ಶಿವಮೊಗ್ಗ

ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಕ್ಷಕರು: ಅಪ್ಪಾಜಿ

Published On :

ಭದ್ರಾವತಿ: ಮಕ್ಕಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಬಹು ಮುಖ್ಯ ಎಂದು ಶಾಸಕ ಎಂ.ಜೆ. ಅಪ್ಪಾಜಿ ಹೇಳಿದರು. ಅವರು ವಿಶ್ವೇಶ್ವರಯ್ಯ ವಿದ್ಯಾ ಸಂಸ್ಥೆಯಲ್ಲಿ ಶನಿವಾರ ಏರ್ಪಡಿಸಿದ್ದ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ, ಶಿಕ್ಷಕರು ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಆ ಮಾರ್ಗದಲ್ಲಿ ಅವರಿಗೆ ಪ್ರೋತ್ಸಾಹ ನೀಡಿ ಶಿಕ್ಷಣ ನೀಡಿದಾಗ ಮಕ್ಕಳು ಉತ್ತಮ ಭವಿಷ್ಯವನ್ನು ಕಾಣಲು ಸಾಧ್ಯವಾಗುತ್ತದೆ ಎಂದರು. ಬಿಇಒ ಸೋಮಶೇಖರಯ್ಯ, ಜಿಲ್ಲೆಯಲ್ಲಿ ಶಾಲಾ ಮಕ್ಕಳಿಗೆ ವಿತರಿಸಲಾಗುವ ಸೈಕಲ್ ವಿತರಣೆ ಮೊದಲ ಕಾರ್ಯಕ್ರಮ ಭದ್ರಾವತಿಯಲ್ಲಿ ನಡೆಯುತ್ತಿದೆ. ಮಕ್ಕಳಿಗೆ ನೀಡಿರುವ ಸೈಕಲನ್ನು ಪೋಷಕರು ಬೇರೆ ಕೆಲಸಗಳಿಗೆ ಬಳಸದೇ ಆ ಮಕ್ಕಳು ಹತ್ತನೇ ತರಗತಿ ಪೂರೈಸುವವರೆಗೂ ಅದೇ ಸೈಕಲ್‌ನ್ನು ಬಳಸುವಂತೆ ಅವರನ್ನು ಗಮನಿಸಬೇಕು ಎಂದರು.
4,402 ಸೈಕಲ್‌ಗಳು: ಈ ಬಾರಿ ತಾಲೂಕಿನಲ್ಲಿ ಒಟ್ಟು 4,402 ಸೈಕಲ್‌ಗಳನ್ನು ವಿದ್ಯಾರ್ಥಿಗಳಿಗೆ ನೀಡಲು ಸೈಕಲ್ ಜೋಡಣೆ ಕಾರ್ಯ ಭರದಿಂದ ಸಾಗಿದೆ. ಇದರಲ್ಲಿ 1,724 ಸೈಕಲ್ ಹೆಣ್ಣುಮಕ್ಕಳಿಗೆ ಉಳಿದ 1,678 ಸೈಕಲ್ ಬಾಲಕರಿಗೆ ನೀಡಲಾಗುವುದು, ಇಪ್ಪತ್ತು ಜನ ಕೆಲಸಗಾರರು ದಿನಕ್ಕೆ 750 ಸೈಕಲ್ ಗಳನ್ನು ಜೋಡಣೆ ಮಾಡುತ್ತಿದ್ದು, ಇದಕ್ಕೆ ಅಗತ್ಯವಾದ ಬಿಡಿ ಭಾಗಗಳು ಪಂಜಾಬಿನ ಲೂದಿಯಾನದಿಂದ ಸರಬರಾಜಾಗುತ್ತಿದೆ. ತಾಲೂಕಿನಲ್ಲಿ 82 ಶಾಲೆಗಳಿಗೆ ಸೈಕಲ್ 15 ದಿನಗಳಲ್ಲಿ ಪೂರ್ಣಗೊಳ್ಳಲಿದೆ ಎಂದರು. ಎನ್. ಕೃಷ್ಣಪ್ಪ ಮಾತನಾಡಿದರು.  ಸಂಸ್ಥೆಯ ಅಧ್ಯಕ್ಷ ಶಾಮಣ್ಣ ಅಧ್ಯಕ್ಷತೆ ವಹಿಸಿದ್ದರು. ರಂಗಸ್ವಾಮಿ, ಪ್ರಭು, ನಾಗರಾಜ್ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.