ಶಿವಮೊಗ್ಗ

ಕೃಷಿ ಇಲಾಖೆಯೊಂದಿಗೆ ಬಾಂಧವ್ಯ ಅಗತ್ಯ

Published On :

ಕಪ್ರ ವಾರ್ತೆ, ಶಿವಮೊಗ್ಗ, ಮೇ 30
ರೈತರು ಕೃಷಿ ಚಟುವಟಿಕೆಗಳಲ್ಲಿ ಪ್ರಗತಿ ಸಾಧಿಸಬೇಕಾದರೆ ಕೃಷಿ ಸಂಬಂಧಿತ ಇಲಾಖೆಗಳೊಂದಿಗೆ ಉತ್ತಮ ಬಾಂಧವ್ಯ ಹೊಂದಿರಬೇಕು ಎಂದು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶಶಿಕಾಂತ್ ಸೆಂಥಿಲ್ ಅಭಿಪ್ರಾಯಪಟ್ಟರು.
2013-14ರ ಆತ್ಮ ಯೋಜನೆಯಡಿ ಕೃಷಿ ಇಲಾಖೆ ಮತ್ತು ಸಣ್ಣ ಕೃಷಿಕರ ಕೃಷಿ ವ್ಯಾಪಾರ ಸಂಘ ಆಶ್ರಯದಲ್ಲಿ ಗುರುವಾರ ಡಿಸಿಸಿ ಬ್ಯಾಂಕ್ ಆವರಣದಲ್ಲಿ ಆಯೋಜಿಸಿದ್ದ ಕೃಷಿ ವ್ಯಾಪಾರದ ಅಭಿವೃದ್ಧಿಗಾಗಿ ಕ್ರೊಢೀಕರಿಸಿದ ಬಂಡವಾಳ ಹೂಡಿಕೆ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ರೈತರ ಕೃಷಿ ಅಭಿವೃದ್ಧಿಗೆ ಮತ್ತು ಆರ್ಥಿಕ ಸಮತೋಲನ ಕಾಪಾಡಲು ಕೃಷಿ ಇಲಾಖೆಗಳು ಸಹಕರ ಮುಖ್ಯವಾಗುತ್ತದೆ ಎಂದರು.
ಮಾರುಕಟ್ಟೆ ಮಾಹಿತಿ ಅಗತ್ಯ: ಕೃಷಿ ಚಟುವಟಿಕೆಗಳ ಜೊತೆಯಲ್ಲಿಯೇ, ಕೃಷಿ ಉತ್ಪನ್ನಗಳನ್ನು ಉತ್ಪಾದಿಸುವ ಕೈಗಾರಿಕೆಗಳ ಜೊತೆಗೆ ಉತ್ತಮ ಸಂಬಂದವನ್ನಿಟ್ಟುಕೊಂಡಾಗ ಮಾತ್ರ ರೈತ ಪ್ರಗತಿ ಹೊಂದಲು ಸಾಧ್ಯ ಎಂದ ಅವರು, ಮಾರುಕಟ್ಟೆ ಕುರಿತಾದ ಕೆಲವು ವಿಚಾರಗಳನ್ನು ತಿಳಿದುಕೊಳ್ಳುವ ಮನೋಭಾವವನ್ನು ರೈತರು ಬೆಳೆಸಿಕೊಂಡು ಉತ್ತಮ ಲಾಭ ಪಡೆಯಲು ಪ್ರಯತ್ನಿಸಬೇಕು ಎಂದು ತಿಳಿಸಿದರು.
ರಾಜ್ಯದಲ್ಲಿ ವರ್ಷದಿಂದ ವರ್ಷಕ್ಕೆ ಅಡಕೆ ಬೆಳೆಯುವ ರೈತರು ಹೆಚ್ಚಾಗುತ್ತಿದ್ದು, ಉತ್ಪಾದನೆಯಲ್ಲಿಯೂ ಕೂಡ ಏರಿಕೆಯಾಗುತ್ತಿದೆ. ಅದೇ ರೀತಿಯಲ್ಲಿ ಮಲೆನಾಡು ಭಾಗದ ರೈತರು ತಾವು ಬೆಳೆಯುವ ಅಡಕೆಗೆ ತಮ್ಮದೇ ಆದ ಗುಣಮಟ್ಟ ಗುರುತಿಸಿ, ಅದಕ್ಕೊಂದು ಹೆಸರಿನ ಲೇಬಲ್ ನೀಡಿ, ಅದರಿಂದ ತಮ್ಮದೇ ಆದ ಮಾರುಕಟ್ಟೆಯನ್ನು ಸ್ಥಾಪಿಸಿಕೊಂಡಾಗ ಮಾತ್ರ ದಲ್ಲಾಳಿಗಳ ಹಾವಳಿಯನ್ನು ತಪ್ಪಿಸಬಹುದು ಎಂದರು.
ರೈತರೇ ದೇಶದ ಬೆನ್ನೆಲುಬು: ಯಾವುದೇ ಯೋಜನೆ ಸಮರ್ಪಕವಾಗಿ ಜಾರಿಯಾಗಲು ಸರ್ಕಾರದಿಂದ ಆರ್ಥಿಕ ಬೆಂಬಲ ದೊರೆಯುವುದು ಮುಖ್ಯ ಎಂದರಲ್ಲದೇ, ರೈತರೇ ದೇಶದ ಬೆನ್ನೆಲುಬಾಗಿದ್ದು, ಅವರ ಅಭಿವೃದ್ದಿಗೆ ನೆರವಾಗುವಂತಹ ಹಲವಾರು ಕಾರ್ಯಕ್ರಮಗಳನ್ನು ಸರ್ಕಾರ  ಜಾರಿಗೊಳಿಸಬೇಕು ಎಂದರು.
ಕಾರ್ಯಾಗಾರದಲ್ಲಿ ಜಿಲ್ಲಾಧಿಕಾರಿ ವಿಪುಲ್ ಬನ್ಸಾಲ್, ನವದೆಹಲಿಯ ಕೃಷಿ ಚಟುವಟಿಕೆಗಳ ಕ್ಷೇತ್ರಾಧಿಕಾರಿ ಪಾಡಿ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಡಾ. ಶಿವಮೂರ್ತಪ್ಪ, ತೋಟಗಾರಿಕೆ ಇಲಾಖೆಯ ಸಹಾಯಕ ಉಪನಿರ್ದೇಶಕ ವಿಶ್ವನಾಥ್, ಪಶುಸಂಗೋಪನಾ ಇಲಾಖೆಯ ಉಪನಿರ್ದೇಶಕ ರವೀಂದ್ರ, ಮೀನುಗಾರಿಕೆ ಹಿರಿಯ ಸಹಾಯಕ ನಿರ್ದೇಶಕ ಖಾನಾಪುರ ಇದ್ದರು.
--

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.