ಶಿವಮೊಗ್ಗ

ನಾಳೆ ಮೂಳೆ ಸಾಂದ್ರತಾ ಶಿಬಿರ

Published On :

ಕ.ಪ್ರ.ವಾರ್ತೆ ಟಿ ಶಿವಮೊಗ್ಗ ಟಿ  ಮೇ 22
ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಡೆಕ್ಸಾ ಸ್ಕ್ಯಾನಿಂಗ್ ಸೆಂಟರ್ ಸಹಯೋಗದಲ್ಲಿ ಮೇ 26ರಂದು ನಗರದ ಜಗನ್ನಾಥ ನರ್ಸಿಂಗ್ ಹೋಮ್‌ನಲ್ಲಿ ಬೃಹತ್ ಮೂಳೆ ಸಾಂದ್ರತಾ ಶಿಬಿರ ನಡೆಯಲಿದೆ.
ಮೂಳೆ ಸಂಬಂಧಿ ರೋಗಗಳ ಕುರಿತು ಅತ್ಯಾಧುನಿಕ ಯಂತ್ರೋಪಕರಣಗಳಿಂದ ರೋಗ ಪತ್ತೆ ಮಾಡಲಾಗುವುದು. ಇದರ ಉಪಯೋಗವನ್ನು ಸಾರ್ವಜನಿಕರು ಪಡೆಯಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಶಿವಣ್ಣರೆಡ್ಡಿ  ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಆಸ್ಟಿಯೋ ಪೊರೋಸಿಸ್ ಅಥವಾ ಅಸ್ತಿ ರಂಧ್ರತೆ ಎಂಬುದು ಜಾಗತಿಕ ಆರೋಗ್ಯ ಸಮಸ್ಯೆಯಾಗಿದ್ದು, ದೇಶದಲ್ಲಿ ಶೇ.60ರಷ್ಟು ವಯಸ್ಕ ಜನರು ಈ ರೋಗದಿಂದ ಬಳಲುತ್ತಿದ್ದಾರೆಂದು ಅವರು ಮಾಹಿತಿ ನೀಡಿದರು.
ಆಧುನಿಕ ಜೀವನ ಶೈಲಿ ಅಥವಾ ಮುನ್ನೆಚ್ಚರಿಕೆ ಇಲ್ಲದಿರುವುದೇ ಮೂಳೆ ಸಂಬಂಧಿ ರೋಗ ಉಲ್ಬಣಕ್ಕೆ ಕಾರಣವಾಗಿದೆ. ಸಾರ್ವಜನಿಕರು ಯೋಜನೆ ಸದುಪಯೋಗ ಪಡೆಯಬೇಕೆಂದರು.
26ರಂದು ಬೆಳಿಗ್ಗೆ 9.30ರಿಂದ ಸಂಜೆ 4ಗಂಟೆವರೆಗೆ ನುರಿತ ವೈದ್ಯರಿಂದ ವಿಶ್ವ ಆರೋಗ್ಯ ಸಂಸ್ಥೆ ಮಾನ್ಯತೆ ಪಡೆದ ಡೆಕ್ಸಾ ಯಂತ್ರದಿಂದ ಶೇ.50ರ ರಿಯಾಯಿತಿಯಲ್ಲಿ ರೋಗ ಪತ್ತೆ ಮಾಡಲಾಗುವುದು ಎಂದು ಅವರು ತಿಳಿಸಿದರು. ಡೆಕ್ಸಾ ಸ್ಕಾನಿಂಗ್ ಸೆಂಟರ್‌ನ ಅರವಿಂದ್, ಜಯಪ್ರಕಾಶ್ ಉಪಸ್ಥಿತರಿದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.