ನಮೋ ಸಮಾವೇಶದ ಹಿನ್ನೆಲೆ ಬಿಜೆಪಿ ಪಾದಯಾತ್ರೆ
ಶಿವಮೊಗ್ಗ: ಬೆಂಗಳೂರಿನಲ್ಲಿ ನ.17ರಂದು ನಡೆಯಲಿರುವ ನರೇಂದ್ರಮೋದಿ ಸಮಾವೇಶದ ಹಿನ್ನೆಲೆಯಲ್ಲಿ ಸೋಮವಾರ ಜಿಲ್ಲಾ ಬಿಜೆಪಿ ಘಟಕ ನಗರದಲ್ಲಿ ಪಾದಯಾತ್ರೆ ನಡೆಸಿತು. ವಿಧಾನಪರಿಷತ್ ಸದಸ್ಯ ಆರ್.ಕೆ. ಸಿದ್ದರಾಮಣ್ಣ ನೇತೃತ್ವದ ತಂಡ ರಾಮಣ್ಣಶ್ರೇಷ್ಠಿ ಪಾರ್ಕಿನಿಂದ ಗಾಂಧಿಬಜಾರ್ ಮಾರ್ಗವಾಗಿ ಶಿವಪ್ಪ ನಾಯಕ ವೃತ್ತ, ನೆಹರೂ ರಸ್ತೆ ಮೂಲಕ ಗೋಪಿವೃತ್ತದವರೆಗೆ, ರಾಜ್ಯ ಸಭಾ ಸದಸ್ಯ ಆಯನೂರು ನೇತೃತ್ವದ ತಂಡ ಲಕ್ಷ್ಮಿ ಚಿತ್ರಮಂದಿರ ವೃತ್ತದಿಂದ ಎಸ್.ಆರ್.ರಸ್ತೆ ಮೂಲಕ ಜೈಲ್ ಸರ್ಕಲ್, ದುರ್ಗಿಗುಡಿ ಮಾರ್ಗವಾಗಿ ಗೋಪಿವತ್ತದಲ್ಲಿ ಸಂಪನ್ನಗೊಂಡಿತು.
ಮೋದಿ ಅಲೆ: ನಂತರ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದ ಜಿಲ್ಲಾಧ್ಯಕ್ಷ ಆಯನೂರು ಮಂಜುನಾಥ್, ದೇಶದಲ್ಲಿ ಮೋದಿ ಅಲೆ ಎದ್ದಿದೆ. ಯುವಕರಿಗೆ ಮೋದಿ ಅವರನ್ನು ಪ್ರಧಾನಿಯನ್ನಾಗಿ ಮಾಡಬೇಕೆಂಬ ಹಂಬಲ ಇದೆ. ಹಾಗಾಗಿ ರಾಜ್ಯದ ಎಲ್ಲಾ ಕಡೆಗಳಲ್ಲಿ ಸಾವಿರಾರು ಸಂಖ್ಯೆಯಲ್ಲಿ ಯುವಕರು, ಬಿಜೆಪಿ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಆಗಮಿಸುತ್ತಿದ್ದಾರೆ. ಆದರಿಂದ ಶಿವಮೊಗ್ಗ ಜನತೆ ನ.17 ಭಾನುವಾರ ನಡೆಯುವ ಸಮಾವೇಶಕ್ಕೆ ಆಗಮಿಸುವಂತೆ ಮನವಿ ಮಾಡಿದರು. ಜಿಲ್ಲೆಯಿಂದ 15-16 ಸಾವಿರ ಜನ ಕಾರ್ಯಕರ್ತರು ಸ್ವಯಂ ಪ್ರೇರಿತವಾಗಿ ಕಾರ್ಯಕ್ರಮದಲ್ಲಿ ಭಾಗವಹಿಸುವರು ಎಂದರು. ನಗರ ಬಿಜೆಪಿ ಅಧ್ಯಕ್ಷ ಎಸ್. ಜ್ಞಾನೇಶ್ವರ್, ಕಾರ್ಯದರ್ಶಿ ಎಸ್.ಎನ್. ಚನ್ನಬಸಪ್ಪ, ಪ್ರಧಾನ ಕಾರ್ಯದರ್ಶಿ ಎಸ್. ದತ್ತಾತ್ರಿ, ಸುಭಾಷ್, ಅಣ್ಣಪ್ಪ ಮತ್ತಿತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

