ಸಾಮೂಹಿಕ ವಿವಾಹ 26ರಂದು
ಭದ್ರಾವತಿ: ವಿಶ್ವ ಹಿಂದೂ ಪರಿಷತ್ ಹಾಗೂ ವಿಶ್ವಭಾರತಿ ವಿಶ್ವಸ್ಥ ಮಂಡಲಿ ಸಂಯುಕ್ತಾಶ್ರಯದಲ್ಲಿ 26ರಂದು ಪಟ್ಟಣದ ಶ್ರೀ ಮಂಜುನಾಥಸ್ವಾಮಿ ಕಲ್ಯಾಣ ಮಂಟಪದಲ್ಲಿ ನಡೆಯಲಿರುವ 31ನೇ ವರ್ಷದ ಉಚಿತ ಸಾಮೂಹಿಕ ವಿವಾಹ ನಡೆಯಲಿದೆ ಎಂದು ವಿ.ಹಿಂ.ಪ.ನ ಪ್ರಾಂತ ಉಪಾಧ್ಯಕ್ಷ ಹಾ. ರಾಮಪ್ಪ ತಿಳಿಸಿದ್ದಾರೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಶಿವಸುಬ್ರಮಣ್ಯಾಶ್ರಮದ ತವತ್ತಿರು ಸ್ವಾಮಿಗಳು ನೆರವೇರಿಸಲಿದ್ದು, ತರೀಕೆರೆ ತಾಲೂಕಿನ ಎಣ್ಣೆಹೊಳೆ ಮಠದ ಶ್ರೀ ವೃಷಭೇಂದ್ರ ದೇಶಿಕೇಂದ್ರ ಸ್ವಾಮಿಗಳು ಆಶೀರ್ವಚನ ನೀಡಲಿದ್ದಾರೆ. ಭದ್ರಾವತಿ ಶಾಸಕ ಎಂ.ಜೆ. ಅಪ್ಪಾಜಿ ಹಾಗೂ ಬೆಂಗಳೂರಿನ ವಿ.ಹಿಂ.ಪ.ನ ಪ್ರಾಂತ ಸಂಪರ್ಕ ಹಾಗೂ ಗೋಸೇವಾ ಆಯೋಗದ ಸದಸ್ಯ ಬಿ.ಎಸ್. ಮಂಜುನಾಥಸ್ವಾಮಿ ಮುಖ್ಯ ಅತಿಥಿಗಳಾಗಿ ಆಗಮಿಸುವರು. ಅತಿಥಿಗಳಾಗಿ ಮಾಜಿ ಶಾಸಕ ಬಿ.ಕೆ. ಸಂಗಮೇಶ್ವರ, ಡಿವೈಎಸ್ಪಿ ಟಿ.ಶ್ರೀಧರ್, ವಿ.ಹಿಂ.ಪ ಅಧ್ಯಕ್ಷ ಎ.ಬಿ. ನಂಜಪ್ಪ, ವಿ.ಹಿಂ.ಪ ಗ್ರಾಮಾಂತರ ಘಟಕದ ಅಧ್ಯಕ್ಷ ಎಸ್. ಮುತ್ತುರಾಮಲಿಂಗಂ ಹಾಗೂ ಶಾರದಾ ಟ್ರಾನ್ಸ್ಪೋರ್ಟ್ ಮಾಲೀಕ ಶಿವಮೂರ್ತಿ ಭಾಗವಹಿಸುವರು. ಭದ್ರಾ ನರ್ಸಿಂಗ್ ಹೋಮ್ನ ಡಾ. ಟಿ.ನರೇಂದ್ರಭಟ್ ಅಧ್ಯಕ್ಷತೆ ವಹಿಸುವರು.
ಶ್ರೀರಾಮನಗರದ ಶೂನ್ಯಬಂಡವಾಳದ ನೈಸರ್ಗಿಕ ಕೃಷಿಕ ಮಾದೇಗೌಡ ಅವರನ್ನು ಸನ್ಮಾನಿಸಲಾಗುವುದಲ್ಲದೆ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಈ ಸಂದರ್ಭದಲ್ಲಿ ಪುರಸ್ಕರಿಸಲಾಗುವುದು. ವಿ.ಹಿಂ.ಪ.ನ ಸಹ ಪ್ರಧಾನ ಕಾರ್ಯದರ್ಶಿ ಡಿ.ಆರ್. ಶಿವಕುಮಾರ್, ಕಾರ್ಯದರ್ಶಿ ವೈ.ಎಸ್. ರಾಮಮೂರ್ತಿ, ಖಜಾಂಚಿ ಎಂ. ವೀರಭದ್ರಪ್ಪ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

