ಕನ್ನಡಕ್ಕೆ ಮೊದಲ ಆದ್ಯತೆ ನೀಡಿ: ಶಾಸಕ ಪ್ರಸನ್ನಕುಮಾರ
ಶಿವಮೊಗ್ಗ: ಕನ್ನಡ ಭಾಷೆಗೆ ಮೊದಲ ಆದ್ಯತೆ ನೀಡಿ, ಕನ್ನಡವನ್ನು ಪ್ರೀತಿಸಿ ಇತರೆ ಭಾಷೆ ಗೌರವಿಸಿ ಎಂದು ಶಾಸಕ ಕೆ.ಬಿ. ಪ್ರಸನ್ನಕುಮಾರ್ ಕರೆ ನೀಡಿದರು.
ಇಲ್ಲಿನ ಗಾರ್ಡನ್ ಏರಿಯಾದ ಸ್ನೇಹಮಯಿ ಯುವಕ ಸಂಘದಲ್ಲಿ ಕನ್ನಡ ರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಪ್ರತಿನಿತ್ಯ ನಾವು ನಮ್ಮ ದೈನಂದಿನ ವ್ಯವಹಾರದಲ್ಲಿ ಎಷ್ಟು ಸಾಧ್ಯವೋ ಅಷ್ಟು ಕನ್ನಡದಲ್ಲಿ ಮಾತನಾಡಿ ಕನ್ನಡ ಭಾಷೆಗೆ ಬೆಲೆ ಕೊಡಬೇಕೆಂದರು.
ನಮ್ಮ ಕರ್ನಾಟಕದ ಮಣ್ಣಿಗೆ ವಿಶೇಷವಾದ ಸ್ಥಾನಮಾನ ಇದೆ. ಅದರಲ್ಲೂ ಮಲೆನಾಡಿನಲ್ಲಿ ಹುಟ್ಟಿ ಇಲ್ಲಿಯ ಪರಿಸರ ಭಾಷೆ ಅನುಭವಿಸುತ್ತಿರುವ ನಾವೇ ಧನ್ಯರು. ಈ ಸಂದರ್ಭದಲ್ಲಿ ಕನ್ನಡಕ್ಕೋಸ್ಕರ ಹೋರಾಟ ಮಾಡಿದ ಗಣ್ಯರನ್ನು ಸ್ಮರಿಸುವುದು ಅತ್ಯಗತ್ಯ ಎಂದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ಪ್ರಸನ್ನಕುಮಾರ ಮಾತನಾಡಿ, ಕನ್ನಡ ಭಾಷೆಯನ್ನು ನಾವು ಎಷ್ಟು ಹೊಗಳಿದರು ಸಾಲದು. ಭಾಷೆಯ ವಿಶೇಷತೆಯೇ ಬೇರೆ. ಇಂದು ನಮ್ಮ ನೆಲದಲ್ಲಿ ನಮ್ಮ ಭಾಷೆಗೆ ಧಕ್ಕೆ ಬರುವಂತಾಗಿದೆ. ಈ ನಿಟ್ಟಿನಲ್ಲಿ ನಾವೆಲ್ಲಾ ಕನ್ನಡಿಗರು ಒಂದಾಗಿ ಹೋರಾಟ ಮಾಡಬೇಕಾಗಿದೆ ಎಂದು ತಿಳಿಸಿದರು.
ಅಧ್ಯಕ್ಷತೆಯನ್ನು ಸ್ನೇಹಮಯಿ ಯುವಕ ಸಂಘದ ಅಧ್ಯಕ್ಷರಾದ ಎಸ್. ಚಿನ್ನಪ್ಪ ವಹಿಸಿದ್ದರು. ರೋಟರಿ ವಿದ್ಯಾಸಂಸ್ಥೆಯ ಅಧ್ಯಕ್ಷ ಜಿ. ವಿಜಯಕುಮಾರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆರ್. ರವಿಕುಮಾರ, ಸ್ನೇಹಮಯಿ ಸಂಘದ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ, ಸಂದೀಪ್, ಬಿ. ಪೂಸ್ವಾಮಿ, ಹರೀಶ್, ಆಂಡವರ್, ಪದಾಧಿಕಾರಿಗಳು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

