ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ
ಭದ್ರಾವತಿ: ಭದ್ರಾವತಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯಿಂದ ನಡೆಯುತ್ತಿರುವ ಸರ್ಕಾರಿ ಮೆಟ್ರಿಕ್ ನಂತರದ ಬಾಲಕ ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಪಿಯುಸಿ, ಐಟಿಐ, ಪದವಿ ತರಗತಿಗಳಿಗೆ 2013-14ನೇ ಸಾಲಿನಲ್ಲಿ ಪ್ರವೇಶ ನೀಡಲು ನಿಗದಿತ ನಮೂನೆಯಲ್ಲಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ತಾಲೂಕು ಸಮಾಜ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.
ಪ್ರವೇಶ ಬಯಸುವ ವಿದ್ಯಾರ್ಥಿಗಳು ತಾಲೂಕು ಸಮಾಜ ಕಲ್ಯಾಣಾಧಿಕಾರಿಗಳಿಂದ ಅಥವಾ ಆಯಾ ವಿದ್ಯಾರ್ಥಿ ನಿಲಯದ ಮೇಲ್ವಿಚಾರಕರಿಂದ ಅಧಿಕೃತ ಅರ್ಜಿ ನಮೂನೆ ಪಡೆದು ಜೂ.30ರೊಳಗೆ ತಾಲೂಕು ಸಮಾಜ ಕಲ್ಯಾಣಾಧಿಕಾರಿಗಳ ಕಚೇರಿಗೆ ಅಥವಾ ಆಯಾ ವಿದ್ಯಾರ್ಥಿ ನಿಲಯಗಳ ಮೇಲ್ವಿಚಾರಕರಿಗೆ ಸಲ್ಲಿಸಬಹುದಾಗಿದೆ.
ಸರ್ಕಾರಿ ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಉಚಿತ ಊಟ, ವಾಸ್ತವ್ಯದ ವ್ಯವಸ್ಥೆ ಕಲ್ಪಿಸಲಾಗುವುದು. 2013-14ನೇ ಸಾಲಿನಲ್ಲಿ ಖಾಲಿ ಇರುವ ಸ್ಥಾನಗಳಿಗೆ ತಾಲೂಕು ಮಟ್ಟದ ಆಯ್ಕೆ ಸಮಿತಿಯಲ್ಲಿ ಆಯ್ಕೆಯಾಗುವ ವಿದ್ಯಾರ್ಥಿಗಳಿಗೆ ಮಾತ್ರ ಉಚಿತ ಪ್ರವೇಶ ನೀಡಲಾಗುವುದು. ಭದ್ರಾವತಿ ತಾಲೂಕಿನಲ್ಲಿ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ, ಸರ್ಕಾರಿ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ, ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ ಮತ್ತು ಶಂಕರಘಟ್ಟದಲ್ಲಿ ಸ್ನಾತಕೋತ್ತರ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಪ್ರವೇಶಾವಕಾಶವಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

