ಆಕಾಶವಾಣಿಯಲ್ಲಿ ಡಿ. ಮಂಜುನಾಥ ಸಂದರ್ಶನ
ಶಿವಮೊಗ್ಗ: ಜೂನ್ 1 ಮತ್ತು 2ರಂದು ನಗರದ ರಾಷ್ಟ್ರೀಯ ಶಿಕ್ಷಣ ಸಂಸ್ಥೆಯ ಸಭಾಂಗಣ ಮತ್ತು ಕುವೆಂಪು ರಂಗಮಂದಿರದಲ್ಲಿ 8ನೇ ಜಿಲ್ಲಾ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಈ ಸಮ್ಮೇಳನದ ಸಿದ್ಧತೆ ಕುರಿತು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಿ. ಮಂಜುನಾಥ ಅವರೊಂದಿಗೆ ಮೇ 31ರಂದು ಭದ್ರಾವತಿಯ ಆಕಾಶವಾಣಿ ಕೇಂದ್ರದಲ್ಲಿ ಸಂದರ್ಶನ ಕಾರ್ಯಕ್ರಮ ಪ್ರಸಾರವಾಗಲಿದೆ.
ಕಲಾಕೃತಿ ಪ್ರದರ್ಶನ
ಶಿವಮೊಗ್ಗ: ಜೂನ್ 1 ಮತ್ತು 2ರಂದು ಶಿವಮೊಗ್ಗದಲ್ಲಿ ನಡೆಯಲಿರುವ 8ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ನಗರದ ಕುವೆಂಪು ರಂಗಮಂದಿರದಲ್ಲಿ ಜಿಲ್ಲೆಯ ಹೆಸರಾಂತ ಕಲಾವಿದರಿಂದ ಚಿತ್ರಕಲಾಕೃತಿ ಪ್ರಾತ್ಯಕ್ಷಿಕೆ ಮತ್ತು ಕಲಾಕೃತಿಗಳ ಪ್ರದರ್ಶನ ಕಾರ್ಯಕ್ರಮ ಏರ್ಪಡಿಸಲಾಗಿದೆ. ಜಿಲ್ಲೆಯ ಉದಯೋನ್ಮುಖ ಕಲಾವಿದ ಬಿ.ಜೆ. ರಾಜಶೇಖರ್, ಕಾತ್ಯಾಯಿನಿ ಸಿ.ಎಸ್. ಗರಗ, ಅಶೋಕ ವಾಲೀಕಾರ್, ಚಿಕ್ಕಮಠ, ಟಿ.ವಿ. ಸುರೇಶ, ಐ.ಬಿ. ಬಬಲೇಶ್ವರ, ರಾಜೇಶ್, ವೆಂಕಟೇಶ್, ಎಚ್. ಸಾಗರ್, ಮಾಲತೇಶ್ ಜಿ.ಎನ್. ಪ್ರವೀಣ, ಸಂಜಯ ಕಲಾಕೃತಿಗಳ ಪ್ರಾತ್ಯಕ್ಷಿಕೆ ಮತ್ತು ಚಿತ್ರಗಳ ಪ್ರದರ್ಶನ ನಡೆಸಿಕೊಡಲಿದ್ದಾರೆ.
ಆಸಕ್ತರು ತಮ್ಮ ಇತ್ತೀಚಿನ ಆಯ್ದ 2-4 ಕಲಾಕೃತಿಗಳೊಂದಿಗೆ ಸಂಚಾಲಕಿ ಸಿ.ಎಸ್. ಕಾತ್ಯಾಯಿನಿ ಇವರ ಬಳಿ ಹೆಸರು ನೋಂದಾಯಿಸಿಕೊಳ್ಳಬಹುದು. ವಿವರಗಳಿಗಾಗಿ-9480205759.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

