ಶಿವಮೊಗ್ಗ

ದಂಡ ಶುಲ್ಕವಿಲ್ಲದೆ ಪರೀಕ್ಷಾ ಶುಲ್ಕ

Published On :

ಶಿವಮೊಗ್ಗ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಜುಲೈ 2013ರ ಎಂಎಸ್ಸಿ ಪದವಿ ಪರೀಕ್ಷೆಯ ಪ್ರಥಮ ಮತ್ತು ತೃತೀಯ ಸೆಮಿಸ್ಟರ್ ಪರೀಕ್ಷೆಗಳಿಗೆ ಶುಲ್ಕ ಪಾವತಿಸಲು ದಂಡಶುಲ್ಕವಿಲ್ಲದೆ ಜೂ.10 ಕೊನೆಯ ದಿನಾಂಕವಾಗಿದ್ದು, ಹಾಗೂ 200 ದಂಡಶುಲ್ಕದೊಂದಿಗೆ ಪಾವತಿಸಲು ಜೂ.20 ಅಂತಿಮ ದಿನ.
ಹೆಚ್ಚಿನ ಮಾಹಿತಿಗಾಗಿ ಕುಲಸಚಿವರು (ಪರೀಕ್ಷಾಂಗ)ರನ್ನು 0821 -2515169ಗೆ ಸಂಪರ್ಕಿಸುವಂತೆ ಕೋರಲಾಗಿದೆ. ವಿವಿಯ ವೆಬ್‌ಸೈಟ್ ಢಿಢಿಢಿ.್ಞಡ್ಟ್ಡಟಣಡ್ಟ್ಠಜ.ಜಜ್ಡ.್ಝಟಿ ನಲ್ಲಿ ಹಾಗೂ ಹತ್ತಿರದ ಪ್ರಾದೇಶಿಕ ಕಚೇರಿಯಲ್ಲಿ ಅರ್ಜಿಯನ್ನು ಪಡೆಯಬಹುದಾಗಿದೆ.
ಅಹವಾಲು ಸ್ವೀಕಾರ
ಶಿವಮೊಗ್ಗ: ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕ ಮತ್ತು ಪೊಲೀಸ್ ಇನ್ಸ್‌ಪೆಕ್ಟರ್ ಮೇ ಮಾಹೆಯ ನಿಗದಿತ ದಿನಾಂಕಗಳಂದು ಜಿಲ್ಲೆಯ ಎಲ್ಲ ತಾಲೂಕುಗಳ ಪ್ರವಾಸಿ ಮಂದಿರಗಳಲ್ಲಿ ಹಾಜರಿದ್ದು, ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ.
ಪೊಲೀಸ್ ಉಪಾಧೀಕ್ಷಕರು ಮೇ 24ರಂದು ಬೆಳಗ್ಗೆ 10.30ರಿಂದ 1.30ರ ವರೆಗೆ ಶಿಕಾರಿಪುರ, ಮಧ್ಯಾಹ್ನ 3ರಿಂದ ಸಂಜೆ 5.30ರ ವರೆಗೆ ಸೊರಬ ಹಾಗೂ ಮೇ 25ರಂದು ಬೆಳಗ್ಗೆ 10.30ರಿಂದ 1.30ರ ವರೆಗೆ ತೀರ್ಥಹಳ್ಳಿ ಪ್ರವಾಸಿ ಮಂದಿರಗಳಲ್ಲಿ ಹಾಗೂ ಪೊಲೀಸ್ ಇನ್ಸ್‌ಫೆಕ್ಟರ್ ಅವರು ಮೇ 24ರಂದು ಬೆಳಿಗ್ಗೆ 10.30ರಿಂದ 1.30ರವರೆಗೆ ಸಾಗರ, ಮಧ್ಯಾಹ್ನ 3ರಿಂದ ಸಂಜೆ 5.30ರವರೆಗೆ ಹೊಸನಗರ ಹಾಗೂ ಮೇ 25ರಂದು ಬೆಳಿಗ್ಗೆ 10.30ರಿಂದ 1.30ರವರೆಗೆ ಭದ್ರಾವತಿ ಪ್ರವಾಸಿ ಮಂದಿರಗಳಲ್ಲಿ ಹಾಜರಿದ್ದು, ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸುವರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.