ಶಿವಮೊಗ್ಗ

ಗುಣಮಟ್ಟದ ಶಿಕ್ಷಣ ನೀಡಲು ಸಲಹೆ

Published On :

ಸೊರಬ: ಪ್ರಶಾಂತ ವಾತಾವರಣ ಹಾಗೂ ಗುಣಮಟ್ಟದ ಶಿಕ್ಷಣದ ಮೂಲಕ ಮಕ್ಕಳನ್ನು ಬೆಳೆಸುವುದರಿಂದ ಆ ಮಗುವಿಗೆ ಉತ್ತಮ ಭವಿಷ್ಯ ಕಲ್ಪಿಸಿಕೊಡಲು ಸಾಧ್ಯ ಎಂದು ಬಿಇಒ ಹಾಲಾನಾಯ್ಕ್ ತಿಳಿಸಿದರು.
ಪ್ರಸಕ್ತ ಸಾಲಿನ ಶಾಲಾ ಪ್ರಾರಂಭೋತ್ಸವಕ್ಕೆ ಶುಕ್ರವಾರ ಸೊರಬ ಸರ್ಕಾರಿ ಹೆಣ್ಣು ಮಕ್ಕಳ ಶಾಲೆಯಲ್ಲಿ ಚಾಲನೆ ನೀಡಿ ಮಾತನಾಡಿ, ಶಿಕ್ಷಣ ಕೇವಲ ಕಲಿಕೆಯಾಗದೆ ಜೀವನೋಪಾಯವೂ ಆಗಬೇಕು.
ಈ ನಿಟ್ಟಿನಲ್ಲಿ ಇಂದಿನ ಶಿಕ್ಷಣ ವ್ಯವಸ್ಥೆ ಪೂರಕವಾಗಿದ್ದು, ವಿದ್ಯಾರ್ಜನೆಗೆ ಅಗತ್ಯವಿರುವ ಎಲ್ಲ ಸೌಲಭ್ಯವನ್ನು ಸರ್ಕಾರ ತಲುಪಿಸುತ್ತಿದೆ. ಹಾಗಾಗಿ ಶಿಕ್ಷಣದ ಕಲಿಕೆಯ ಸದುಪಯೋಗವಾಗಬೇಕು.
ಮಕ್ಕಳ ವ್ಯಾಸಂಗಕ್ಕೆ ಶಿಕ್ಷಕ, ಇಲಾಖೆಯೊಂದಿಗೆ ಪೋಷಕರು ಹಾಗೂ ಸಾರ್ವಜನಿಕರು ಕೈಜೋಡಿಸಿ ಭವಿಷ್ಯದ ಪ್ರಜೆಗಳ ಮನೋ, ಬೌದ್ಧಿಕ ಸಾಮರ್ಥ್ಯವನ್ನು ಹೆಚ್ಚಿಸುವಲ್ಲಿ ನೆರವಾಗಬೇಕು ಎಂದರು.
 ಶಾಲಾ ಸಮಿತಿ ಅಧ್ಯಕ್ಷ ಜಿ.ಎಂ. ತೋಟಪ್ಪ ಅಧ್ಯಕ್ಷತೆ ವಹಿಸಿದ್ದರು. ಪಪಂ ಸದಸ್ಯ ಮಹೇಶಗೌಳಿ, ಮುಶಿ ಗಂಗಾಧರಪ್ಪ, ಶಿಸಂ ವಿ.ಬಿ. ಜಾವೂರು, ಹಾಲೇಶ್, ಸುರೇಶ್, ಮುಕ್ತಾಬಾಯಿ ಭಟ್, ಇಂದಿರಾ, ಸುನಂದ, ರೇಷ್ಮಾ, ತುಳಜಾ ಬಾಯಿ, ಕವಿತ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.