ನಿರ್ಮಲಾನಂದನಾಥ ಶ್ರೀ ಪುರಪ್ರವೇಶ
ಭದ್ರಾವತಿ: ಆದಿಚುಂಚನಗಿರಿ ಮಹಾಸಂಸ್ಥಾನ ಮಠದ 72ನೇ ಪೀಠಾಧಿಪತಿಗಳಾದ ನಿರ್ಮಲಾನಂದನಾಥ ಶ್ರೀಯವರು ಮೇ.23ರಂದು ಭದ್ರಾವತಿ ಪಟ್ಟಣದ ಪುರಪ್ರವೇಶ ಮಾಡುತ್ತಿದ್ದು, ಅಂದು ಅವರು ಕಾರೆಹಳ್ಳಿಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಬಿ.ಜಿ. ಎಸ್ ಕೇಂದ್ರೀಯ ವಿದ್ಯಾಲಯವನ್ನು ಉದ್ಘಾಟಿಸುವರು ಎಂದು ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎಸ್.ಸಿ. ಜಯರಾಂ ಮತ್ತು ವಿದ್ಯಾಲಯದ ಪ್ರಾಂಶುಪಾಲ ಅಶ್ವತ್ಥ್ ತಿಳಿಸಿದರು.
ಸೋಮವಾರ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು ಗುರುವಾರ ಬೆಳಗ್ಗೆ 8 ಗಂಟೆಯಿಂದಲೇ ಹೋಮ, ಹವನ ಕಾರ್ಯಕ್ರಮಗಳು ನಡೆಯುವುವು. ನಂತರ 8.30 ಗಂಟೆಗೆ ಶ್ರೀಗಳು ಶಾಲೆ ಕಟ್ಟಡ ಉದ್ಘಾಟಿಸುವರು.
ಬಾಲಗಂಗಾಧರನಾಥ ವೇದಿಕೆಯಲ್ಲಿ ನಡೆಯುವ ಸಮಾರಂಭದ ಸಾನ್ನಿಧ್ಯವನ್ನು ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮಾನಂದ ಶ್ರೀ ಹಾಗೂ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಪ್ರಸನ್ನನಾಥ ಶ್ರೀ ವಹಿಸುವರು.
ಕರ್ನಾಟಕ ರಾಜ್ಯದ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್, ಭದ್ರಾವತಿ ಶಾಸಕ ಅಪ್ಪಾಜಿ, ತರೀಕೆರೆ ಶಾಸಕ ಜಿ.ಎಚ್. ಶ್ರೀನಿವಾಸ್ ಹಾಗೂ ಶಿವಮೊಗ್ಗ ಗ್ರಾಮಾಂತರ ಶಾಸಕಿ ಶಾರದ ಪೂರ್ಯನಾಯ್ಕ ಆಗಮಿಸುವರು. ಸಮಾರಂಭದ ನಂತರ ನಿರ್ಮಲಾನಂದನಾಥ ಶ್ರೀಗಳ ಗುರುವಂದನಾ, ಪಾದಪೂಜೆ ನಡೆಯುವುದು. "
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

