ಹಲಸನ್ನು ವಾಣಿಜ್ಯ ಬೆಳೆ: ರಂಗನಾಥ್ ಅಭಿಮತ
ಕ.ಪ್ರ.ವಾರ್ತೆ, ಸಾಗರ, ಮೇ 23
ಹಲಸನ್ನು ವಾಣಿಜ್ಯ ದೃಷ್ಟಿಯಿಂದ ಬೆಳೆಯುವ ನಿಟ್ಟಿನಲ್ಲಿ ಮಲೆನಾಡಿನ ರೈತರು ಗಂಭೀರ ಚಿಂತನೆ ನಡೆಸಬೇಕು ಎಂದು ಶಿವಮೊಗ್ಗ ಕರ್ನಾಟಕ ಬ್ಯಾಂಕಿನ ಎ.ಜಿ.ಎಂ. ರಂಗನಾಥ್ ಹೇಳಿದರು.
ಹೆಗ್ಗೋಡಿನ ಬಾಲನಂದನ ಟ್ರಸ್ಟ್ ಸಾಗರದ ಅಜಿತ ಸಭಾಭವನದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಹಲಸು ಬೆಳೆಸು ಅಭಿಯಾನ- 2013ನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪಶ್ಚಿಮ ಘಟ್ಟಮೂಲದ ಹಲಸಿನ ಬೆಳೆಯನ್ನು ಬೇರೆ ದೇಶಗಳಲ್ಲಿ ವಾಣಿಜ್ಯ ಬೆಳೆಯಾಗಿ ಬೆಳೆಯುತ್ತಿದ್ದರೂ ನಮ್ಮಲ್ಲಿ ಅದನ್ನು ನಿರ್ಲಕ್ಷಿಸಲಾಗುತ್ತಿದೆ. ಪಶ್ಚಿಮಘಟ್ಟದ ಮಳೆಕಾಡುಗಳಲ್ಲಿ ಸಹಜವಾಗಿ ಬೆಳೆಯುವ ಹಲಸು ಶ್ರೀಲಂಕಾ, ಥೈಲ್ಯಾಂಡ್, ಇಂಡೋನೇಶಿಯಾ ಮುಂತಾದ ದೇಶಗಳಲ್ಲಿ ವಾಣಿಜ್ಯ ಬೆಳೆಯಾಗಿದೆ. ಇದರ ಬಹುಪಯೋಗವನ್ನು ಕಂಡುಕೊಂಡಿರುವ ಅಲ್ಲಿನ ಜನತೆ ವೈವಿಧ್ಯಮಯವಾಗಿ ಹಲಸನ್ನು ಬೆಳೆಯುತ್ತಿದ್ದಾರೆ. ಈ ನಿಟ್ಟಿನಲ್ಲಿ ನಾವುಗಳು ಹಿಂದೆ ಬಿದ್ದಿದ್ದೇವೆ ಎಂದು ವಿಷಾದಿಸಿದರು.
ಉದ್ಯೋಗ ಸೃಷ್ಟಿ: ಹಲಸು ಇನ್ನೊಂದು ಕಲ್ಪವೃಕ್ಷವಾಗಿದ್ದು, ಎಲೆಯಿಂದ ಫಲದವರೆಗೆ ಎಲ್ಲವೂ ಉಪಯೋಗಕ್ಕೆ ಬರುತ್ತದೆ.
ಕೆಲವು ದೇಶಗಳಲ್ಲಿ ಹಲಸನ್ನು ಆಹಾರವಾಗಿಯೂ ಬಳಕೆ ಮಾಡಲಾಗುತ್ತಿದೆ. ಹಲಸಿನ ಹಣ್ಣಿನಲ್ಲಿ ನಾರಿನ ಅಂಶ, ಪ್ರೋಟಿನ್, ಖನಿಜಾಂಶವಿದ್ದು ಇದನ್ನು ಗ್ರಾಮೀಣ ಪ್ರದೇಶದಲ್ಲಿ ಹೆಚ್ಚು ಬೆಳೆಯುವುದರಿಂದ ಸ್ಥಳೀಯವಾಗಿ ಉದ್ಯೋಗ ಸೃಷ್ಟಿಸಲು ಸಹ ಸಾಧ್ಯವಿದೆ. ಲಾಭ ಗಳಿಕೆಯ ಜೊತೆಗೆ ಒಂದು ತಳಿಯನ್ನು ಬೆಳೆಸುವ ಬಗ್ಗೆ ಗಮನ ಅಗತ್ಯ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಬಾಲನಂದನ ಟ್ರಸ್ಟ್ ಅಧ್ಯಕ್ಷ ರವೀಂದ್ರ ಕಾಶಿ, ಮಲೆನಾಡು ಭಾಗದಲ್ಲಿ ಹೆಚ್ಚು ಕಂಡು ಬರುವ ಹಲಸಿನ ತಳಿಯನ್ನು ಬೆಳೆಸುವ ಜೊತೆಗೆ ಜೀವನೋಪಾಯಕ್ಕಾಗಿ ಬಳಸಿಕೊಳ್ಳುವ ನಿಟ್ಟಿನಲ್ಲಿ ಜಾಗೃತಿ ಮೂಡಿಸುವಲ್ಲಿ ಇಂತಹ ಅಭಿಯಾನವನ್ನು ಬೇರೆಬೇರೆ ಭಾಗಗಳಲ್ಲಿ ನಡೆಸಲಾಗುತ್ತಿದೆ ಎಂದು ಹೇಳಿದರು.
ಶಿವಮೊಗ್ಗ ನವಿಲೆ ಕಣಷಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಡಾ.ಜಯಶ್ರೀ, ಡಾ.ಲಕ್ಷ್ಮೀನಾರಾಯಣ ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

