ಕಂಪ್ಯೂಟರ್ ಖರೀದಿಯಲ್ಲಿನ ಅವ್ಯವಹಾರ ತನಿಖೆಯಾಗಲಿ
ಕ.ಪ್ರ.ವಾರ್ತೆ ತೀರ್ಥಹಳ್ಳಿ ಮೇ 28
ಕಂಪ್ಯೂಟರ್ ಖರೀದಿಯಲ್ಲಿ ಅವ್ಯವಹಾರ ನಡೆದಿದ್ದು, ಈ ಬಗ್ಗೆ ರಾಜ್ಯವ್ಯಾಪಿ ತನಿಖೆ ನಡಸಬೇಕು ಎಂದು ತಾಪಂ ಸಭೆಯಲ್ಲಿ ಒಮ್ಮತದಿಂದ ತೀರ್ಮಾನಿಸಲಾಯಿತು.
ಮಂಗಳವಾರ ನಡೆದ ಸಾಮಾನ್ಯ ಸಭೆಯಲ್ಲಿ ಈ ಹಿಂದಿನ ಸರ್ಕಾರದ ಅವಧಿಯಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಒದಗಿಸಲಾಗಿರುವ ಕಂಪ್ಯೂಟರ್ಗಳು ಕಳಪೆಯಾಗಿದ್ದು, ಸಾಕಷ್ಟು ಚರ್ಚೆಗೆ ಒಳಗಾಯಿತು. 2010ರ ಅವಧಿಯಲ್ಲಿ ಸರಬರಾಜು ಮಾಡಲಾಗಿರುವ ಕಂಪ್ಯೂಟರ್ ಮತ್ತು ಇದಕ್ಕಾಗಿ ನೀಡಿರುವ ಬ್ಯಾಟರಿಗಳು ಮೂಲೆ ಸೇರಿದ್ದು, ಉಪಯೋಗಕ್ಕೆ ಬಾರದಾಗಿವೆ. ಈ ಸರಬರಾಜು ಪ್ರಕರಣದ ಹಿಂದೆ ದೊಡ್ಡ ಜಾಲವೇ ಇದ್ದು, ಹಗರಣ ನಡೆದಿದೆ. ಈ ನಿಟ್ಟಿನಲ್ಲಿ ರಾಜ್ಯಮಟ್ಟದಲ್ಲಿ ಸಮಗ್ರ ತನಿಖೆಯಾಗಬೇಕು ಎಂದು ಸದಸ್ಯ ಎಚ್. ಆರ್ ವೆಂಕಟೇಶ್ ಅವರನ್ನು ಇತರ ಸದಸ್ಯರು ಬೆಂಬಲಿಸಿ ಈ ಬಗ್ಗೆ ಸರ್ವಾನುಮತದ ನಿರ್ಣಯ ತೆಗೆದುಕೊಳ್ಳಲಾಯಿತು.
173 ಶಿಕ್ಷಕರ ಕೊರತೆ: ಶಿಕ್ಷಣ ಇಲಾಖೆಯ ವಿಷಯಗಳ ಮೇಲೆ ಚರ್ಚಿತ ವಿಷಯಗಳಿಗೆ ಸಮಜಾಯಿಷಿ ನೀಡಿದ ಕ್ಷೇತ್ರ ಶಿಕ್ಷಣಾಧಿಕಾರಿಗಳು ತಾಲೂಕಿನಲ್ಲಿ 173 ಶಿಕ್ಷಕರ ಕೊರತೆ ಇದೆ. ಕೆಲವು ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕುಸಿದಿದೆ ಎಂದರು. ಕೋಣಂದೂರು ಭಾಗದ ಉರ್ದು ಶಾಲೆಯಲ್ಲಿ ಕೇವಲ ಇಬ್ಬರು ಮಕ್ಕಳಿದ್ದಾರೆ. 11 ಶಾಲೆಗಳಲ್ಲಿ ಅಗತ್ಯ ಶಿಕ್ಷಕರೇ ಇಲ್ಲವಾಗಿದೆ ಎಂದು ಹೇಳಿದರು.
ತಾಲೂಕಿನ ಹಲವಾರು ಕಡೆ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿದ್ದು, ಇಲ್ಲಿ ಅಗತ್ಯ ಕ್ರಮ ತೆಗೆದುಕೊಳ್ಳಲು ಸದಸ್ಯರು ಒತ್ತಾಯಿಸಿದರು. ಇದಕ್ಕೆ ಉತ್ತರಿಸಿದ ಜಿಪಂ ಅಸಿಸ್ಟೆಂಟ್ ಎಕ್ಸಿಕ್ಯುಟಿವ್ ಎಂಜಿನಿಯರ್ ತಾಲೂಕಿನಲ್ಲಿ 58 ಕಾಮಗಾರಿಗಳು ನಡೆಯುತ್ತಿವೆ. 16 ಬೋರ್ವೆಲ್, ಹಾಗೂ 35 ತೆರೆದ ಬಾವಿ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.
ಈ ಹಂತದಲ್ಲಿ ಧ್ವನಿಯೆತ್ತಿದ ಸದಸ್ಯ ಕೆಸ್ತೂರು ಮಂಜುನಾಥ ಯಾವುದೇ ಯೋಜನೆಗಳಿಗೆ ಮಂಜೂರಾದ ಹಣ ಮರಳಿ ಹೋಗದಂತೆ ಕ್ರಮ ತೆಗೆದುಕೊಳ್ಳಲು ಹೇಳಿದ
ಕೃಷಿ ಇಲಾಖೆ: ತಾಲೂಕಿನ ರೈತರ ಅನುಕೂಲಕ್ಕಾಗಿ 7,165 ಟನ್ ರಸಗೋಬ್ಬರ ಸರಬರಾಜಿಗೆ ಬೇಡಿಕೆ ಸಲ್ಲಿಸಲಾಗಿದೆ. ರೈತ ಸಂಪರ್ಕ ಕೇಂದ್ರಗಳಲ್ಲಿ ಅಗತ್ಯ ವಿರುವ ವಿವಿಧ ತಳಿಗಳ ಬಿತ್ತನೆ ಬೀಜ ದಾಸ್ತಾನು ಇದೆ ಎಂದು ಕೃಷಿ ಇಲಾಖಾಧಿಕಾರಿ ಹೇಳಿದರು.
ಅಧ್ಯಕ್ಷೆ ಜೀನಾವಿಕ್ಟರ್ ಈ ಬಗ್ಗೆ ಮಾತನಾಡಿ, ರೈತ ಸಂಪರ್ಕ ಕೇಂದ್ರಗಳಲ್ಲಿ ರೈತರಿಗೆ ಸಮರ್ಪಕ ಮಾಹಿತಿ ಸಿಗುತ್ತಿಲ್ಲ, ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿದರು.
ತಾಪಂ ಕಾರ್ಯನಿರ್ವಣಾಧಿಕಾರಿ ಪುಟ್ಟಸ್ವಾಮಿ, ಕಂದಾಯ ಇಲಾಖೆಯ ಅಧಿಕಾರಿ ಲಿಂಗಯ್ಯ ಸಭೆಯಲ್ಲಿ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

