ಶಿವಮೊಗ್ಗ

ಭ್ರಷ್ಟಾಚಾರ ಮಟ್ಟ ಹಾಕಲು ಮೊದಲ ಆದ್ಯತೆ: ಆಂಜನೇಯ

Published On :

ಚಿತ್ರದುರ್ಗ: ಹಿಂದಿನ ಸರ್ಕಾರದಲ್ಲಿ ವರ್ಗಾವಣೆ ದಂಧೆ ಮಾಡಿಕೊಂಡಿದ್ದರಿಂದ ಜಿಲ್ಲೆಯಲ್ಲಿ ಆಡಳಿತ ಜಡ್ಡುಗಟ್ಟಿದ್ದು, ತಮ್ಮ ಅಧಿಕಾರದ ಅವಧಿಯಲ್ಲಿ ಯಾವುದೇ ಕಾರಣಕ್ಕೂ ಭ್ರಷ್ಟಾಚಾರಕ್ಕೆ ಅವಕಾಶ ನೀಡುವುದಿಲ್ಲ ಎಂದು ಸಮಾಜ ಕಲ್ಯಾಣ ಸಚಿವ ಎಚ್. ಆಂಜನೇಯ ಹೇಳಿದ್ದಾರೆ.
  ಜಿಲ್ಲಾ ಕಾಂಗ್ರೆಸ್‌ನಿಂದ ಭಾನುವಾರ ಹಳೆಯ ಮಾಧ್ಯಮಿಕ ಶಾಲಾ ಆವರಣದಲ್ಲಿ ಆಯೋಜಿಸಿದ್ದ ಮತದಾರರಿಗೆ ಕೃತಜ್ಞತೆ ಸಮರ್ಪಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಆಂಜನೇಯ, ಭ್ರಷ್ಟರನ್ನು ಮಟ್ಟ ಹಾಕುವುದೇ ತಮ್ಮ ಮೊದಲ ಕೆಲಸ ಎಂದರು.
ಜನಸೇವೆ:  ಜನರ ನೋವನ್ನು ಸಮಾಧಾನವಾಗಿ ಕೇಳಿ ಪರಿಹರಿಸುವ ಕೆಲಸವನ್ನು ಜಿಲ್ಲಾಧಿಕಾರಿಯಿಂದ ಹಿಡಿದು ಎಲ್ಲ ಅಧಿಕಾರಿಗಳೂ ಜನರ ಸೇವಕರಾಗಿ ಕೆಲಸ ಮಾಡುವಂತೆ ಮಾಡುತ್ತೇನೆ ಎಂದವರು ಹೇಳಿದರು.
 ಸ್ವಚ್ಛ, ಬಡವರ ಪರ ಆಡಳಿತ ನೀಡುವ ಪಕ್ಷದ ಭರವಸೆಯನ್ನು ಗೌರವಿಸಿ ಮತದಾರರು ಜನಾದೇಶ ನೀಡಿದ್ದಾರೆ. ಅವರ ವಿಶ್ವಾಸಕ್ಕೆ ಭಂಗ ಬಾರದ ರೀತಿಯಲ್ಲಿ ಸೇವೆ ಸಲ್ಲಿಸುವುದು ತಮ್ಮ ಉದ್ದೇಶ ಎಂದು ಹೇಳಿದರು. ಕಾರ್ಯಕರ್ತರು ಮತ್ತು ಮುಖಂಡರು ತಮ್ಮಿಂದ ಒಳ್ಳೆಯ ಕೆಲಸ ಮಾಡಿಸಬೇಕು. ನೊಂದವರ, ಬಡವರ ಕಣ್ಣೀರು ಒರೆಸುವ ಕೆಲಸ ಮಾಡಬೇಕು. ತಾವು ಆಂಜನೇಯ ಎಂಬ ಹೆಸರಿನವನಾದ ನಾನು ಎಂದು ಪ್ರಮಾಣ ವಚನ ಸ್ವೀಕರಿಸಲು ಸುದೀರ್ಘ 40 ವರ್ಷಗಳೇ ಬೇಕಾದವು ಎಂದವರು ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.