ಶಿವಮೊಗ್ಗ

ವಿವಿಧ ತಾಂತ್ರಿಕ ಶಿಕ್ಷಣ ಪ್ರವೇಶಕ್ಕೆ ಅರ್ಜಿ ಆಹ್ವಾನ

Published On :

ಶಿವಮೊಗ್ಗ: ಶಿವಮೊಗ್ಗದ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರವು ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ವಿವಿಧ ತಾಂತ್ರಿಕ ಶಿಕ್ಷಣ ಪ್ರವೇಶಕ್ಕೆ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಟೂಲ್ ಅಂಡ್ ಡೈ ಮೇಕಿಂಗ್ ತರಬೇತಿಗೆ ವಾರ್ಷಿಕ ತರಬೇತಿ ಶುಲ್ಕ 20 ಸಾವಿರ (3 ಪ್ಲಸ್ 1 ವರ್ಷಗಳ ಅವಧಿ) ಪರಿಶಿಷ್ಟ ಜಾತಿ-ವರ್ಗದವರಿಗೆ ಅರ್ಜಿ ಶುಲ್ಕ 125, ಇತರೆ ವರ್ಗದ ಅಭ್ಯರ್ಥಿಗಳಿಗೆ 250 ಪಾವತಿ ಮಾಡಬೇಕು. 2 ವರ್ಷಗಳ ಅವಧಿಯ ಟೂಲ್ ಅಂಡ್ ಡೈ ಟೆಕ್ನಿಷಿಯನ್ ತರಬೇತಿಗೆ ವಾರ್ಷಿಕ ತರಬೇತಿ ಶುಲ್ಕ 18 ಸಾವಿರ ಹಾಗೂ 1 ವರ್ಷ ಅವಧಿಯ ಟೂಲ್ ರೂಂ ಮಷಿನಿಸ್ಟ್ ತ
ರಬೇತಿಗೆ ವಾರ್ಷಿಕ ತರಬೇತಿ ಶುಲ್ಕ 18 ಸಾವಿರ ನಿಗದಿಪಡಿಸಿದೆ. ಅರ್ಜಿ ಶುಲ್ಕ ಪರಿಶಿಷ್ಟ ಜಾತಿ, ವರ್ಗದ ಅಭ್ಯರ್ಥಿಗಳಿಗೆ 50 ಹಾಗೂ ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 100 ನಿಗದಿ ಮಾಡಿದ್ದು, ಪ್ರವೇಶ ಪ್ರಕ್ರಿಯೆಯನ್ನು ಕೌನ್ಸಿಲಿಂಗ್ ಮುಖೇನ ಮೆರಿಟ್ ಹಾಗೂ ರೋಸ್ಟರ್ ಆಧಾರದ ಮೇಲೆ ನಡೆಸಲಾಗುವುದು. ಪ್ರವೇಶ ಪಡೆಯಲಿಚ್ಚಿಸುವ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಮಾಚೇನಹಳ್ಳಿಯ ನಿಧಿಗೆ ಕೈಗಾರಿಕಾ ವಸಾಹತು ಪ್ರದೇಶದಲ್ಲಿರುವ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರವನ್ನು ಸಂಪರ್ಕಿಸಬಹುದು. ವಿವರಗಳಿಗಾಗಿ- 08182- 242054.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.