ಕಾರ್ಖಾನೆಯ ಅಭಿವೃದ್ಧಿಗೆ ಸಚಿವರಿಗೆ ಮನವಿ
ಭದ್ರಾವತಿ: ಎಂ.ಪಿ.ಎಂ ಕಾಗದ ಮತ್ತು ಸಕ್ಕರೆ ಕಾರ್ಖಾನೆ ಉದ್ಯೋಗಿಗಳ ಸಂಘದ ಪದಾಧಿಕಾರಿಗಳು ಹಾಗೂ ಎಂ.ಪಿ.ಎಂ ಗುತ್ತಿಗೆ ಕಾರ್ಮಿಕರ ಸಂಘದ (ಎಚ್.ಪಿ.ಎಫ್) ಪದಾಧಿಕಾರಿಗಳು ಭಾನುವಾರ ಪ್ರಾಥಮಿಕ, ಪ್ರೌಢ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಅವರನ್ನು ಭೇಟಿಮಾಡಿ ಅವರನ್ನು ಅಭಿನಂದಿಸಿದರು.
ಈ ಸಂದರ್ಭದಲ್ಲಿ ಕಾರ್ಖಾನೆಯ ಅಭಿವೃದ್ಧಿ ವಿಷಯ ಚರ್ಚಿಸಿ ಅದರ ಬಗ್ಗೆ ತುರ್ತು ತೀರ್ಮಾನ ತೆಗೆದುಕೊಳ್ಳಬೇಕೆಂದು ಮನವಿ ಮಾಡಿರುವುದಾಗಿ ಎಂಪಿಎಂ ಕಾಗದ ಮತ್ತು ಸಕ್ಕರೆ ಕಾರ್ಖಾನೆ ಉದ್ಯೋಗಿಗಳ ಸಂಘದ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದಲ್ಲದೆ ಕಾರ್ಖಾನೆಯ ಕೆಲವು ಭ್ರಷ್ಟ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳುವಂತೆ ಸಚಿವರನ್ನು ಒತ್ತಾಯಿಸಲಾಯಿತು. ಹಾಗೂ ಕಾರ್ಮಿಕರಿಗೆ 2 ವರ್ಷದಿಂದ ತಡೆಹಿಡಿದಿರುವ ತುಟ್ಟಿಭತ್ಯೆ ಮತ್ತು 2013ರ ವಾರ್ಷಿಕ ಇಂಕ್ರಿಮೆಂಟ್ ಮತ್ತಿತರ ಸೌಲಭ್ಯಗಳನ್ನು ತಕ್ಷಣ ಬಿಡುಗಡೆ ಮಾಡಲು ಸರ್ಕಾರದ ಮೇಲೆ ಒತ್ತಡ ತರಲು ಸಹ ಮನವಿ ಮಾಡಲಾಯಿತೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದಕ್ಕೆ ಸ್ಪಂದಿಸಿದ ಸಚಿವರು ಶೀಘ್ರದಲ್ಲಿ ಎಂ.ಪಿ.ಎಂ ಕಾರ್ಖಾನೆಗೆ ಭೇಟಿ ನೀಡುತ್ತೇನೆಂದು ತಿಳಿಸಿದರಲ್ಲದೆ ಕಾರ್ಖಾನೆಯ ಅಭಿವೃದ್ಧಿಗೆ ಸಂಬಂಧಿಸಿದ ವರದಿ ಸಿದ್ಧಪಡಿಸಿ ನೀಡುವಂತೆ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

