ಶಿವಮೊಗ್ಗ

ನೀರಿನ ಸಮಸ್ಯೆ: ಸೂಕ್ತ ಕ್ರಮಕ್ಕೆ ಸೂಚನೆ

Published On :

ವಿದ್ಯುತ್ ತೊಂದರೆಯೇ ನೀರು ಪೂರೈಕೆ ಸಮಸ್ಯೆಗೆ ಕಾರಣ: ಕಿಮ್ಮನೆ ೤ ವಿದ್ಯಾವಂತರೇ ಅಭದ್ರತೆಗೆ ಕಾರಣ

ಕ.ಪ್ರ.ವಾರ್ತೆ, ಶಿವಮೊಗ್ಗ, ಮೇ 23
ಕುಡಿಯುವ ನೀರಿನ ಸಮಸ್ಯೆ ಬಗೆಹರಿಯಬೇಕೆಂದರೆ ವಿದ್ಯುತ್ ಸಮಸ್ಯೆ ನಿವಾರಣೆಯಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕಿಮ್ಮನೆ ರತ್ನಾಕರ್ ಹೇಳಿದರು.
 ಜಿಲ್ಲೆಯಲ್ಲಿ ತಲೆದೋರಿರುವ ಕುಡಿಯುವ ನೀರಿನ ಸಮಸ್ಯೆ ಕುರಿತು ಗುರುವಾರ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು,
ವಿದ್ಯುತ್ ಸರಬರಾಜಿನಲ್ಲಾಗುವ ತೊಡಕುಗಳನ್ನು ತಕ್ಷಣ ನಿವಾರಿಸಿಕೊಂಡು ಜಿಲ್ಲೆಯಯಲ್ಲಿ ಸಮರ್ಪಕವಾಗಿ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಸೂಚಿಸಿದರು.
ಯೋಜನೆ ಪೂರ್ಣಗೊಳಿಸಿ: ಶಾಸಕರ ನೇತೃತ್ವದ ಕಾರ್ಯಪಡೆ ಯೋಜನೆ ಹಾಗೂ ತುರ್ತು ಪರಿಹಾರ ನಿಧಿ ಅಡಿಯಲ್ಲಿ ಕೈಗೆತ್ತಿಕೊಂಡಿರುವ ಯೋಜನೆಗಳನ್ನು ನಿಗದಿತ ಸಮಯದಲ್ಲಿ ಪೂರ್ಣಗೊಳಿಸಬೇಕು. ಈ ಸಂಬಂಧ ಕೊರತೆಗಳಿದ್ದರೆ ಮೇಲಧಿಕಾರಿಗಳ ಗಮನಕ್ಕೆ ತಂದು ಬಗೆಹರಿಸಿಕೊಳ್ಳುವಂತೆ ಅವರು ಸೂಚಿಸಿದರು.
 ಜಿಲ್ಲೆಗೆ ಹಂಚಿಕೆಯಾಗುವ ವಿದ್ಯುತ್ನಲ್ಲಿ ಕೊರತೆಯಿದ್ದಲ್ಲಿ ಅಥವಾ ವಿದ್ಯುತ್ ಸರಬರಾಜಿಗೆ ಸರ್ಕಾರದ ಮಟ್ಟದಲ್ಲಿಯೇ ಅವಶ್ಯಕತೆಗಳಿದ್ದಲ್ಲಿ ಸಂಬಂಧಪಟ್ಟಂತೆ ವರದಿ ನೀಡಿದಲ್ಲಿ ಸಮಸ್ಯೆ ಬಗೆಹರಿಸಲಾಗುವುದು ಎಂದು ಸಚಿವರು ತಿಳಿಸಿದರು.
ಅಕ್ರಮ ಸಂಪರ್ಕ: ಶಿವಮೊಗ್ಗ ನಗರದಲ್ಲಿನ ಕೆಲವರು ವಾಣಿಜ್ಯ ಉದ್ದೇಶಕ್ಕಾಗಿ ಮುಖ್ಯ ನೀರಿನ ಸರಬರಾಜು ಕೊಳವೆಯಿಂದಲೇ ಅಕ್ರಮವಾಗಿ ಸಂಪರ್ಕ ಹೊಂದಿರುವ ಬಗ್ಗೆ ರಾಜ್ಯಸಭಾ ಸದಸ್ಯರಾದ ಆಯನೂರು ಮಂಜುನಾಥ್ ಪ್ರಾಸ್ತಾಪಿಸಿದ ಹಿನ್ನೆಲೆಯಲ್ಲಿ ನಗರಸಭೆ ವ್ಯಾಪ್ತಿಯಲ್ಲಿನ ಇಂತಹ ಅಕ್ರಮ ಸಂಪರ್ಕಗಳನ್ನು ತಕ್ಷಣ ಕಡಿತಗೊಳಿಸುವಂತೆ ಅವರು ಸೂಚಿಸಿದರು.
 ಜಿಲ್ಲೆಯಲ್ಲಿ ಕೃಷಿ ಇಲಾಖೆಗೆ ಸಂಬಂಧಿಸಿದಂತೆ ಬಿತ್ತನೆ ಬೀಜ ಹಾಗೂ ರಸಗೊಬ್ಬರ ದಾಸ್ತಾನು ಸಮರ್ಪಕವಾಗಿದ್ದು, ಬೇಡಿಕೆಗನುಸಾರ ಬೀಜ, ಗೊಬ್ಬರ ವಿತರಿಸಲಾಗುವುದು. ಈ ವಿಷಯದಲ್ಲಿ ಯಾವುದೇ ಕೊರತೆ ಇಲ್ಲ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ಡಾ. ಶಿವಮೂರ್ತಪ್ಪ ಮಾಹಿತಿ ನೀಡಿದರು.
ಮೇವು ದಾಸ್ತಾನು: ಅಲ್ಲದೆ, ಜೂನ್ ಅಂತ್ಯದವರೆಗೆ ಜಿಲ್ಲೆಯ ಜಾನುವಾರುಗಳಿಗೆ ಅಗತ್ಯ ಮೇವು ದಾಸ್ತಾನು ಇದೆ. ಅಲ್ಲದೆ, ಜಿಲ್ಲೆಯ ಅಲ್ಲಲ್ಲಿ ಈಗಾಗಲೇ ಮಳೆ ಬಿದ್ದಿರುವುದರಿಂದ ಮೇವಿನ ಅಭಾವವಿಲ್ಲವೆಂದು ಅಧಿಕಾರಿಗಳು ಸಭೆಯ ಗಮನಕ್ಕೆ ತಂದರು.
 ಜಿಪಂ ಅಧ್ಯಕ್ಷೆ ಗೀತಾ ಮಲ್ಲಿಕಾರ್ಜುನ್, ಉಪಾಧ್ಯಕ್ಷೆ ಹೇಮಾ ಪಾವನಿ, ಜಿಲ್ಲಾಧಿಕಾರಿ ವಿಪುಲ್ ಬನ್ಸಾಲ್, ಜಿಪಂ ಸಿಇಒ ಸಸಿಕಾಂತ್ ಸೆಂಥಿಲ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ. ಬಸವರಾಜ್ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.