ಶಿವಮೊಗ್ಗ

ರಾಜ್ಯ ವಾಲಿಬಾಲ್ ತಂಡದ ಆಯ್ಕೆ 9ರಿಂದ

Published On :

ಶಿವಮೊಗ್ಗ: ಬೆಂಗಳೂರಿನ ಶ್ರೀ ಕಂಠಿರವ ಕ್ರೀಡಾಂಗಣದಲ್ಲಿ ನ.9 ಮತ್ತು 10ರಂದು ಬೆಳಿಗ್ಗೆ 9 ಗಂಟೆಗೆ ಕರ್ನಾಟಕ ರಾಜ್ಯದ 14 ವರ್ಷ ವಯೋವುತಿಯೊಳಗಿನ ಬಾಲಕ -ಬಾಲಕಿಯರ ವಾಲಿಬಾಲ್ ತಂಡದ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಜಿಲ್ಲೆಯ ಆಸಕ್ತ ಕ್ರೀಡಾಪಟುಗಳು ದಿನಾಂಕ 1.1.2000 ನಂತರ ಜನಿಸಿದವರು ಭಾಗವಹಿಸಬಹುದು. ಭಾಗವಹಿಸುವ ಕ್ರೀಡಾಪಟುಗಳು ಕಡ್ಡಾಯವಾಗಿ ಜನ್ಮದಿನಾಂಕ ಪ್ರಮಾಣ ಪತ್ರ ತರಬೇಕು ಎಂದು ಜಿಲ್ಲಾ ವಾಲಿಬಾಲ್ ಸಂಸ್ಥೆ ಕಾರ್ಯದರ್ಶಿ ಕೆ.ಎಸ್. ಶಶಿ ತಿಳಿಸಿದ್ದಾರೆ. ವಿವರಗಳಿಗಾಗಿ- 9880385776.
ಬಿಜೆಪಿ ಯುವಮೋರ್ಚಾಕ್ಕೆ ಆಯ್ಕೆ
ಶಿವಮೊಗ್ಗ: ಜಿಲ್ಲಾ ಯುವಮೋರ್ಚಾ ನೂತನ ಜಿಲ್ಲಾ ಅಧ್ಯಕ್ಷರಾಗಿ ಭವಾನಿರಾವ್ ರಾವ್ ಮೋರೆ ಅವರನ್ನು ನೇಮಿಸಿ ಪಕ್ಷದ ಜಿಲ್ಲಾಧ್ಯಕ್ಷ ಆಯನೂರು ಮಂಜುನಾಥ್ ನೇಮಕ ಮಾಡಿದ್ದಾರೆ. ಉಪಾಧ್ಯಕ್ಷರಾಗಿ ತೀರ್ಥಹಳ್ಳಿಯ ಹಸಿರುಮನೆ ನಂದನ್, ಹೊಸನಗರದ ಪ್ರಹ್ಲಾದ್, ಸೊರಬದ ಗುರುಸ್ವಾಮಿ, ಪ್ರಧಾನ ಕಾರ್ಯದರ್ಶಿಯಾಗಿ ಭದ್ರಾವತಿಯ ಸಾಯಿ ವರಪ್ರಸಾದ್, ಸಾಗರದ ಸುನೀಲ್, ಕಾರ್ಯದರ್ಶಿಯಾಗಿ ವಿಕ್ರಂ, ಆದರ್ಶ, ವಿಶ್ವಾಸ್, ಭಕೃಷ್ಣಮೂರ್ತಿ, ಸೊರಬದ ನಾಗರಾಜ ಗೌಡ್ರು, ಸೋಷಿಯಲ್ ಮೀಡಿಯಾ ವಿಭಾಗಕ್ಕೆ ಸಂತೋಷ್ ಗೌಡ ಅವರನ್ನು ನೇಮಿಸಿದ್ದಾರೆ.
ನಾಳೆ ಬಿಜೆಪಿ ಧರಣಿ
ಶಿವಮೊಗ್ಗ: ರಾಜ್ಯ ಸರ್ಕಾರವು ಅಲ್ಪಸಂಖ್ಯಾತ ಸಮುದಾಯಕ್ಕೆ ಜಾರಿಗೆ ತಂದಿರುವ ಶಾದಿಭಾಗ್ಯ ಯೋಜನೆಯನ್ನು ಎಲ್ಲಾ ವರ್ಗದ ಜನರಿಗೆ. ಅದರಲ್ಲೂ ಆರ್ಥಿಕವಾಗಿ ಹಿಂದುಳಿದ ಎಲ್ಲಾ ಹೆಣ್ಣುಮಕ್ಕಳಿಗೆ ನೀಡುವಂತೆ ಒತ್ತಾಯಿಸಿ ನ.7ರಂದು ಬೆಳಿಗ್ಗೆ 11.30ಕ್ಕೆ ಜಿಲ್ಲಾಧಿಕಾರಿಗಳ ಕಚೇರಿ ಎದುರು ಬಿಜೆಪಿ ಮಹಿಳಾ ಮೋರ್ಚಾ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ. ಈ ಪ್ರತಿಭಟನಾ ಕಾರ್ಯಕ್ರಮಕ್ಕೆ ಪಕ್ಷದ ಮಹಿಳಾ ಮೋರ್ಚಾದ ಪದಾಧಿಕಾರಿಗಳಆಗಮಿಸುವಂತೆ ಜಿಲ್ಲಾಧ್ಯಕ್ಷೆ ಶರಾವತಿ ರಾವ್ ವಿನಂತಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.