ನಾಳೆಯಿಂದ ಕನ್ನಡ ವನಚ ಸಾಹಿತ್ಯ, ಸಾಂಸ್ಕೃತಿಕ ಸಮ್ಮೇಳನ
ಶಿವಮೊಗ್ಗ: ಮೂರನೇ ಅಖಿಲ ಭಾರತ ಕನ್ನಡ ವನಚ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮ್ಮೇಳನ ನವೆಂಬರ್ 9 ಮತ್ತು 10ರಂದು ನಗರದ ಕುವೆಂಪು ರಂಗಮಂದಿರದಲ್ಲಿ ನಡೆಯಲಿದೆ.
ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಬಸವಕೇಂದ್ರದ ಶ್ರೀ ಬಸವ ಮರುಳಸಿದ್ದ ಸ್ವಾಮೀಜಿ, ವಚನದ ಬಗ್ಗೆ ಜಾಗೃತಿ ಮೂಡಿಸಲು ಹಾಗೂ ವಚನದಲ್ಲಿನ ಸಾಮಾಜಿಕ ಸಾಂಸ್ಕೃತಿಕ ಮೌಲ್ಯಗಳನ್ನು ಜನರಿಗೆ ತಲುಪಿಸುವ ಉದ್ದೇಶದಿಂದ ಈ ಸಮ್ಮೇಳನ ಆಯೋಜಿಸಿರುವುದಾಗಿ ತಿಳಿಸಿದರು.
ದಾನಪ್ರಕಾಶ ಎನ್. ತಿಮ್ಮಪ್ಪ ಸಾಮಾಜಿಕ ಮತ್ತು ಸಾಂಸ್ಕೃತಿಕ ವಿದ್ಯಾಟ್ರಸ್ಟ್ ಆಯೋಜಿಸಿರುವ ಈ ಸಮ್ಮೇಳನದ ಅಧ್ಯಕ್ಷರಾಗಿ ನಿವೃತ್ತ ಪ್ರೊಫೆಸರ್ ಡಾ.ಎಸ್.ಆರ್.ಗುಂಜಾಳ್ ಆಯ್ಕೆಯಾಗಿದ್ದಾರೆ ಎಂದು ತಿಳಿಸಿದ ಸ್ವಾಮೀಜಿ, ನ.9ರ ಬೆಳಿಗ್ಗೆ 9 ಗಂಟೆಗೆ ಕರ್ನಾಟಕ ಸಂಘದಿಂದ ಸಮ್ಮೇಳನಾಧ್ಯಕ್ಷರ ಮೆರವಣಿಗೆ ನಗರದ ಪ್ರಮುಖ ರಸ್ತೆಯಲ್ಲಿಸಾಗಿ ಕುವೆಂಪು ರಂಗಮಂದಿರ ತಲುಪಲಿದೆ. ನಂತರ 11 ಗಂಟೆಗೆ ಚಿತ್ರದುರ್ಗದ ಶಿವಮೂರ್ತಿ ಮುರುಘಾ ಶರಣರು ಸಮ್ಮೇಳನ ಉದ್ಘಾಟಿಸುವರು ಎಂದರು.
ಮಧ್ಯಾಹ್ನ 2 ಗಂಟೆಗೆ ಡಾ. ಎಸ್.ಆರ್.ಗುಂಜಾಳ ಅವರ ಬದುಕು ಮತ್ತು ಬರಹ ಕುರಿತು ವಿಚಾರಗೋಷ್ಠಿ ನಡೆಯಲಿದ್ದು, 3 ಗಂಟೆಗೆ ವಿಜಯ ಶ್ರೀಧರ್ ಅಧ್ಯಕ್ಷತೆಯಲ್ಲಿ ಮಹಿಳಾ ವಚನ ಚಿಂತನ ಗೋಷ್ಠಿ ನಡೆಯಲಿದೆ ಎಂದರು. ನ.10ರ ಬೆಳಿಗ್ಗೆ 9 ಗಂಟೆಗೆ ವಚನ ಚಿಂತನಾಗೋಷ್‌ಠಿಯು ಡಾಣಸಂಗಮೇಶ ಹಂಡಿಗೆ ಅಧ್ಯಕ್ಷತೆಯಲ್ಲಿ ನಡೆಯಲಿದೆ. 11.30ಕ್ಕೆ ಪ್ರೊ.ಎಚ್.ಎಸ್. ಪಾಟೀಲ್ ಅಧ್ಯಕ್ಷತೆಯಲ್ಲಿ ವಚನ ಚಿಂತನ ಗೋಷ್ಠಿ ನಡೆಯುವುದು. 2 ಗಂಟೆಗೆ ಹೊರನಾಡು ಕನ್ನಡಿಗರ ವಚನ ಚಿಂತನ ಗೋಷ್ಠಿ, ಸಂಜೆ 4 ಗಂಟೆಗೆ ಉಪನ್ಯಾಸ ನಡೆಯಲಿದ್ದು, 6.30ರಿಂದ ಪ್ರಶಸ್ತಿ ಪ್ರದಾನ, ಸಮಾರೋಪ ನಡೆಯಲಿದೆ. ಡಾ. ಚಿದಾನಂದಮೂರ್ತಿ ಸಮಾರೋಪ ಭಾಷಣ ಮಾಡಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

