ಶಿವಮೊಗ್ಗ

'ಮಕ್ಕಳಲ್ಲಿ ಕೈ ತೊಳೆಯುವ ಬಗ್ಗೆ ಜಾಗೃತಿ ಮೂಡಿಸಿ'

Published On :

ಕ.ಪ್ರ.ವಾರ್ತೆ, ಶಿವಮೊಗ್ಗ,  ನ.4
ಭಾರತ ಸರ್ಕಾರ, ನೆಹರು ಯುವ ಕೇಂದ್ರ ಜಿಲ್ಲಾ ಘಟಕ ಹಾಗೂ ವಾಸವಿ ವಿದ್ಯಾಲಯ ಆಶ್ರಯದಲ್ಲಿ ಶಾಲೆಯ ಆವರಣದಲ್ಲಿ ವಿಶ್ವ ಕೈತೊಳೆಯುವ ದಿನ ಆಚರಿಸಲಾಯಿತು.
ಕಾರ್ಯಕ್ರಮ ಉದ್ಘಾಟನೆಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಬಿ.ಸಿ. ಬಸವರಾಜಪ್ಪ ನೆರವೇರಿಸಿದರು. ನಂತರ ಮಾತನಾಡಿ, ದೇಶದಲ್ಲೇ ಇದೊಂದು ವಿಶೇಷವಾದ ಕಾರ್ಯಕ್ರಮ. ಇದರಿಂದ ಸಾರ್ವಜನಿಕರಲ್ಲಿ ಮತ್ತು ಮಕ್ಕಳಲ್ಲಿ ಕೈತೊಳೆಯುವ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಈ ದಿನವನ್ನು ವಿಶ್ವ ಕೈತೊಳೆಯುವ ದಿನಾಚರಣೆ ಎಂದು ಘೋಷಿಸಲಾಗಿದೆ. ಕೈ ಶುದ್ಧವಾಗಿದ್ದರೆ ಆರೋಗ್ಯ ಚೆನ್ನಾಗಿರುತ್ತದೆ. ಸ್ವಚ್ಛತೆಯೊಂದಿಗೆ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಕರೆ ನೀಡಿದರು.
ಜಿಲ್ಲಾ ಆರೋಗ್ಯ ಮೇಲ್ವಿಚಾರಕ ಎಂ. ಸತ್ಯನಾರಾಯಣ ಮಾತನಾಡಿ, ವಿಶ್ವ ಕೈತೊಳೆಯುವ ದಿನಾಚರಣೆ ಆಚರಿಸುವ ಉದ್ದೇಶ ಯಾವ ರೀತಿಯಲ್ಲಿ ಕೈತೊಳೆಯಬೇಕು, ಯಾವ ಸಂದರ್ಭದಲ್ಲಿ ಕೈತೊಳೆಯಬೇಕು ಕುರಿತು ಮಕ್ಕಳಿಗೆ ಮಾಹಿತಿ ನೀಡಿದರು.
ಶಾಲೆಯ ಕಾರ್ಯದರ್ಶಿ ಎಸ್.ಕೆ. ಶೇಷಾಚಲ, ಕೈತೊಳೆಯುವ ಬಗ್ಗೆ ಮಾಹಿತಿ ನೀಡಿ, ಶೇ. 100 ರಲ್ಲಿ 90 ಭಾಗ ಕಾಯಿಲೆಗಳು ಕೈತೊಳೆಯದೇ ಬರುತ್ತವೆ. ಗ್ರಾಮೀಣ ಪ್ರದೇಶದಲ್ಲಿ ಇಂತಹ ಸಮಸ್ಯೆಗಳನ್ನು ನಾವು ಕಾಣಬಹುದು.
ಭಾರತದ ಜನಸಂಖ್ಯೆಯಲ್ಲಿ ಶೇ. 50 ರಷ್ಟು ಜನ ಕೈತೊಳೆಯದೆ ಹಲವಾರು ಸೋಂಕುಗಳಿಗೆ ಬಲಿಯಾಗುತ್ತಾರೆ. ಮಕ್ಕಳಿಗೆ ಪ್ರತಿನಿತ್ಯ ಕೈತೊಳೆದುಕೊಂಡೆ ಆಹಾರ ಪದಾರ್ಥ ಸೇವನೆ ಮಾಡುವಂತೆ ಪೋಷಕರು ತಿಳಿಸಬೇಕು. ಸ್ವಚ್ಛತೆ ಕಡೆ ಹೆಚ್ಟು ಗಮನ ಹರಿಸಬೇಕು ಎಂದು ತಿಳಿಸಿದರು. ಶಾಲೆಯ ಮುಖ್ಯ ಶಿಕ್ಷಕಿ ವೀಣಾ, ವಿದ್ಯಾರ್ಥಿನಿ ಎ.ಎಸ್. ಅಶ್ವಿನಿ, ಕಿರಣ್‌ಕುಮಾರ್ ಮತ್ತಿತರರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.