ಶಿವಮೊಗ್ಗ

ದ್ವೇಷ ರಾಜಕಾರಣ ಮಾಡುವುದಿಲ್ಲ

Published On :

ಸೊರಬ: ಹಿಂದಿನ 10 ವರ್ಷಗಳ ಅವಧಿಯಲ್ಲಿ ವೈಯುಕ್ತಿಕ ದ್ವೇಷದ ರಾಜಕಾರಣ ತಾಲೂಕಿನಲ್ಲಿತ್ತು, ಇನ್ನುಮುಂದೆ ಅಂತಹ ದ್ವೇಷದ ರಾಜಕಾರಣ ಇರುವಂತಿಲ್ಲ ಎಂದು ಶಾಸಕ ಮಧು ಬಂಗಾರಪ್ಪ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನಾನು ದ್ವೇಷಕ್ಕಾಗಿ ರಾಜಕೀಯ ಬಳಸಿಕೊಳ್ಳದೆ, ಜನತೆಗೆ ಅಗತ್ಯವಿರುವ ಮೂಲ ಸೌಕರ್ಯಗಳನ್ನು ಒದಗಿಸುವತ್ತ ಸಂಪೂರ್ಣ ಗಮನ ಹರಿಸುತ್ತೇನೆ ಎಂದರು.
ಬಗರ್ ಹುಕಂ ಗಂಭೀರ ಸಮಸ್ಯೆಯಾಗಿದ್ದು, ಕಾನೂನು ಬದ್ಧವಾಗಿ ಸಕ್ರಮೀಕರಣಗೊಳಿಸಲು ಪ್ರಯತ್ನಿಸಲಾಗುವುದು. ಭ್ರಷ್ಟತೆ ದೂರವಿರಿಸಿ ಕಾನೂನು ಬದ್ಧ ಚಟುವಟಿಕೆಗಳಿಗೆ ಹೆಚ್ಚಿನ ಆಧ್ಯತೆ ನೀಡಲಾಗುತ್ತದೆ ಎಂದರು. ಕ್ಷೇತ್ರದ ಅಭಿವೃದ್ಧಿ ಗಮನದಲ್ಲಿರಿಸಿ ಹೆಜ್ಜೆ ಇಡುತ್ತ, ತಂದೆ ಕನಸನ್ನು ನನಸಾಗಿಸುವುದಾಗಿ ಹೇಳಿದರು.
ಜೆಡಿಎಸ್ ಅಧ್ಯಕ್ಷ ಎಚ್. ಗಣಪತಿ, ವಕ್ತಾರ ಎಂ.ಡಿ. ಶೇಖರ್, ಶ್ರೀಪಾದರಾವ್ ನಿಸರಾಣಿ, ತಾಪಂ ಅಧ್ಯಕ್ಷ ಸದಾನಂದಗೌಡ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.