ಶಿವಮೊಗ್ಗ

ಲಯನ್ಸ್ ಕ್ಲಬ್ ಜಿಲ್ಲಾ ಮಟ್ಟದ ಕ್ರೀಡಾ ಸ್ಪರ್ಧೆ

Published On :

ಶಿವಮೊಗ್ಗ: ಲಯನ್ಸ್ ಕ್ಲಬ್ ಜಿಲ್ಲಾ ಮಟ್ಟದ ಆಟೋಟ ಸ್ಪರ್ಧೆಗಳು ಭಾನುವಾರ ಇಲ್ಲಿನ ಆದಿಚುಂಚನಗಿರಿ ಶಾಲಾ ಆವರಣದಲ್ಲಿ ನಡೆದವು.
ಷಟಲ್ ಬ್ಯಾಡ್‌ಮಿಂಟನ್, ವಾಲಿಬಾಲ್, ಹಗ್ಗಜಗ್ಗಾಟ, ವಿಕೆಟ್‌ಗೆ ಬೌಲಿಂಗ್, 100 ಮೀಟರ್ ನಡಿಗೆ, ಗುಂಡು ಎಸೆತ, 50 ಮೀಟರ್ ಓಡುವ ಸ್ಪರ್ಧೆ, ಥ್ರೋಬಾಲ್, ಮ್ಯೂಸಿಕಲ್ ಛೇರ್ ಸೇರಿದಂತೆ ವಿವಿಧ ರಂಜನೀಯ ಆಟದಲ್ಲಿ ಲಯನ್ಸ್ ಹಾಗೂ ಲಯನೆಸ್ ಸದಸ್ಯರು ತೊಡಗಿಕೊಂಡು ಖುಷಿಪಟ್ಟರು.
ಕ್ರೀಡಾಕೂಟಕ್ಕೆ ಚಾಲನೆ ನೀಡಿದ ಅಂತರಾಷ್ಟ್ರೀಯ ಕ್ರೀಡಾಪಟು ಡಾ. ಸೂರ್ಯನಾರಾಯಣ, ಮಿತವಾದ ವ್ಯಾಯಾಮ ಹಾಗೂ ಕ್ರೀಡೆಯಲ್ಲಿ ಪಾಲ್ಗೊಳ್ಳುವುದರಿಂದ ಆರೋಗ್ಯ ವೃದ್ಧಿಸಿಕೊಳ್ಳಲು ಸಾಧ್ಯ ಹಾಗೆಯೇ, ಕ್ರೀಡೆಯಲ್ಲಿ ತೊಡಗಿಕೊಂಡಾಗ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಇದರಿಂದಾಗಿ ಯಾವುದೇ ರೋಗಗಳಿಲ್ಲದೆ ದೀರ್ಘಾಯುಷಿಗಳಾಗಿ ಬಾಳಲು ಸಾಧ್ಯ ಎಂದು ಹೇಳಿದರು.
ಇಂದಿನ ಮಕ್ಕಳೇ ನಮ್ಮ ಭವಿಷ್ಯದ ಭಾರತದ ನಿರ್ಮಾತೃಗಳಾಗಿದ್ದು, ಅವರನ್ನು ಸದೃಢರಾಗಿ ಬೆಳೆಸಬೇಕಾದ ಅನಿವಾರ್ಯತೆಯಿದೆ. ಈ ಹಿನ್ನೆಲೆಯಲ್ಲಿ ಬಾಲ್ಯದಿಂದಲೇ ಮಕ್ಕಳಿಗೆ ಶಿಕ್ಷಣದೊಂದಿಗೆ ಕ್ರೀಡಾ ಚಟುವಟಿಕೆಯಲ್ಲಿ ತೊಡಗಿಕೊಳ್ಳಲೂ ಅನುವು ಮಾಡಿಕೊಡಬೇಕು. ಆಗ ಮಾತ್ರ ಮಕ್ಕಳ ಸರ್ವಾಂಗೀಣ ಅಭಿವೃದ್ಧಿ ಸಾಧ್ಯ ಎಂದು ಅಭಿಪ್ರಾಯಪಟ್ಟರು.
ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಜಿಲ್ಲಾ ರಕ್ಷಣಾಧಿಕಾರಿ ಕೌಶಲೇಂದ್ರ ಕುಮಾರ್ ಮಾತನಾಡಿ, ವಯಸ್ಸಾದ ಮಾತ್ರಕ್ಕೆ ಕ್ರೀಡಾ ಕ್ಷೇತ್ರದಿಂದ ದೂರವಾಗಬೇಕು ಎಂಬ ಮನೋಭಾವ ಸರಿಯಲ್ಲ. ಜೀವನದಲ್ಲಿ ಶಿಸ್ತು ಹಾಗೂ ಸ್ವನಿಯಂತ್ರಣವಿದ್ದರೆ ವಯಸ್ಸಾದ ನಂತರವೂ ಕ್ರೀಡೆಯಲ್ಲಿ ಸಾಧನೆ ಮಾಡಲು ಸಾಧ್ಯವಿದೆ ಎಂದು ಹೇಳಿದರು.
ಜೀವನದಲ್ಲಿ ಎಂದಿಗೂ ಸಕಾರಾತ್ಮಕ ಭಾವನೆ ಹೊಂದಿರಬೇಕು. ಆಗ ಮಾತ್ರ ಗುರಿಯನ್ನು ಸಾಧಿಸಲು ಸಾಧ್ಯ. ಕ್ರೀಡಾಪಟುಗಳಲ್ಲಿ ಮಾತ್ರ ಸಕಾರಾತ್ಮಕ ಭಾವನೆ ಕಾಣಲು ಸಾಧ್ಯವಿದೆ. ಪ್ರತಿಯೊಬ್ಬರೂ ಕ್ರೀಡಾ ಕ್ಷೇತ್ರದಲ್ಲಿ ತೊಡಗಿಸಿಕೊಂಡಾಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯವೆಂದರು.
ಲಯನ್ಸ್ ಕ್ಲಬ್ ಜಿಲ್ಲಾ ಗವರ್ನರ್ ಎಚ್.ಎನ್. ಶಿವಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಸುರೇಶ್ ಪ್ರಭು, ಶ್ರೀಧರ, ಲಕ್ಷ್ಮೀ ಪ್ರಸನ್ನ ಕುಮಾರ್, ನಯನ್ಸ್ ಪಟೇಲ್, ಎಲ್. ದೇವರಾಜು ಮತ್ತಿತರರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.