ಶಿವಮೊಗ್ಗ

ಶಾದಿಭಾಗ್ಯಕ್ಕೆ ಕನ್ನಡ ಶಬ್ದ ಬಳಸಲು ಆಗ್ರಹ

Published On :

ಕ.ಪ್ರ.ವಾರ್ತೆ ,  ಶಿವಮೊಗ್ಗ ,  ನ. 6
ರಾಜ್ಯ ಸರ್ಕಾರ ಜಾರಿಗೆ ತಂದಿರುವ ಶಾದಿಭಾಗ್ಯ ಯೋಜನೆಗೆ ಕನ್ನಡ ಶಬ್ದ ಬಳಸಿ, ಇದನ್ನು ಎಲ್ಲಾ ವರ್ಗಗಳಿಗೂ ವಿಸ್ತರಿಸಬೇಕು ಎಂದು ಒತ್ತಾಯಿಸಿ ಕರವೇ ಕಾರ್ಯಕರ್ತರು ಬುಧವಾರ ಗೋಪಿ ವೃತ್ತದಲ್ಲಿ ಪ್ರತಿಭಟಿಸಿದರು.
ನಗರದಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಿದ ಕಾರ್ಯಕರ್ತರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪ್ರತಿಕೃತಿ ದಹನ ಮಾಡಿದರು. ನಂತರ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಅರ್ಪಿಸಿದರು.
ಒಂದು ವರ್ಗಕ್ಕೆ ಸೀಮಿತ: ಮುಖ್ಯಮಂತ್ರಿ ಸಿದ್ದರಾಮಯ್ಯ ಮುಸ್ಲಿಂ ಹೆಣ್ಣು ಮಕ್ಕಳಿಗಾಗಿ ಜಾರಿಗೆ ತಂದಿರುವ ಶಾದಿಭಾಗ್ಯ ಯೋಜನೆ ಕೇವಲ ಒಂದು ವರ್ಗಕ್ಕೆ ಮಾತ್ರ ಸಿಮೀತವಾಗಿದೆ. ಇದನ್ನು ರಾಜಕೀಯ ಲಾಭಕ್ಕಾಗಿ ಮಾಡಲಾಗಿದೆ. ಈ ಮೂಲಕ 6 ಕೋಟಿ ಕನ್ನಡಿಗರಿಗೆ ಸರ್ಕಾರ ಮೋಸ ಮಾಡುತ್ತಿದೆ. ಈ ಯೋಜನೆಯನ್ನು ಕೂಡಲೇ ಎಲ್ಲಾ ವರ್ಗದವರಿಗೂ ವಿಸ್ತರಿಸಬೇಕು ಎಂದು ಕಾರ್ಯಕರ್ತರು ಒತ್ತಾಯಿಸಿದರು.
ಶಾದಿಭಾಗ್ಯ ಯೋಜನೆಗೆ ಕನ್ನಡ ಪದ ನೀಡಬೇಕು. ಶಾದಿ ಎಂಬುದು ಉರ್ದು ಭಾಷೆಯಾಗಿದೆ. ಇದನ್ನು ಕನ್ನಡ ಅರ್ಥ ಬರುವಂತೆ ಕಂಕಣ ಭಾಗ್ಯ ಅಥವಾ ಮಾಂಗಲ್ಯ ಭಾಗ್ಯ, ಮದುವೆ ಭಾಗ್ಯ ಎಂಬ ರೀತಿಯಲ್ಲಿ ಬದಲಾವಣೆ ಮಾಡಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.
ಎಲ್ಲರಿಗೂ ಸಿಗಲಿ: ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಗಳಾಗಿದ್ದಾಗ ಭಾಗ್ಯಲಕ್ಷ್ಮೀ ಯೋಜನೆಯನ್ನು ಎಲ್ಲಾ ವರ್ಗದ ಹೆಣ್ಣುಮಕ್ಕಳಿಗೆ ದೊರಕುವಂತೆ ಮಾಡಿದ್ದರು. ಅದೇ ರೀತಿ ಎಲ್ಲಾ ಧರ್ಮದ ಹೆಣ್ಣು ಮಕ್ಕಳಿಗೂ ಈ ಶಾದಿ ಭಾಗ್ಯ ದೊರಕುವಂತೆ ಮಾಡಬೇಕು. ಈ ಕುರಿತು ಹೋರಾಟ ಹಮ್ಮಿಕೊಂಡಿರುವ ಯಡಿಯೂರಪ್ಪ ಅವರಿಗೆ ಕರವೇ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಪ್ರತಿಭಟನಕಾರರು ತಿಳಿಸಿದರು.
ಕರವೇ ಜಿಲ್ಲಾಧ್ಯಕ್ಷ ಮಂಜುನಾಥ್ ಎಸ್. ಕೋಟ್ಯಾನ್, ಎಸ್. ವೆಂಕಟೇಶ್, ನಿಂಬೆಹಣ್ಣು ಮಂಜುನಾಥ್, ಶೈಲೇಶ್ ಕುಮಾರ್, ಕಿರಣ್ ಕುಮಾರ್, ಸುರೇಖಾ ಮೊದಲಾದವರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.