ಶಿವಮೊಗ್ಗ

50ಗೆ ಸ್ನೇಹಿತನ ಕೊಲೆ

Published On :

ಶಿವಮೊಗ್ಗ: ಕೇವಲ ಐವತ್ತು ರುಪಾಯಿ ಸಾಲ ಹಿಂದಿರುಗಿಸಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬ ತನ್ನ ಸ್ನೇಹಿತನನ್ನು ಕೊಲೆ ಮಾಡಿದ ಘಟನೆ ನಗರದ ಹೊಳೆಬೆನವಳ್ಳಿ ತಾಂಡದಲ್ಲಿ ನಡೆದಿದೆ.
ರಾಜು ಮೃತ ವ್ಯಕ್ತಿ (30). ಇವರು ಇಲ್ಲಿನ ನಾಗೇಶ್‌ನೊಂದಿಗೆ ಎಳನೀರು ಕೀಳಲು ಹೋಗುತ್ತಿದ್ದರು. ಅಲ್ಲದೇ, ಖರ್ಚಿಗಾಗಿ ರಾಜು, ನಾಗೇಶ್‌ನ ಬಳಿ 50 ಸಾಲ ಪಡೆದಿದ್ದ. ಈ ಹಣ ಪಡೆದ ರಾಜು ಬಹಳ ದಿನಗಳಿಂದ ಹಣ ವಾಪಸು ನೀಡದಿದ್ದಾಗ, ಸೋಮವಾರ ನಾಗೇಶ್ ಹಣ ಕೇಳಿದ್ದಾನೆ. ಈ ಸಂದರ್ಭದಲ್ಲಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದ್ದು, ಕೋಪಗೊಂಡ ನಾಗೇಶ್ ಇಟ್ಟಿಗೆಯಿಂದ ರಾಜುವಿನ ಎದೆಗೆ ಹೊಡೆದಿದ್ದಾನೆ. ಕೂಡಲೇ ಆಸ್ಪತ್ರೆಗೆ ಕರೆತರಲಾಯಿತಾದರೂ ರಾಜು ದಾರಿ ಮಧ್ಯದಲ್ಲೇ ಮೃತಪಟ್ಟಿದ್ದಾನೆ. ಪ್ರಕರಣ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.