ಶಿವಮೊಗ್ಗ

ಮುಂದೂಡಿಕೆ

Published On :

ಶಿವಮೊಗ್ಗ: ಬಿಜೆಪಿ ಕೇಂದ್ರದ ಯುಪಿಎ ಸರ್ಕಾರದ ಆಡಳಿತ ವೈಫಲ್ಯ ವಿರೋಧಿಸಿ ಮೇ 27ರಂದು ಹಮ್ಮಿಕೊಂಡಿದ್ದ ಜೈಲ್ ಭರೋ ಚಳುವಳಿಯನ್ನು ಮುಂದೂಡಿದೆ. ಛತ್ತೀಸ್‌ಗಡದ ಸುಕ್ಮಾದಲ್ಲಿ ನಡೆದ ನಕ್ಸ್‌ಲ್ ದಾಳಿ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮ ರದ್ದಾಗಿದ್ದು, ದಿನಾಂಕವನ್ನು ಸದ್ಯದಲ್ಲೇ ತಿಳಿಸುವುದಾಗಿ ಬಿಜೆಪಿ ಜಿಲ್ಲಾ ಮಾಧ್ಯಮ ಕಾರ್ಯದರ್ಶಿ ಬಿ.ಆರ್. ಮಧುಸೂದನ್ ತಿಳಿಸಿದ್ದಾರೆ.
ಅರ್ಜಿ ಆಹ್ವಾನ
ಶಿವಮೊಗ್ಗ: ನಗರ ಡಿವಿಜನ್ ವೀರಶೈವ ವಿದ್ಯಾರ್ಥಿ ನಿಲಯ ವಿಶ್ವಸ್ಥ ಸಂಸ್ಥೆ ಸಮಾಜ ಬಾಂಧವರ ಮಕ್ಕಳಿಗೆ ಹಾಸ್ಟೆಲ್ ಸೌಲಭ್ಯ ಒದಗಿಸಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ಸಮಾಜದ ಪಿಯುಸಿ ಮತ್ತು ಪದವಿ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ವ್ಯವಸ್ಥೆ ಇದ್ದು, ಆಸಕ್ತ ವಿದ್ಯಾರ್ಥಿಗಳು ಮೇ 30ರೊಳಗೆ ಅರ್ಜಿ ಸಲ್ಲಿಸುವಂತೆ ಹಾಸ್ಟೆಲ್‌ನ ಕಾರ್ಯದರ್ಶಿ ಪಿ. ರುದ್ರೇಶ್ ತಿಳಿಸಿದ್ದಾರೆ. ವಿವರಗಳಿಗಾಗಿ- 9844127272.
ಅರಿವು ಮೂಡಿಸುವುದೇ ಉದ್ದೇಶ
ನರಸಿಂಹರಾಜಪುರ: ಗ್ರಾಮೀಣರಿಗೆ ಬ್ಯಾಂಕಿನ ಸೇವೆಗಳ ಬಗ್ಗೆ ಅರಿವು ಮೂಡಿಸುವುದೇ ಆರ್ಥಿಕ ಸಾಕ್ಷರತೆ ಕಾರ್ಯಕ್ರಮದ ಮುಖ್ಯ ಉದ್ದೇಶ ಎಂದು ಆರ್ಥಿಕ ಸಾಕ್ಷರತಾ ಅಧಿಕಾರಿ ಆನಂದ ಆಚಾರ್ಯ ತಿಳಿಸಿದರು.  ಅವರು ಭಾನುವಾರ ಲಿಂಗಾಪುರದ ಸಮುದಾಯ ಭವನದಲ್ಲಿ ರಾಷ್ಟೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕಿನ ಆಶ್ರಯದಲ್ಲಿ ಯಕ್ಷಗಾನ ಪ್ರದರ್ಶನದ ಮೂಲಕ ನಡೆದ ಜನ ಜಾಗೃತಿ ಅಭಿಯಾನದಲ್ಲಿ ಮಾತನಾಡಿದರು.  ಆರ್ಥಿಕ ಸಾಕ್ಷರತಾ ಕಾರ್ಯಕ್ರಮದಡಿ ಯಕ್ಷಗಾನದ ಮೂಲಕ ಉಳಿತಾಯ, ವಿಮೆ ಯೋಜನೆಯಲ್ಲಿ ಹಣ ಹೂಡಿಕೆ, ಸಾಲ ಪಡೆಯವುದು, ಹಣ ರವಾನೆ ಬಗ್ಗೆ ಅರಿವು ಮೂಡಿಸಲಾಗುವುದು. ಹಣ ಇಲ್ಲದಿದ್ದರೂ ಬ್ಯಾಂಕಿನಲ್ಲಿ ಖಾತೆ ತೆರೆಯುವ ಅವಕಾಶವನ್ನು ಭಾರತೀಯ ರಿಸರ್ವ್ ಬ್ಯಾಂಕ್ ಅವಕಾಶ ಕಲ್ಪಿಸಿದ್ದು, ಪ್ರತಿಯೊಬ್ಬರೂ ಯಾವುದೇ ಬ್ಯಾಂಕಿನಲ್ಲೂ ಸಹ ಖಾತೆ ತೆರೆಯಬಹುದು. ಇತ್ತೀಚೆಗೆ ಸರ್ಕಾರದ ಅನುದಾನ ನೇರವಾಗಿ ಬ್ಯಾಂಕಿನ ಖಾತೆಗೆ ಜಮಾ ಆಗಲಿದೆ. ಇದರಿಂದಾಗಿ ಪ್ರತಿಯೊಬ್ಬರೂ ಬ್ಯಾಂಕಿನಲ್ಲಿ ಖಾತೆ ತೆರೆಯುವುದು ಅವಶ್ಯಕ. ಜಿಲ್ಲೆಯಲ್ಲಿ ಆರ್ಥಿಕ ಕೇಂದ್ರ ಸ್ಥಾಪಿಸಿ ಹಳ್ಳಿ ಜನರಿಗೆ ಬ್ಯಾಂಕಿಂಗ್ ಸೇವೆ ಬಗ್ಗೆ ಅರಿವು ಮೂಡಿಸಲಾಗುವುದು, ನಬಾರ್ಡ್‌ನ ಜಿಲ್ಲಾ ಅಭಿವೃದ್ಧಿ ಅಧಿಕಾರಿ ಅನುರಾಧಾ ಮಾತನಾಡಿ, 50 ಸ್ಥಳಗಳಲ್ಲಿ ಯಕ್ಷಗಾನದ ಮೂಲಕ ಸಾಕ್ಷರತಾ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.