ಶಿವಮೊಗ್ಗ

'ಮಕ್ಕಳ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಿ'

Published On :

ಸಾಗರ: ಮಕ್ಕಳಲ್ಲಿರುವ ಪ್ರತಿಭೆಯನ್ನು ಸೂಕ್ತಕಾಲದಲ್ಲಿ ಗುರುತಿಸಿ ಪ್ರೋತ್ಸಾಹಿಸದೆ ಹೋದರೆ ಅದು ಕಮರಿ ಹೋಗುವ ಸಾಧ್ಯತೆ ಇರುತ್ತದೆ ಎಂದು ಕೈಗಾರಿಕಾ ವಿಸ್ತರಣಾಧಿಕಾರಿ ಕೆ.ವಿ. ವೆಂಕಟೇಶ್ ಹೇಳಿದರು.
ಬೆಂಗಳೂರಿನ ಬಾಲಭವನ ಸೊಸೈಟಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಸೇವಾಸಾಗರ ವಿದ್ಯಾಸಂಸ್ಥೆ ಮಂಗಳವಾರ ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಪ್ರತಿಭಾವಂತ ಮಕ್ಕಳಿಗೆ ಕಲಾಶ್ರೀ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮಗುವಿಗೆ ಮನೆಯೇ ಮೊದಲ ಪಾಠಶಾಲೆ ಎನ್ನುವುದು ಸಾರ್ವಕಾಲಿಕ ಸತ್ಯ. ಆದರೆ, ಬದಲಾದ ಕಾಲಮಾನದಲ್ಲಿ ಅಪ್ಪ ಅಮ್ಮ ಇಬ್ಬರೂ ಕೆಲಸಕ್ಕೆ ಹೋಗುತ್ತಿರುವುದರಿಂದ ಬಹುತೇಕ ಕುಟುಂಬಗಳಲ್ಲಿ ಮಕ್ಕಳ ಬಗ್ಗೆ ಕಾಳಜಿ ವಹಿಸಲು ಆಗುತ್ತಿಲ್ಲ. ಇಂತಹ ಸಂದರ್ಭದಲ್ಲಿ ಶಿಕ್ಷಕರು ಮಕ್ಕಳ ಆಸಕ್ತಿ ಕ್ಷೇತ್ರವನ್ನು ಗುರುತಿಸಬೇಕು.
 ಇಂತಹ ಸ್ಪರ್ಧಾ ಕಾರ್ಯಕ್ರಮಗಳಿಗೆ ಅವರನ್ನು ಸಜ್ಜುಗೊಳಿಸಿ, ಅವರಲ್ಲಿನ ಪ್ರತಿಭೆ ಪ್ರದರ್ಶಿಸಲು ವೇದಿಕೆ ಕಲ್ಪಿಸಿಕೊಡಬೇಕು ಎಂದು ಸಲಹೆ ಮಾಡಿದರು.ಶಿಶು ಅಭಿವೃದ್ಧಿ ಅಧಿಕಾರಿ ಪಿ.ಜಿ. ಜೋಯಪ್ಪ ಮಾತನಾಡಿ, ಮಕ್ಕಳಲ್ಲಿನ ಕ್ರಿಯಾತ್ಮಕ ಚಟುವಟಿಕೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಬೆಂಗಳೂರಿನ ಬಾಲಭವನ ಸೊಸೈಟಿ ಕಲಾಶ್ರೀಯಂತಹ ಕಾರ್ಯಕ್ರಮವನ್ನು ಆಯೋಜಿಸುತ್ತಿದೆ.
 ಮಕ್ಕಳು ಇದರ ಸದುಪಯೋಗ ಪಡೆದುಕೊಳ್ಳಬೇಕು. 9 ರಿಂದ 16 ವರ್ಷದೊಳಗಿನ ಮಕ್ಕಳು ಇಂತಹ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಮೂಲಕ ತಮ್ಮ ಪ್ರತಿಭೆಯನ್ನು ಒರೆ ಹಚ್ಚುವ ಕೆಲಸ ಮಾಡಬೇಕು ಎಂದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಮುಂದಿನ ತಿಂಗಳು ಮಕ್ಕಳಿಗೆ ಸೃಜನಾತ್ಮಕ ಕಲೆ, ಸಾಹಿತ್ಯ, ನೃತ್ಯ, ಬರವಣಿಗೆಗೆ ಸಂಬಂಧಪಟ್ಟಂತೆ ಪ್ರತಿ ಶನಿವಾರ ಮತ್ತು ಭಾನುವಾರ ತರಬೇತಿ ನೀಡಲು ಉದ್ದೇಶಿಸಲಾಗಿದೆ. ಮಕ್ಕಳಿಗೆ ಉತ್ತಮ ತರಬೇತಿ ನೀಡುವುದರಿಂದ ಅವರು ಇನ್ನಷ್ಟು ಸಾಧನೆ ಮಾಡಲು ಅವಕಾಶವಾಗುತ್ತದೆ ಎಂದು ಹೇಳಿದರು.
 ಸೇವಾಸಾಗರ ವಿದ್ಯಾಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಕವಲಕೋಡು ವೆಂಕಟೇಶ್ ಅಧ್ಯಕ್ಷತೆ ವಹಿಸಿದ್ದರು. ತೀರ್ಪುಗಾರರಾಗಿ ಲೇಖಕ ವಿಲಿಯಂ, ರಂಗಕರ್ಮಿ ಸಿ.ಟಿ. ಬ್ರಹ್ಮಾಚಾರ್, ಕಲಾವಿದ ಮಾಧವ ಭಟ್, ಐಶ್ವರ್ಯ ಕಟ್ಟಿ, ಪ್ರೊ.. ಕೆ.ಆರ್. ಕೃಷ್ಣಯ್ಯ ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.