ಶಿವಮೊಗ್ಗ

ರಸ್ತೆ ಅಪಘಾತ: ವ್ಯಕ್ತಿ ಸಾವು

Published On :

ಸಾಗರ: ತಾಲೂಕಿನ ತಾಳಗುಪ್ಪ ಸಮೀಪದ ಬಲೇಗಾರು ತಿರುವಿನ ಬಳಿ ಗುರುವಾರ ಸಂಜೆ ನಡೆದ ರಸ್ತೆ ಅಪಘಾತವೊಂದರಲ್ಲಿ ಇಲ್ಲಿನ ಶಿವಗೋಪಾಲಕೃಷ್ಣ ದೇವಸ್ಥಾನದ ಆಡಳಿತ ಮಂಡಳಿ ಕಾರ್ಯದರ್ಶಿ ಮದನದಾಸ್ (52) ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ.
 ತಾಳಗುಪ್ಪದ ಬಟ್ಟೆ ಅಂಗಡಿಯೊಂದರಲ್ಲಿ ಮಗಳಿಗೆ ಯೂನಿಫಾರಂ ಬಟ್ಟೆ ಖರೀದಿಸಲು ಬೈಕಿನಲ್ಲಿ ಗುರುವಾರ ಸಂಜೆ ಸಾಗರದಿಂದ ತಾಳಗುಪ್ಪಕ್ಕೆ ಮದನದಾಸ್ ಮಗಳು ಮಹಿಮಾಳೊಂದಿಗೆ ತೆರಳಿದ್ದರು ಎನ್ನಲಾಗಿದೆ.
 ಬಟ್ಟೆ ಖರೀದಿಸಿ ಸಾಗರಕ್ಕೆ ವಾಪಾಸ್ಸಾಗುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿ 206ರ ಬಲೆಗಾರು ಗ್ರಾಮದ ತಿರುವಿನಲ್ಲಿ ಎದುರಿನಿಂದ ಬಂದ ಮಿನಿಲಾರಿ (407) ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಬೈಕಿನ ಹಿಂಬದಿ ಕುಳಿತಿದ್ದ ಮಗಳು ಮಹಿಮಾಳಿಗೆ ಗಂಭೀರ ಗಾಯಗಳಾಗಿದ್ದು ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಡಿಕ್ಕಿ ಹೊಡೆದ ವಾಹನ ಪರಾರಿಯಾಗಿದ್ದು ಯಾವುದು ಎಂದು ತಿಳಿದುಬಂದಿಲ್ಲ.
 ಪಟ್ಟಣದ ಅಶೋಕ ರಸ್ತೆಯಲ್ಲಿ ಜೆರಾಕ್ಸ್ ಅಂಗಡಿ ನಡೆಸುತ್ತಿದ್ದ ಮದನದಾಸ್ ಜನಾನುರಾಗಿಯಾಗಿದ್ದು ಜೆರಾಕ್ಸ್ ಅಂಗಡಿ ಮಾಲೀಕರ ಸಂಘದ ಹುಟ್ಟಿಗೆ ಕಾರಣಕರ್ತರಾಗಿದ್ದರು. ಸಾಗರದ ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ಸೇವೆ ಸಲ್ಲಿಸಿದ್ದರು. ವಿಷಯ ತಿಳಿದ ಜನರು ಉಪವಿಭಾಗೀಯ ಆಸ್ಪತ್ರೆ ಬಳಿ ಸಾಗರೋಪಾದಿಯಲ್ಲಿ ಜಮಾಯಿಸಿದ್ದರು.
 ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಹಾವು ಕಡಿದು ಬಾಲಕ ಸಾವು
ತಾಲೂಕಿನ ಹಳ್ಳಿಕೆರೆ ಗ್ರಾಮದಲ್ಲಿ ಬುಧವಾರ ಬೆಳಗ್ಗೆ ಜಮೀನಿನಲ್ಲಿ ಹುಲ್ಲಿನ ಮೆದೆ ತೆಗೆಯುವಾಗ ಗಗನ್ (12) ಎಂಬ ಬಾಲಕನ ಕೈಗೆ ಹಾವು ಕಡಿದು ಮೃತಪಟ್ಟಿದ್ದಾನೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.