ರಸ್ತೆ ಅಭಿವೃದ್ಧಿಗೆ 30 ಕೋಟಿ: ಕಿಮ್ಮನೆ
ಹೊಸನಗರ: ನಗರ ಹೋಬಳಿಯ ವಿವಿಧ ರಸ್ತೆ ಅಭಿವೃದ್ಧಿಗೆ 30 ಕೋಟಿ ಮಂಜೂರು ಮಾಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಹೇಳಿದರು.
ನಗರ ಹೋಬಳಿಯ ನಿಯೋಗದೊಂದಿಗೆ ಮಾತನಾಡಿದ ಅವರು, ಹುಲಿಕಲ್ ಘಾಟ್, ಮಾಸ್ತಿಕಟ್ಟೆ-ಕಾನಗೋಡಿನಿಂದ ಕವಲೇ ದುರ್ಗಾ ಕ್ರಾಸ್ವರೆಗೆ ರಸ್ತೆ ಅಭಿವೃದ್ಧಿಗೆ 17.25 ಕೋಟಿ ಮತ್ತು ಜಯನಗರದಿಂದ ನಗರ ಮಾರ್ಗವಾಗಿ ಸಂಪೇಕಟ್ಟೆ ರಸ್ತೆ ಅಭಿವೃದ್ಧಿಗೆ 13 ಕೋಟಿ ಮಂಜೂರಾಗಿದೆ ಎಂದರು.
ಕಾಲೇಜಿಗೆ ಮನವಿ: ನಗರ ಹೋಬಳಿ ಕೇಂದ್ರದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಅವಶ್ಯಕತೆ ಇದೆ ಮತ್ತು ಹಿನ್ನೀರಿನಿಂದ ತುಂಬಿರುವ ಪ್ರದೇಶಗಳ ವಿದ್ಯಾರ್ಥಿಗಳ ಸುಲಲಿತ ವ್ಯಾಸಂಗಕ್ಕಾಗಿ ವಿದ್ಯಾರ್ಥಿ ನಿಲಯಯ ಅಗತ್ಯವಿದ್ದು ಮಂಜೂರು ಮಾಡಿಸುವ ನಿಯೋಗ ಮನವಿ ಮಾಡಿದ್ದು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಭರವಸೆ ನೀಡಿದರು.
ಪ್ರಮುಖರಾದ ಸಿ. ರಾಮಚಂದ್ರರಾವ್, ದೇವಗಂಗೆ ಚಂದ್ರಶೇಖರಶೆಟ್ಟಿ, ನೂಲಿಗ್ಗೇರಿ ಅಬ್ಬಾಸ್, ತೋಟಪ್ಪಗೌಡ, ಗೋಪಾಲಶೆಟ್ಟಿ, ಅಂತೋನಿ ಸಿಕ್ವೇರಾ, ವಿನಾಯಕ ಉಡುಪ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

