ಶಿವಮೊಗ್ಗ

ಪಿಯುಗೆ ದುಬಾರಿ ಡೊನೇಷನ್: ಪ್ರತಿಭಟನೆ

Published On :

ಕ.ಪ್ರ.ವಾರ್ತೆ, ಶಿವಮೊಗ್ಗ, ಮೇ 21
ನಗರದ ಖಾಸಗಿ ಕಾಲೇಜುಗಳಲ್ಲಿ ಕಾನೂನು ಬಾಹಿರವಾಗಿ ವಿದ್ಯಾರ್ಥಿಗಳಿಂದ ಡೊನೇಷನ್ ಪಡೆಯಲಾಗುತ್ತಿದೆ ಎಂದು ಆರೋಪಿಸಿ ಎನ್‌ಎಸ್‌ಯುಐ ಕಾರ್ಯಕರ್ತರು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶನದಂತೆ ಪ್ರಥಮ ಪಿಯುಸಿಗೆ ಸಾಮಾನ್ಯ ವರ್ಗದ ವಿದ್ಯಾರ್ಥಿಗಳಿಂದ ಅನುದಾನಿತ ಮತ್ತು ಅನುದಾನ ರಹಿತ ಕಾಲೇಜುಗಳಲ್ಲಿ ಕೇವಲ 1500 ರುಪಾಯಿನಿಂದ 2000 ವರೆಗೆ ಮಾತ್ರ ಪ್ರವೇಶ ಶುಲ್ಕ ಪಡೆಯಲು ಅವಕಾಶವಿದೆ. ಆದರೆ, ಈ ಕಾಲೇಜುಗಳಲ್ಲಿ ಇಲಾಖೆಯ ನಿಯಮಗಳನ್ನು ಗಾಳಿಗೆ ತೂರಲಾಗಿದೆ ಎಂದು ಪ್ರತಿಭಟನಾ ನಿರತ ಎನ್‌ಎಸ್‌ಯು ಮುಖಂಡರು ಆರೋಪಿಸಿದರು.
40 ಸಾವಿರಕ್ಕೆ ಮಾರಾಟ: ನಗರದ ಪ್ರಮುಖ ಪಿಯು ಕಾಲೇಜುಗಳಲ್ಲಿ ಪ್ರಥಮ ಪಿಯು ಪ್ರವೇಶಕ್ಕೆ ಮನಬಂದಂತೆ ಶುಲ್ಕ ವಸೂಲು ಮಾಡಲಾಗುತ್ತಿದೆ. ಇತ್ತೀಚೆಗೆ ಪ್ರಾರಂಭವಾಗಿರುವ ಕೆಲಸ ಶಿಕ್ಷಣ ಸಂಸ್ಥೆಗಳಲ್ಲೂ ಪಿಯು ಸೀಟು 40 ಸಾವಿರಕ್ಕೆ ಮಾರಾಟವಾಗಿದೆ ಎಂದು ಆಪಾದಿಸಿದರು.
ಇಲಾಖೆಯ ನಿಯಮಾವಳಿಯಂತೆ ನಿಗದಿಪಡಿಸಿದ ಅರ್ಜಿ ನಮೂನೆಯಲ್ಲಿಯೇ ಪಡೆದ ಅರ್ಜಿಗಳನ್ನು ಪರಿಶೀಲಿಸಿ ಮೆರಿಟ್ ಆಧಾರದಲ್ಲಿ ಆಯ್ಕೆ ಪಟ್ಟಿ ಪ್ರಕಟಿಸಿದ ನಂತರ ಪ್ರವೇಶ ನೀಡಬೇಕಿದೆ. ಹೀಗಿದ್ದರೂ ಹಲವು ಖಾಸಗಿ ಕಾಲೇಜುಗಳಲ್ಲಿ ಅರ್ಜಿ ಪಡೆಯುವ ಸಂದರ್ಭದಲ್ಲಿಯೇ ಡೊನೇಷನ್‌ಗೆ ಡಿಮ್ಯಾಂಡ್ ಮಾಡುತ್ತಿದ್ದಾರೆ. ಈ ಮೂಲಕ ವಿದ್ಯಾರ್ಥಿಗಳು ಹಾಗೂ ಪೋಷಕರ ಮೇಲೆ ಒತ್ತಡ ಹೇರಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಕ್ರಮಕ್ಕೆ ಆಗ್ರಹ: ಇಲಾಖೆ ಕಣ್ಣೆದುರಲ್ಲೇ ಇಷ್ಟೆಲ್ಲಾ ಅವ್ಯವಹಾರ ನಡೆಯುತ್ತಿದ್ದರೂ ಉಪ ನಿರ್ದೇಶಕರು ಕುಣ್ಣುಮುಚ್ಚಿ ಕುಳಿದಿದ್ದಾರೆ ಎಂದು ಆರೋಪಿಸಿದ ಮುಖಂಡರು, ಆಯ್ಕೆ ಪಟ್ಟಿ ಪ್ರಕಟಿಸುವ ಮೊದಲೇ ಪ್ರವೇಶ ನೀಡುವ ಕಾಲೇಜುಗಳ ಆಡಳಿತ ಮಂಡಳಿ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕು, ಹೆಚ್ಚು ಶುಲ್ಕ ವಸೂಲಿ ಮಾಡುತ್ತಿರುವವರ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿದರು.
ಎನ್‌ಎಸ್‌ಯುಐ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಜಿ. ಮಧುಸೂಧನ್, ಜಿಲ್ಲಾಧ್ಯಕ್ಷ ಚೇತನ್, ವಿಕಾಸ್, ಶ್ರೀಜಿತ್, ಸಂತೋಷ್, ಲೋಕೇಶ್, ವಿಕಾಸ್ ಮೊದಲಾದವರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.