ಶಿವಮೊಗ್ಗ

ನಾಡು ಕಟ್ಟುವ ಕೆಲಸಕ್ಕೆ ಕೈ ಜೋಡಿಸಿ

Published On :

ಸಾಗರ: ಕನ್ನಡ ರಾಜ್ಯೋತ್ಸವದ ಅಂಗವಾಗಿ ಐತಿಹಾಸಿಕ ಕೆಳದಿ ರಾಮೇಶ್ವರ ದೇವಸ್ಥಾನದಿಂದ ತರಲಾದ ವಿದ್ಯಾರಣ್ಯ ಜ್ಯೋತಿಯನ್ನು ಪಟ್ಟಣದ ರಾಣಿ ಚೆನ್ನಮ್ಮ ವೃತ್ತದಲ್ಲಿ ಬರಮಾಡಿಕೊಳ್ಳಲಾಯಿತು. ವೃತ್ತದಲ್ಲಿ ಉಪವಿಭಾಗಾಧಿಕಾರಿ ಡಾ. ಉದಯಕುಮಾರ ಶೆಟ್ಟಿ ಕನ್ನಡ ಧ್ವಜಾರೋಹಣ ನೆರವೇರಿಸಿದರು.
ಕನ್ನಡ ನಾಡು ಹಾಗೂ ಭಾಷೆಯ ಬೆಳವಣಿಗೆಗೆ ಪೂರಕವಾಗಿ ನಮ್ಮ ನಡೆನುಡಿಯಿರಬೇಕು. ನಾಡು ಕಟ್ಟುವ ಕೆಲಸದಲ್ಲಿ ಪ್ರತಿಯೊಬ್ಬರು ತಮ್ಮ ತಮ್ಮ ಜವಾಬ್ದಾರಿಯನ್ನು ಅರ್ಥಮಾಡಿಕೊಳ್ಳಬೇಕು ಎಂದರು. ತಾಪಂ ಅಧ್ಯಕ್ಷ ಗಂಟೆ ಹರೀಶ್, ಸದಸ್ಯ ಮಹಾಬಲೇಶ್ವರ ಕುಗ್ವೆ, ಬಗರ್ಹುಕುಂ ಸಮಿತಿ ಅಧ್ಯಕ್ಷ ಕಾಗೋಡು ಅಣ್ಣಪ್ಪ, ನಗರಸಭೆ ಸದಸ್ಯರಾದ ಸುಂದರಸಿಂಗ್, ರವಿ ಜಂಬಗಾರು, ಉಷಾ, ಎನ್.ಲಲಿತಮ್ಮ, ಉಷಾ, ಸಂತೋಷ್ ಶೇಟ್, ತಾ. ಕಸಾಪ ಅಧ್ಯಕ್ಷ ವಿ.ಟಿ. ಸ್ವಾಮಿ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಚ್.ಆರ್. ನಾಗಭೂಷಣ್, ತಹಸೀಲ್ದಾರ್ ಸಾಜಿದ್ ಅಹಮದ್ ಮುಲ್ಲಾ, ತಾಪಂ ಸಿಇಒ ಲಿಂಗಪ್ಪ, ವಿದ್ಯಾರಣ್ಯ ಯುವಕ ಸಂಘದ ಅಧ್ಯಕ್ಷ ಜೋಸೆಫ್ ಫರ್ನಾಂಡೀಸ್, ಉದಯ ಕಾಮತ್ ಇನ್ನಿತರರು ಹಾಜರಿದ್ದರು.
ಮೆರವಣಿಗೆ: ನಂತರ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ವಿದ್ಯಾರಣ್ಯ ಜ್ಯೋತಿಯ ಮೆರವಣಿಗೆ ನಡೆಯಿತು. ಮೆರವಣಿಗೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಕಂದಾಯ ಇಲಾಖೆ, ಅರಣ್ಯ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಸೇವಾಸಾಗರ ವಿದ್ಯಾಸಂಸ್ಥೆ, ವನಶ್ರೀ ವಿದ್ಯಾಸಂಸ್ಥೆ, ವಿನೋಬಾ ನಗರ ಶಾಲೆ, ಪ್ರಜ್ಞಾಭಾರತಿ ಶಾಲೆ, ಸುಭಾಷ್ ನಗರ ಶಾಲೆ, ಅಶೋಕ ನಗರ ಯುವಜನ ಸಂಘ, ಗೋದಾವರಿ ಸ್ವಸಹಾಯ ಸಂಘಗಳ 20ಕ್ಕೂ ಹೆಚ್ಚು ಸ್ತಬ್ಧ ಚಿತ್ರಗಳು, ತೀರ್ಥಹಳ್ಳಿಯ ನವರಸ ತಂಡದವರಿಂದ ಕೊರಗರ ನೃತ್ಯ ಇನ್ನಿತರ ಕಲಾ ಪ್ರಕಾರಗಳು ಪಾಲ್ಗೊಂಡಿದ್ದವು.
ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ನಗರಸಭೆ ವತಿಯಿಂದ ಪಟ್ಟಣದ ನೆಹರೂ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಉಪವಿಭಾಗಾಧಿಕಾರಿ ಡಾ.ಉದಯಕುಮಾರ ಶೆಟ್ಟಿ ಧ್ವಜಾರೋಹಣ ನೆರವೇರಿಸಿದರು. ಡಿವೈಎಸ್ಪಿ ಸುರೇಶ್, ಪೇಟೆಠಾಣೆ ವೃತ್ತ ನಿರೀಕ್ಷಕ ಕೃಷ್ಣಮೂರ್ತಿ ಇನ್ನಿತರರು ಹಾಜರಿದ್ದರು. ಆರಕ್ಷಕ, ಗೃಹರಕ್ಷಕ, ಎನ್.ಸಿ.ಸಿ. ಹಾಗೂ ವಿವಿಧ ಶಾಲೆಯ ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲನ ನಡೆಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.