ಇಂದು ವೆಬ್ಸೈಟ್ ಲೋಕಾರ್ಪಣೆ
ಶಿವಮೊಗ್ಗ: ವಿಪ್ರ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಕಟ್ಟಡ ಹಾಗೂ ವೆಬ್ ತಾಣವನ್ನು ಲೋಕಾರ್ಪಣೆ ಮಾಡಲಾಗುವುದು ಎಂದು ಸಹಕಾರಿ ಸಂಘದ ಅಧ್ಯಕ್ಷ ಎ.ಆರ್. ಪ್ರಸನ್ನಕುಮಾರ್, ಸಿಇಓ ನಾರಾಯಣ ಮೂರ್ತಿ ತಿಳಿಸಿದರು.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನ.11 ರಂದು ಸಂಜೆ 5.30ಕ್ಕೆ ವಿನೋಬನಗರದ 1ನೇ ಹಂತದ ರಾಗಾ ಕಟ್ಟಡದಲ್ಲಿ ಆಯೋಜಿಸಿರುವ ಕಾರ್ಯಕ್ರಮವನ್ನು ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಉದ್ಘಾಟಿಸುವರು.
ಮುಖ್ಯ ಅತಿಥಿಗಳಾಗಿ ಶಾಸಕ ಕೆ.ಬಿ. ಪ್ರಸನ್ನಕುಮಾರ್, ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಅಧ್ಯಕ್ಷ ಗುರುನಾಥ್ ಜ್ಯಾಂತಿಕರ್, ವಕೀಲರ ಸಂಘದ ಅಧ್ಯಕ್ಷ ಅಶೋಕ್ ಜಿ. ಭಟ್ ಪಾಲ್ಗೊಳ್ಳುವರು ಎಂದರು.
2005-06 ರಲ್ಲಿ ಆರಂಭವಾದ ಸಂಸ್ಥೆಯು 2013ರ ಸೆಪ್ಟೆಂಬರ್ ಅಂತ್ಯಕ್ಕೆ 7.41 ಕೋಟಿ ಠೇವಣಿ ಸಂಗ್ರಹಿಸಿದೆ. 6.78 ಕೋಟಿ ವಿವಿಧ ರೀತಿಯ ಸಾಲ ಹಂಚಿಕೆ ಮಾಡಲಾಗಿದೆ. ಬ್ಯಾಂಕ್ನಲ್ಲಿ ಸಂಪೂರ್ಣ ಗಣಕೀಕರಣ ವ್ಯವಸ್ಥೆ ಮಾಡಲಾಗಿದೆ. ವಿವಿಧ ಠೇವಣಿಗಳು ಸಾಲ ಸೌಲಭ್ಯಗಳು ಲಭ್ಯವಿದೆ.
ಮಾರಾಟ ವಿಭಾಗ ಯೋಜನೆ ಮೂಲಕ ಕಲಬೆರಕೆ ಮುಕ್ತ ದಿನಬಳಕೆಯ ಸಾವಯವ ಹಾಗೂ ಇತರೆ ಸಂಸ್ಕರಿತ ಆಹಾರ ವಸ್ತುಗಳ ಮಾರಾಟ ಮಳಿಗೆ ನಡೆಸಲಾಗುತ್ತಿದೆ. ಇ- ಸ್ಟಾಂಪಿಂಗ್ ಪತ್ರ ಮಾರಾಟ, ವೆಸ್ಟ್ರನ್ ಯೂನಿಯನ್ ಮನಿಟ್ರಾನ್ಸ್ಫರ್ ವಿಮಾ ಯೋಜನೆ ಸೌಲಭ್ಯ ಒದಗಿಸಿದೆ ಎಂದು ತಿಳಿಸಿದರು.
ಗೋಷ್ಠಿಯಲ್ಲಿ ಸಂಸ್ಥೆಯ ನಿರ್ದೇಶಕ ದಿನೇಶ್ ಕುಮಾರ್ ಎನ್. ಗೋಪಾಲ್, ಪ್ರಭಾಕರ ಜೋಯ್ಸ್, ಎಸ್. ರತ್ನಾಕರ ಮತ್ತಿತರರು ಇದ್ದರು.
---
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

