ಶಿವಮೊಗ್ಗ

ವಿದ್ಯಾರ್ಥಿನಿ ಕುಟುಂಬಕ್ಕೆ 50 ಸಾವಿರ ಧನ ಸಹಾಯ

Published On :

ಕ.ಪ್ರ. ವಾರ್ತೆ, ಸಾಗರ, ಮೇ 21
ಹಾವು ಕಡಿದು ಮೃತಪಟ್ಟ ಇಂದಿರಾಗಾಂಧಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 50 ಸಾವಿರ ಸಹಾಯ ಧನವನ್ನು ಒದಗಿಸಲಾಗುವುದು ಎಂದು ಶಾಸಕ ಕಾಗೋಡು ತಿಮ್ಮಪ್ಪ ಹೇಳಿದರು.
ಇಲ್ಲಿನ ಬಿಸಿಎಂ ವಿದ್ಯಾರ್ಥಿನಿ ನಿಲಯ, ಶ್ರೀಮತಿ ಇಂದಿರಾಗಾಂಧಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಹಾಗೂ ಸರ್ಕಾರಿ ಪದವಿಪೂರ್ವ ಕಾಲೇಜಿಗೆ ಮಂಗಳವಾರ ಭೇಟಿ ನೀಡಿದ ಅವರು ಅಲ್ಲಿನ ಅವ್ಯವಸ್ಥೆಗೆ ಅಸಮಾಧಾನ ವ್ಯಕ್ತಪಡಿಸಿದರು.
ವಿಷಾದನೀಯ: ಇಂತಹ ವಾತಾವರಣದಲ್ಲಿ ವಿದ್ಯಾರ್ಥಿಗಳು ನೆಮ್ಮದಿಯ ವಿದ್ಯಾಭ್ಯಾಸ ನಡೆಸುವುದಾದರೂ ಹೇಗೆ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಅವರು, ಶಿಕ್ಷಣವನ್ನು ಬಯಸಿ ಬೇರೆ ಊರುಗಳಿಂದ ಬರುವ ವಿದ್ಯಾರ್ಥಿಗಳು ಹಾಸ್ಟೆಲ್‌ನಲ್ಲಿ ಉಳಿದುಕೊಂಡಿರುತ್ತಾರೆ. ಅವರು ಉತ್ತಮ ಶಿಕ್ಷಣ ಪಡೆಯಲು ಸರ್ಕಾರ ಅನೇಕ ಯೋಜನೆಗಳು ಜಾರಿಗೆ ತಂದಿದ್ದರೂ ಅದು ಫಲಪ್ರದವಾಗದೆ ಇರುವುದು ವಿಷಾದನೀಯ ಎಂದರು.
ತಾಲೂಕು ಪಂಚಾಯ್ತಿ ಸಾಮಾಜಿಕ ನ್ಯಾಯ ಸಮಿತಿ ಕಾಲಕಾಲಕ್ಕೆ ಹಾಸ್ಟೆಲ್‌ಗಳ ಸ್ಥಿತಿಗತಿಗಳ ಬಗ್ಗೆ ಗಮನ ಕೊಡಬೇಕು. ಅನೇಕ ಹಾಸ್ಟೆಲ್‌ಗಳಲ್ಲಿ ನಿಗದಿತ ಸ್ಥಾನಗಳಿಗಿಂತ ಹೆಚ್ಚಿನ ವಿದ್ಯಾರ್ಥಿಗಳನ್ನು ಸೇರಿಸಿಕೊಳ್ಳಲಾಗಿದೆ. ಇದರಿಂದ ವಿದ್ಯಾರ್ಥಿಗಳಿಗೆ ಸವಲತ್ತು ಕೊಡಲು ಸಾಧ್ಯವಾಗುತ್ತಿಲ್ಲ. ಈ ಬಗ್ಗೆ ಕ್ರಮ ಕೈಗೊಳ್ಳಿ ಎಂದು ಸೂಚನೆ ನೀಡಿದರು.
ಕಾಲೇಜು ನಿರ್ಮಾಣಕ್ಕೆ ಕ್ರಮ: ತಾಲೂಕಿನಲ್ಲಿ ಪುರುಷರ ಪದವಿ ಕಾಲೇಜು ಸ್ಥಾಪನೆ ಕುರಿತು ಹಿಂದಿನಿಂದಲೂ ವಿದ್ಯಾರ್ಥಿಗಳು ಒತ್ತಾಯಿಸುತ್ತಿದ್ದು, ಶೀಘ್ರದಲ್ಲಿಯೇ ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು.
ಈ ಸಂಬಂಧ ಪದವಿ ಶಿಕ್ಷಣ ಇಲಾಖೆಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗಿದೆ. ಈಗಾಗಲೆ ನೂತನ ಕಾಲೇಜು  ನಿರ್ಮಾಣಕ್ಕೆ ಸ್ಥಳ ಗುರುತಿಸಲು ಕ್ರಮ ಕೈಗೊಳ್ಳಲಾಗಿದೆ.
ಈ ಸಾಲಿನ ಅಥವಾ ಮುಂದಿನ ಶೈಕ್ಷಣಿಕ ವರ್ಷದಿಂದಲೇ ಕಾಲೇಜು ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.