಯರ ಉಪಸ್ಥಿತಿಯಲ್ಲಿ ಸಭೆ ಕರೆದು ತೆರೆದ ಬಾವಿಗಳ ಹೂಳೆತ್ತುವುದು, ಕೆರೆ ಹೂಳೆತ್ತುವುದು, ಪೈಪ್ಲೈನ್ ವಿಸ್ತರಣೆ ಇತ್ಯಾದಿ ಕಾಮಗಾರಿಗಳ ಪಟ್ಟಿ ತಯಾರಿಸಿ ತಕ್ಷಣ ಜಿಲ್ಲಾಧಿಕಾರಿಗಳಿಗೆ ಕಳಿಸುವಂತೆ ಸೂಚನೆ ನೀಡಿದರು.
ತಾಲೂಕಿನಲ್ಲಿ 300 ಬಾವಿಗಳ ಆಳ ಹೆಚ್ಚಿಸಲು ಪಟ್ಟಿ ಕಳುಹಿಸಲಾದ ಮಾಹಿತಿ ಪಡೆದ ಕಾಗೋಡು, ಚುನಾಯಿತ ಪ್ರತಿನಿಧಿಗಳು ಮನವಿ ಸಲ್ಲಿಸಿದ್ದರೂ ಕ್ರಮ ಕೈಗೊಳ್ಳದೆ ಇರುವುದು ಸರಿಯಲ್ಲ. ಟ್ಯಾಂಕರ್ಗಳನ್ನು ಬಾಡಿಗೆಗೆ ಪಡೆದು ತುರ್ತು ಅಗತ್ಯ ಇರುವಲ್ಲಿ ನೀರು ಪೂರೈಸಲು ಸೂಚಿಸಿದ ಅವರು, ಅದಿಲ್ಲವಾದಲ್ಲಿ ಎತ್ತಿನಗಾಡಿಗಳಲ್ಲಿ ನೀರಿನ ಡ್ರಮ್ಗಳನ್ನು ಸಾಗಾಟ ಮಾಡಲು ಸೂಚಿಸಿದರು.
ತಾಲೂಕಿನಲ್ಲಿ ಈಗಾಗಲೆ ವಿದ್ಯುತ್ ಟ್ರಾನ್ಸ್ಫಾರ್ಮರ್ ರಿಪೇರಿ ಕೇಂದ್ರವನ್ನು ಪುನರ್ ಸ್ಥಾಪಿಸಲು ಅಧಿಕಾರಿಗಳಿಗೆ ತಿಳಿಸಲಾಗಿದೆ.
ಪಟ್ಟಿ ತಯಾರಿಸಿ: ಸದ್ಯದಲ್ಲಿ ಕೇಂದ್ರ ಕಾರ್ಯಾರಂಭ ಮಾಡಲಿದೆ. ಎಲ್ಲೆಲ್ಲಿ ಟ್ರಾನ್ಸ್ಫಾರ್ಮರ್ ಕೊರತೆ ಇದೆ, ರಿಪೇರಿ ಅಗತ್ಯ ಇದೆ ಎನ್ನುವುದನ್ನು ತಕ್ಷಣ ಪಟ್ಟಿ ಮಾಡಿ. ಭಾಗ್ಯಜ್ಯೋತಿ ಬಾಕಿ ಹಣವನ್ನು ಸರ್ಕಾರ ಸಂಪೂರ್ಣ ಮನ್ನಾ ಮಾಡಿದ್ದು ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದರೆ ತಕ್ಷಣ ಮರು ಸಂಪರ್ಕ ನೀಡುವಂತೆ ಮೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು. ಮಹಾಬಲೇಶ್ವರ ಕುಗ್ವೆ, ಗೌರಮ್ಮ, ಡಾ. ಸದಾಶಿವ, ವಿವಿಧ ಇಲಾಖೆ ಅಧಿಕಾರಿಗಳು, ಜಿ.ಪಂ. ಸದಸ್ಯರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

